ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm