ಬ್ರೇಕಿಂಗ್ ನ್ಯೂಸ್
06-09-21 09:44 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.6 : ಅಜ್ಜಿ, ಮಗಳು, ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಂಬಂಧಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಕ್ಕಿಮನೆ ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಶರಣಾದವರನ್ನು ಮಕ್ಕಿಮನೆ ಗ್ರಾಮದ ಶಾರದಾ (70), ವೀಣಾ(49) ಹಾಗೂ ಶ್ರಾವ್ಯಾ(16) ಎಂದು ತಿಳಿದು ಬಂದಿದ್ದು, ವೃದ್ಧೆ ಶಾರದಾ ಅವರು ತನ್ನ ಮಗಳು ವೀಣಾ ಹಾಗೂ ಮೊಮ್ಮಗಳೊಂದಿಗೆ ಮನೆಯ ಒಂದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.

ಶಾರದಾ ಅವರ ಮಗಳು ವೀಣಾ ಅವರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿದ್ದು, ಮಗಳು ಶ್ರಾವ್ಯಾ ಎಸೆಸೆಲ್ಸಿ ಒದುತ್ತಿದ್ದಳು. ಸೋಮವಾರ ಬೆಳಗ್ಗೆ ಅಂಗನವಾಡಿ ಕೇಂದ್ರದ ಆಯಾ ಪೂರ್ಣಿಮಾ ಎಂಬವರು ಶಿಕ್ಷಕಿ ವೀಣಾ ಅವರಿಗೆ ಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಶಿಕ್ಷಕಿ ವೀಣಾ ಅವರ ಮನೆಗೆ ಬಂದು ಪರಿಶೀಲಿಸಿದ್ದಾರೆ. ಈ ವೇಳೆ ಮನೆಯ ಒಳಗಿನಿಂದ ಚಿಲಕ ಹಾಕಿದ್ದನ್ನು ಗಮನಿಸಿದ ಸ್ಥಳೀಯರು ಎಷ್ಟೇ ಕರೆದರೂ ಪ್ರತಿಕ್ರಿಯೆ ಬಾರದ್ದನ್ನು ಕಂಡು ಮನೆಯ ಹೆಂಚು ತೆಗೆದು ನೋಡಿದಾಗ ವೀಣಾ ಸೇರಿದಂತೆ ತಾಯಿ ಶಾರದಾ, ಮಗಳು ಶ್ರಾವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ವೀಣಾ ಅವರ ಪತಿ ಸುಧಾಕರ್ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿದ ಶೃಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆಯೋ, ಕೊಲೆಯೊ ಎಂಬ ಬಗ್ಗೆ ತನಿಖೆ ಆರಂಭಿಸಿದ್ದು, ವೀಣಾ ಪತಿ ಸುಧಾಕರ್ ಅವರ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Chikmagalur family of three commit suicide at home. Police suspect murder, husband introgarted.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm