ಬ್ರೇಕಿಂಗ್ ನ್ಯೂಸ್
06-09-21 12:49 pm Headline Karnataka News Network ಕರ್ನಾಟಕ
ಬೆಳಗಾವಿ, ಸೆ.6: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಒಟ್ಟು 58 ವಾರ್ಡ್ ಗಳ ಚುನಾವಣೆಯಲ್ಲಿ ಬಿಜೆಪಿ 36 ಸ್ಥಾನಗಳನ್ನು ಗೆದ್ದಿದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಈಮೂಲಕ ಕಾಂಗ್ರೆಸಿನ ಸತೀಶ್ ಜಾರಕಿಹೊಳಿಗೆ ತೀವ್ರ ಮುಖಭಂಗವಾಗಿದೆ. ಎಂಇಎಸ್ ಧೂಳೀಪಟವಾಗಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಮಹಾನಗರ ಪಾಲಿಕೆಯಲ್ಲಿ ಏಕಾಂಗಿಯಾಗಿ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ 36, ಕಾಂಗ್ರೆಸ್ 9, ಜೆಡಿಎಸ್ 0, ಇತರರು 13 ಸ್ಥಾನ ಪಡೆದಿದ್ದಾರೆ.
ಇದೇ ವೇಳೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿಯೂ ಬಿಜೆಪಿ ಬಹುಮತಕ್ಕೆ ಹತ್ತಿರವಾಗಿದೆ. ಆದರೆ, ಇಲ್ಲಿ ಕಾಂಗ್ರೆಸ್ ಕೂಡ ಭಾರೀ ಫೈಟ್ ಕೊಡುವ ಲಕ್ಷಣ ಕಂಡುಬಂದಿದೆ. ಬಿಜೆಪಿ 39 ಸ್ಥಾನ ಗೆದ್ದರೆ, ಕಾಂಗ್ರೆಸ್ 26 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಪಕ್ಷೇತರ ಐದು, ಎಂಐಎಂಎಂ 1 ಸ್ಥಾನ ಗೆಲುವು ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 45 ಆಗಿರುವುದರಿಂದ ಬಿಜೆಪಿ ಅಧಿಕಾರ ಪಡೆಯುವುದು ಖಚಿತವಾಗಿದೆ.


ಕಲಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತವಾಗಿದೆ. ಒಟ್ಟು 55 ಸ್ಥಾನಗಳಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ ಗೆಲುವು ಕಂಡಿದ್ದರೆ, ಬಿಜೆಪಿ 20, ಜೆಡಿಎಸ್ 3, ಪಕ್ಷೇತರ 1 ಸ್ಥಾನ ಗೆದ್ದಿದ್ದಾರೆ. ರಾಜ್ಯದಲ್ಲಿ ಮೂರು ಪ್ರಮುಖ ಮಹಾನಗರ ಪಾಲಿಕೆಯ ಚುನಾವಣೆ ನಡೆದಿದ್ದು, ಎರಡರಲ್ಲಿ ಆಡಳಿತಾರೂಢ ಬಿಜೆಪಿ ಗೆಲುವು ಕಂಡಿದೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರು ಅತಿ ಹೆಚ್ಚು ಗೆಲುವು ಕಂಡಿದ್ದಾರೆ.
Karnataka Municipal Election Results 2021 LIVE Updates: Counting of votes is underway in Hubballi-Dharwad, Kalaburagi and Belagavi city municipal corporations, which had gone for poll on September 3. According to State Election Commission officials, 300 candidates are in fray in Kalaburagi for 55 seats whereas in Hubballi-Dharwad with 82 wards, 420 are contesting.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm