ಬ್ರೇಕಿಂಗ್ ನ್ಯೂಸ್
27-10-21 10:29 am Headline Karnataka News Network ಕರ್ನಾಟಕ
ಹಾಸನ, ಅ.27 : ಶಿಕ್ಷಣ ವ್ಯವಸ್ಥೆ ಬದಲಿಸಿ ಎಂದು ಮುಖ್ಯಮಂತ್ರಿಗೆ ಮನವಿ ಮಾಡಿ ವಿಡಿಯೋ ಮಾಡಿಟ್ಟು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ. ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ದಾರಿ ದೀಪವಾಗಲಿ ಅಂತ ಸಾಯುವ ಮುನ್ನ ವಿಡಿಯೋ ಮಾಡಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.
ಹೇಮಂತ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಹೇಮಂತ್, ಅರಸೀಕೆರೆ ತಾಲೂಕಿನ ಹಿರಿಯಾಳು ನಿವಾಸಿ.
ನನ್ನ ಸಾವಿನ ನಂತರ ಅಂಗಾಂಗ ದಾನ ಮಾಡಿ. ನನ್ನ ಅಂತ್ಯಕ್ರಿಯೆಯಲ್ಲಿ ಸಿಎಂ, ಶಿಕ್ಷಣ ಸಚಿವರು, ಆದಿಚುಂಚನಗಿರಿ ಶ್ರೀಗಳು ಭಾಗಿಯಾಗಬೇಕು ಎಂದು ಮನವಿ ಮಾಡಿರುವ ಹೇಮಂತ್, 13 ನಿಮಿಷದ ವಿಡಿಯೋ ಮಾಡಿ ನೇಣಿಗೆ ಕೊರಳೊಡ್ಡಿದ್ದಾನೆ. ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸೈಬರ್ ಸೆಂಟರ್ನಲ್ಲಿ ಕೆಲಸ ಮಾಡಬಹುದು ಅಷ್ಟೇ. ಆದರೆ ನನ್ನಪ್ಪ ಶಿಕ್ಷಕರು. ಅವರ ವಿದ್ಯಾರ್ಥಿಗಳು ದೊಡ್ಡ ಸಾಧನೆ ಮಾಡಿದ್ದಾರೆ. ಹಿಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅದು ಸಾಧ್ಯವಿತ್ತು. ಆದರೆ ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಸಾಧ್ಯವೇ ಇಲ್ಲ. ಸಿಎಂ, ಶಿಕ್ಷಣ ಇಲಾಖೆ, ವಿಟಿಯು, ವಿಸಿ ಎಲ್ಲರೂ ಚಿಂತಿಸಿ. ಎಲ್ಲಾ ರಾಜಕೀಯ ಪಕ್ಷದ ಗಣ್ಯ ನಾಯಕರು ಶಿಕ್ಷಣ ಸುಧಾರಣೆಗೆ ಸಹಕರಿಸಿ ಅಂತ ಕೋರಿದ್ದಾನೆ.
ನನ್ನ ಸಾವು ವ್ಯರ್ಥ ಆಗಲ್ಲ. ಯಾರಾದರೂ ಒಬ್ಬರ ಬಲಿದಾನ ಆಗಲೇ ಬೇಕಿದೆ. ಇದರಿಂದ ನಾನು ಬದಲಾವಣೆಗೆ ಬುನಾದಿ ಹಾಕುವ ಕೆಲಸ ಮಾಡಿದ್ದೇನೆ. ಅಪ್ಪ ಅಮ್ಮ ಐ ಲವ್ ಯೂ, ನಾನು ನಿಮ್ಮನ್ನ ಮಿಸ್ ಮಾಡಿಕೊಳ್ತೀನಿ. ಈ ವಿಡಿಯೋವನ್ನು ನ್ಯೂಸ್ ಚಾನಲ್ನಲ್ಲಿ ಪ್ರಸಾರ ಮಾಡಿ. ಎಲ್ಲರೂ ಈ ವಿಡಿಯೋವನ್ನು ನೋಡಲಿ ಅಂತ ವಿದ್ಯಾರ್ಥಿ ಹೇಮಂತ್ ಮನವಿ ಮಾಡಿದ್ದಾನೆ. ನನ್ನ ಸಾವಿನ ನಂತರ ಅಪ್ಪ ಅಮ್ಮ ಇಬ್ಬರು ಅನಾಥ ಮಕ್ಕಳನ್ನ ದತ್ತು ಪಡೆದು ಸಾಕಿ. ಆ ಇಬ್ಬರಲ್ಲಿ ನಾನು ಇರುತ್ತೇನೆ ಎಂದು ಹೇಳಿದ್ದಾನೆ.
An engineering student has ended his life after making an appeal to Chief Minister Basavaraj Bommai and Vice-Chancellors of universities to change the existing education system in Karnataka's Hassan district. The student has been identified as Hemanth Gowda (20), a resident of Arsikere town. The incident took place on Monday night and the police recovered the video on Tuesday.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm