ಬ್ರೇಕಿಂಗ್ ನ್ಯೂಸ್
07-10-21 11:56 am Mangaluru Correspondent ಕರ್ನಾಟಕ
ಮೈಸೂರು, ಅ. 7: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದ್ಧಿ ಎಸ್.ಎಂ. ಕೃಷ್ಣ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.
ಗುರುವಾರ ಬೆಳಗ್ಗೆ 8.30ರ ತುಲಾ ಲಗ್ನದಲ್ಲಿ ಮೈಸೂರು ದಸರಾ ಮಹೋತ್ಸವ 2021ಕ್ಕೆ ಎಸ್. ಎಂ. ಕೃಷ್ಣ ದೀಪ ಬೆಳಗಿ ಚಾಲನೆ ನೀಡಿದರು. ನಾಡ ದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಸಚಿವರಾದ ಆರ್. ಅಶೋಕ, ಬಿ. ಸಿ. ಪಾಟೀಲ್, ಡಾ. ಸುಧಾಕರ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದಸರಾ ಉದ್ಘಾಟಿಸಿ ಸಂದೇಶ ನೀಡಿದ ಎಸ್.ಎಂ.ಕೃಷ್ಣ, "ಮನುಕುಲಕ್ಕೆ ಎದುರಾದ ಕೊರೊನಾ ಪಿಡುಗಿನಿಂದ ರಕ್ಷಣೆ ಮಾಡಬೇಕು ಎಂದು ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ. ದೇಶ ಕೋವಿಡ್ ಸೇರಿದಂತೆ ಅನೇಕ ಸಮಸ್ಯೆಗಳಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ಕಾಪಾಡುವ ಏಕೈಕ ಆಸರೆ ತಾಯಿ ಚಾಮುಂಡೇಶ್ವರಿ ದೇವಿಯೇ ಆಗಿದ್ದಾಳೆ. ಚಾಮುಂಡೇಶ್ವರಿ ಎಲ್ಲರ ಮೇಲೂ ಕೃಪೆ ನೀಡಿ ಹರಸಲಿ ಎಂದು ಪ್ರಾರ್ಥಿಸಿದರು.
ನನ್ನದು ಯಾವ ಜನ್ಮದ ಪುಣ್ಯವೋ ಏನೋ? ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಅವರ ತಂದೆ ಜೊತೆ ಕೆಲಸ ಮಾಡಿದ ಸೌಭಾಗ್ಯ ನನ್ನದು. ಅತ್ಯಂತ ಗೌರವಯುತವಾಗಿ ಈ ಕ್ಷಣವನ್ನು ನನ್ನದಾಗಿಸಿದ್ದೀರಿ. ನಿಮಗೆ ನನ್ನ ಅನಂತ ಧನ್ಯವಾದಗಳು" ಎಂದು ಎಸ್. ಎಂ. ಕೃಷ್ಣ ದಸರಾ ಉದ್ಘಾಟನೆಗೆ ಅವಕಾಶ ಕೊಟ್ಟ ಸಿಎಂ ಬೊಮ್ಮಾಯಿ ಅವರನ್ನು ಅಭಿನಂದಿಸಿದರು. ದಸರಾ ಮತ್ತು ಮೈಸೂರು ಎರಡೂ ಒಟ್ಟೊಟ್ಟಿಗೆ ಬರುವ ಶಬ್ಧ. ದಸರಾವನ್ನು ಮೈಸೂರು ಅರಸರು ಸಂಸ್ಥಾನದ ಪ್ರಗತಿಯನ್ನು ದೇಶಕ್ಕೆ ತೋರಿಸಲು ಹಾಗೂ ಜನರಲ್ಲಿ ಧಾರ್ಮಿಕ ಮತ್ತು ನೈತಿಕ ಪ್ರಜ್ಞೆ ಮೂಡಿಸಲು ಬಳಸಿಕೊಂಡಿದ್ದರು. ಅದೇ ಪರಂಪರೆಯನ್ನು ಈಗಲೂ ನಾವು ಮುಂದುವರೆಸಬೇಕಾಗಿದೆ ಎಂದರು.
ಮೈಸೂರಿನ ಜೊತೆಯಲ್ಲೇ ಬೆಳೆದಿದ್ದೇನೆ. 12 ವರ್ಷ ಇದ್ದಾಗಲೇ ನಮ್ಮ ತಂದೆ ಓದಲು ಕಳುಹಿಸಿಕೊಟ್ಟಿದ್ದರು. ಇಲ್ಲಿನ ಒಂಟಿಕೊಪ್ಪಲು ಶಾಲೆಯಲ್ಲಿ ಓದಿ, ಮಹಾಜನ ಶಾಲೆ, ಯುವರಾಜ ಕಾಲೇಜು, ಮಹಾರಾಜ ಕಾಲೇಜಿನಲ್ಲಿ ಕಲಿತೆ. ಪ್ರತಿದಿನ ಚಾಮುಂಡಿ ಬೆಟ್ಟ ನೋಡುತ್ತಿದ್ದೆ, ಕೈ ಮುಗಿಯುತ್ತಿದೆ. ದಸರಾ ಆ ವೇಳೆ ಸಂಭ್ರಮದಿಂದ ನಡೆಯುತ್ತಿತ್ತು. ರಾಜ್ಯದ ನಾನಾ ಕಡೆ ಹಾಗೂ ವಿದೇಶದಿಂದ ಜನರು ಬರುತ್ತಿದ್ದರು. ಪ್ರಜಾಪ್ರತಿನಿಧಿ ಮೇಳ ಜಗನ್ಮೋಹನ ಅರಮನೆಯಲ್ಲಿ ನಡೆಯುತ್ತಿತ್ತು ಎಂದು ಎಸ್.ಎಂ. ಕೃಷ್ಣ ಭಾವುಕರಾಗಿ ಹಳೆಯದನ್ನು ಸ್ಮರಿಸಿದರು.
ಕುಸ್ತಿಗೆ ಹೆಸರಾಗಿದ್ದ ಮೈಸೂರು ದಸರಾ
ಮೈಸೂರು ಕುಸ್ತಿಗೆ ಹೆಸರಾಂತ ಪಟ್ಟಣವಾಗಿತ್ತು. ಸಾಹುಕಾರ್ ಚೆನ್ನಯ್ಯ ಕುಸ್ತಿಗೆ ಹೆಚ್ಚಿನ ಸವಲತ್ತು ನೀಡುತ್ತಿದ್ದರು. ವಸ್ತುಪ್ರದರ್ಶನ ನೋಡಲು ಸಹಸ್ರಾರು ಜನ ಬರುತ್ತಿದ್ದರು. ನಮ್ಮನ್ನು ಪುಳಕಗೊಳಿಸುವ ಹಲವಾರು ಕಾರ್ಯಕ್ರಮ ನಡೆಯುತ್ತಿದ್ದವು. ಯದುವಂಶದವರು ದಸರಾ ಉತ್ಸವವನ್ನು ನಾಡಹಬ್ಬವಾಗಿಸಲು ಶ್ರಮಿಸಿದ್ದಾರೆ. ನಾಲ್ವಡಿ ಒಡೆಯರ್, ಜಯಚಾಮರಾಜ ಒಡೆಯರ್ ಕೊಡುಗೆ ಅಪಾರ. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆಯೂ ಇದೆ. ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಮೈಸೂರು ದಸರಾಕ್ಕೆ 800 ವರ್ಷಗಳ ಇತಿಹಾಸ
ಮೈಸೂರಿನ ದಸರಾ ಉತ್ಸವಕ್ಕೆ 800 ವರ್ಷಗಳ ಇತಿಹಾಸವಿದೆ. ವಿಜಯನಗರದ ಅರಸರು ಈ ದಸರಾವನ್ನು ತಮ್ಮ ಶಕ್ತಿ ಪ್ರದರ್ಶನ, ವಿದೇಶಿಯರ ಭೇಟಿ ಮಾಡುವುದು ಮತ್ತು ಹೊಸ ದಿಗ್ವಿಜಯಕ್ಕೆ ಹೋಗಲು ಮುಹೂರ್ತವನ್ನು ನಿಗದಿ ಮಾಡುವುದಕ್ಕೆ ಉಪಯೋಗಿಸಿಕೊಳ್ಳುತ್ತಿದ್ದರು ಎಂದು ಎಸ್. ಎಂ. ಕೃಷ್ಣ ಹೇಳಿದರು. "ವಿಜಯನಗರದ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ಹಂಪಿಯಲ್ಲಿ ದಸರಾ ಆಚರಣೆಗಾಗಿ ಮಹಾನವಮಿ ದಿಬ್ಬವನ್ನು ನಿರ್ಮಿಸಲಾಗಿತ್ತು. ಅಲ್ಲಿ ನವರಾತ್ರಿಯ 10 ದಿನಗಳ ಕಾಲವೂ ಕ್ರೀಡೆ, ಸಾಹಸ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು ಎಂದರು.
Former Chief Minister SM Krishna inaugurates Mysore Dasara celebrations at Chamundi temple in Mysore. The 400 year old Navaratri celebrations will conclude on Vijayadashami day. Navaratri is Karnataka’s State festival.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm