ಬ್ರೇಕಿಂಗ್ ನ್ಯೂಸ್
28-08-21 05:03 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 28 : ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕಾರಣಕ್ಕೆ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟ ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ರದ್ದು ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿದ ಸಚಿವರು, ಸುತ್ತೋಲೆ ವಾಪಸ್ ಪಡೆಯುವಂತೆ ಕುಲಪತಿ ಪ್ರೊ. ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.

ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಬಹಳ ವಿಶಾಲವಾಗಿರುತ್ತವೆ ನಿಜ. ಹಾಗೆಂದು, ವಿದ್ಯಾರ್ಥಿನಿಯರು ಓಡಾಡದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತ ಕ್ಯಾಂಪಸ್ ರೂಪಿಸಬೇಕು ಎಂದು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.

ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆಯ ಕಾರಣಕ್ಕೆ ಹೆಣ್ಣು ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಈ ಬಗ್ಗೆ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.
In an outrageous move, the University of Mysore has imposed restrictions on the movement of female students on campus after 6.30 pm from August 27 over the “safety of girl students”. This comes days after an MBA student was allegedly gangraped in Mysuru. No restrictions have been placed on male students.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm