ಬ್ರೇಕಿಂಗ್ ನ್ಯೂಸ್
22-09-21 09:23 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ 22: ನಗರದ ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣವೊಂದು ದಾಖಲಾಗಿದ್ದು, ಆರೋಪಿ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಉಬರ್ ಟ್ಯಾಕ್ಸಿ ಓಡಿಸುತ್ತಿದ್ದು, ಯುವತಿ ಎಚ್ಎಸ್ಆರ್ ಲೇಔಟ್ನಿಂದ ಮುರುಗೇಶ್ ಪಾಳ್ಯಕ್ಕೆ ಬುಧವಾರ ಮುಂಜಾನೆ 3.30ಕ್ಕೆ ಕ್ಯಾಬ್ ಬುಕ್ ಮಾಡಿದ್ದಳು. ಮುರುಗೇಶ್ ಪಾಳ್ಯಕ್ಕೆ ಬಂದ ತಕ್ಷಣ, ಕಾರ್ ಡೋರನ್ನು ಲಾಕ್ ಮಾಡಿ ಯುವತಿಯ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಅತ್ಯಾಚಾರ ಮಾಡಿದ ನಂತರ ಯುವತಿ ಕ್ಯಾಬ್ ಚಾಲಕನ ಫೋನ್ ಕಸಿದುಕೊಂಡಿದ್ದಾಳೆ. ತಕ್ಷಣ ಚಾಲಕ ಕ್ಯಾಬ್ನಿಂದ ಯುವತಿಯನ್ನು ಹೊರತಳ್ಳಿ, ಸ್ಥಳದಿಂದ ಪರಾರಿಯಾಗಿದ್ದ.
ಟೊಯೋಟಾ ಇಟಿಯಸ್ ಕೆಎ 01 ಎಎಫ್ 5345 ನಂಬರಿನ ಕಾರಿನಲ್ಲಿ ಅತ್ಯಾಚಾರ ಕೃತ್ಯ ನಡೆದಿದೆ ಎಂದು ಯುವತಿ ದೂರು ನೀಡಿದ್ದಳು. ಗಾಡಿ ನಿಂತಾಗ ಚಾಲಕ ದೇವರಾಜ್ ಎಂಬಾತ ಅತ್ಯಾಚಾರ ಎಸಗಿರುವುದಾಗಿ ದೂರು ದಾಖಲಾಗಿದ್ದು, ಮೂರು ಪೊಲೀಸ್ ಟೀಂನಿಂದ ಕಾರ್ಯಾಚರಣೆ ಮಾಡಿ, ಆರೋಪಿ ಚಾಲನನನ್ನು ಪತ್ತೆ ಹಚ್ಚಿ ತನಿಖೆ ನಡೆಸುತ್ತಿದ್ದಾರೆ.
ಡಿಸಿಪಿ ಶರಣಪ್ಪ ಮತ್ತು ಹೆಚ್ಚುವರಿ ಆಯುಕ್ತ ಮುರುಗನ್ರಿಂದ ವಿಚಾರಣೆ ಮಾಡುಲಾಗುತ್ತಿದ್ದು, ಈ ವೇಳೆ ತಾನು ಅತ್ಯಾಚಾರ ಎಸಗಿರುವುದನ್ನ ಚಾಲಕ ನಿರಾಕರಿಸಿದ್ದಾನೆ. ಪೊಲೀಸರು ಸತ್ಯಾಂಶ ಪರಿಶೀಲನೆ ನಡೆಸುತ್ತಿದ್ದು, ಪ್ರಾಥಮಿಕ ವಿಚಾರಣೆ ಬಳಿಕ ಸ್ಪಷ್ಟ ಚಿತ್ರಣ ತಿಳಿದುಬರಲಿದೆ.
ಈ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, "ಇಬ್ಬರ ನಡುವೆ ಮಾತುಕತೆ ನಡೆದಿದೆ. ಬಳಿಕ ಯುವತಿ ಚಾಲಕನನ್ನು ತಳ್ಳಿ ಹೊರಟಿದ್ದಾಳೆ. ಮೊಬೈಲ್ನಲ್ಲಿ ಕ್ಯಾಬ್ ರೇಟ್ ತೋರಿಸಿದ್ದಾರೆ. ಆ ಬಳಿಕ ಮೊಬೈಲ್ ಕಿತ್ತುಕೊಂಡು ಯುವತಿ ಹೋಗಿದ್ದಾರೆ. ಕ್ಯಾಬ್ ಹಣವನ್ನು ಯುವತಿಯಿಂದ ಚಾಲಕ ಪಡೆದಿಲ್ಲ. ಯುವತಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದು, ಪಿಜಿಯಲ್ಲಿ ವಾಸವಾಗಿದ್ದಾಳೆ. ಆ ಬಳಿಕ ಇಬ್ಬರ ನಡುವೆ ಏನಾಗಿದೆ ಗೊತ್ತಿಲ್ಲ. ಚಾಲಕ ರೇಪ್ ಮಾಡಿಲ್ಲ ಅಂತಿದ್ದಾನೆ. ವಿಚಾರಣೆ ನಡೆಯುತ್ತಿದೆ. ಸತ್ಯಾಂಶ ಪರಿಶೀಲನೆ ನಡೆಸುತ್ತಿದ್ದೇವೆ. ಘಟನೆ ಸಂಬಂಧ ಇನ್ನೂ ಎಫ್ಐಆರ್ ದಾಖಲಾಗಿಲ್ಲ. ವಿಚಾರಣೆ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ," ಎಂದು ತಿಳಿಸಿದ್ದಾರೆ.
ಯುವತಿ ಕುಡಿದ ಮತ್ತಿನಲ್ಲಿದ್ದಳು;
ಇತ್ತ ಕ್ಯಾಬ್ ಚಾಲಕ, ಯುವತಿ ಕುಡಿದ ಮತ್ತಿನಲ್ಲಿದ್ದಳು. ಅರೆಪ್ರಜ್ಞೆ ಅವಸ್ಥೆಯಲ್ಲಿದ್ದ ಯುವತಿ, ಮನೆ ಜಾಗ ಬಂದರೂ ಇಳಿಯಲಿಲ್ಲ. ಹೀಗಾಗಿ ಆಕೆಯನ್ನು ಇಳಿಸಲು ಹೋದೆ. ಆಗ ಆಕೆ ನನ್ನ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾಳೆ ಎಂದು ತಿಳಿಸಿದ್ದಾರೆ. ಸದ್ಯ ಘಟನೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
The police, on Wednesday, arrested a taxi driver after a 24-year-old woman filed a complaint alleging that he raped her earlier in the morning. Within hours of the woman filing the complaint, the Jeevan Bima Nagar police tracked down and arrested the cab driver. The woman, who works as a manager at a restaurant in the city, claimed she had been to a party at a friend’s house in HSR Layout. She booked a cab to her apartment at Murugeshpalya at around 3.20 a.m.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm