ಬ್ರೇಕಿಂಗ್ ನ್ಯೂಸ್
04-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4 : ವಿದ್ಯುತ್ ಬಿಲ್ನಲ್ಲಿ ಉದ್ದೇಶಪೂರ್ವಕ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಸೇವೆಯಿಂದ ಅಮಾನತು ಮಾಡಿದ್ದಾರೆ.
ಮುಳಬಾಗಿಲು ಉಪ ವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬವರೇ ಅಮಾನತುಗೊಂಡ ಸಿಬ್ಬಂದಿ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆ ಕೆಲವು ಬಿಲ್ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್ ಮೊತ್ತವನ್ನು ಉದ್ದೇಶಪೂರ್ವಕ ಕಡಿಮೆ ಮಾಡಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಾದ ಆದಾಯದಲ್ಲಿ ನಷ್ಟ ಉಂಟು ಮಾಡುತ್ತಿದ್ದರು.

ಇವರು ಬೇರೆ, ಬೇರೆ ಐಪಿ ವಿಳಾಸ ಹೊಂದಿರುವ ಗಣಕ ಯಂತ್ರಗಳಲ್ಲಿ ತಮ್ಮ ಐಡಿ ಉಪಯೋಗಿಸಿ ವಂಚನೆ ಎಸಗಿದ್ದರು. ಇದಲ್ಲದೆ, 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ನಷ್ಟವಾಗಿತ್ತು. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
Bangalore Current Minister suspends three employees of Bescom for fraudental activities
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm