ಬ್ರೇಕಿಂಗ್ ನ್ಯೂಸ್
09-11-21 11:16 pm HK News Desk ಕರ್ನಾಟಕ
ಬೆಂಗಳೂರು, ನ.9: ರಾಜ್ಯದಲ್ಲಿ ಬಿಟ್ ಕಾಯಿನ ಹಗರಣ ಬಿರುಗಾಳಿ ಎಬ್ಬಿಸಿದ್ದರೆ, ಅತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ. ನ.10ರ ಬುಧವಾರ ಬೆಳಗ್ಗೆ ದೆಹಲಿಗೆ ತೆರಳಲಿರುವ ಬೊಮ್ಮಾಯಿ ಪ್ರಮುಖವಾಗಿ ಬಿಟ್ ಕಾಯಿನ್ ಹಗರಣದ ವಿಚಾರದಲ್ಲಿ ಪ್ರಧಾನಿ ಮತ್ತು ಹೈಕಮಾಂಡ್ ವರಿಷ್ಠರಿಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾಗಲೇ ಅತ್ತ ಪ್ರಧಾನಿ ಕಚೇರಿಯಿಂದ ನೇರವಾಗಿ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಬಗ್ಗೆ ಮಾಹಿತಿ ಕೇಳಿ ಪತ್ರ ಬಂದಿತ್ತು. ಇದೇ ವೇಳೆ, ಬೆಂಗಳೂರಿನ ಇಬ್ಬರು ಸಾಮಾಜಿಕ ಕಾರ್ಯಕರ್ತರು ಪಿಎಂಓಗೆ ಪತ್ರ ಬರೆದಿರುವುದು ಚರ್ಚೆಗೆ ಕಾರಣವಾಗಿದೆ.
ಎರಡು ವರ್ಷಗಳ ಹಿಂದೆ ಬಂಧಿತನಾಗಿದ್ದ ಶ್ರೀಕಿಯನ್ನು ಬೆಂಗಳೂರು ಕ್ರೈಮ್ ಬ್ರಾಂಚ್ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸದೆ ಬಿಟ್ಟಿದ್ದಾರೆ. ಆತನನ್ನು ಸುಲಭದಲ್ಲಿ ಬಿಟ್ಟು ಕಳುಹಿಸಲು ದೊಡ್ಡ ಮಟ್ಟಿನಲ್ಲಿ ನಾಯಕರಿಗೆ ಸಂದಾಯ ಆಗಿದೆ ಎನ್ನುವ ಬಗ್ಗೆ ಸಂಶಯಿಸಿ ನೇರವಾಗಿ ಪ್ರಧಾನಿ ಗಮನಕ್ಕೆ ತಂದಿದ್ದರು. ಈ ಬಗ್ಗೆ ಪ್ರಧಾನಿ ಮೋದಿ ತಮ್ಮದೇ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.
ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಬದಲಾವಣೆ ಆಗಲಿದೆ ಎನ್ನುವ ಮಾತೂ ಕೇಳಿಬರುತ್ತಿದೆ. ಚುನಾವಣೆ ದೃಷ್ಟಿಯಿಂದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅಥವಾ ಹಾಲಿ ಸಚಿವ ಆರ್. ಅಶೋಕ್ ಅವರಲ್ಲಿ ಒಬ್ಬರನ್ನು ಹೊಸತಾಗಿ ಅಧ್ಯಕ್ಷರನ್ನಾಗಿ ಮಾಡಲಾಗುತ್ತಿದೆ ಎನ್ನುವ ಮಾತುಗಳು ಬಿಜೆಪಿ ಪಡಸಾಲೆಯಿಂದಲೇ ಕೇಳಿಬರುತ್ತಿದೆ. ಬಿಟ್ ಕಾಯಿನ್ ಹಗರಣದಲ್ಲಿ ಯಾರು ಪಾಲು ಪಡೆದಿದ್ದಾರೆ ಅನ್ನುವುದರ ಬಗ್ಗೆ ಮಾಹಿತಿ ಇಲ್ಲವಾದರೂ, ರಾಜ್ಯ ಸರಕಾರ ನಡೆದುಕೊಳ್ಳುತ್ತಿರುವುದನ್ನು ನೋಡಿದರೆ ಏನೋ ಅಪರಾತಪರಾ ಆಗಿದೆ ಅನ್ನುವ ಸಂಶಯ ಸುಳಿಯುವಂತಾಗಿದೆ.
ಇವೆಲ್ಲದರ ನಡುವೆ, ಸಿಎಂ ಬೊಮ್ಮಾಯಿ ಅವರನ್ನು ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ. ಬಿಟ್ ಕಾಯಿನ್ ಪ್ರಕರಣದಿಂದಾಗಿ ದೇಶದ ಮರ್ಯಾದೆ ಜಾಗತಿಕ ಸಮುದಾಯದಲ್ಲಿ ಹರಾಜಾಗಿದೆ ಅನ್ನುವ ಸುದ್ದಿಯೂ ಹರಿದಾಡುತ್ತಿದೆ. ಬಿಟ್ ಫಿನೆಕ್ಸ್ ಎನ್ನುವ ಅಮೆರಿಕ ಮೂಲದ ಕ್ರಿಪ್ಟೋ ಕರೆನ್ಸಿಯ ಎಕ್ಸ್ ಚೇಂಜ್ ಕಂಪನಿಯ ವೆಬ್ ಸೈಟ್ ಹ್ಯಾಕ್ ಮಾಡಿ, ಒಟ್ಟು 1.20 ಲಕ್ಷ ಬಿಟ್ ಕಾಯಿನ್ ಗಳನ್ನು ಕದಿಯಲಾಗಿದೆ ಎನ್ನುವ ಪ್ರಕರಣದಲ್ಲಿ ಶ್ರೀಕಿ ಕೂಡ ಆರೋಪಿಯಾಗಿದ್ದು, ಆತನನ್ನು ಹೆಚ್ಚಿನ ತನಿಖೆಗೊಳಪಡಿಸದೆ ಪೊಲೀಸರು ಮುಚ್ಚಿ ಹಾಕಿದ್ದಾರೆ ಎಂಬ ಗಂಭೀರ ಆರೋಪ ರಾಜ್ಯ ಪೊಲೀಸರ ಮೇಲಿದೆ. ಈ ಪ್ರಕರಣ ರಾಜ್ಯ ಬಿಜೆಪಿ ನಾಯಕರನ್ನೂ ಸುತ್ತಿಕೊಂಡಿದ್ದು, ಸಂಶಯದ ಗೆರೆಗಳು ಹಗರಣದ ಸುಳಿ ಎಬ್ಬಿಸಿದೆ.
ಮತ್ತೊಂದು ಮೂಲದ ಪ್ರಕಾರ, ಎರಡು ತಿಂಗಳ ಹಿಂದೆ ಪ್ರಧಾನಿ ಮೋದಿ ಅಮೆರಿಕಕ್ಕೆ ತೆರಳಿದ್ದ ವೇಳೆ ಅಲ್ಲಿನ ನಾಯಕರು ಬಿಟ್ ಕಾಯಿನ್ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ಕೇಳಿದ್ದಾರೆ ಎನ್ನಲಾಗುತ್ತಿದೆ. ಭಾರತ ಮೂಲದ ವ್ಯಕ್ತಿ ಹ್ಯಾಕರ್ ಆಗಿದ್ದು, ಆತನನ್ನು ತಮ್ಮ ವಶಕ್ಕೆ ನೀಡುವಂತೆ ಕೇಳಿಕೊಂಡಿದ್ದಾರೆ ಎನ್ನುವ ಮಾಹಿತಿಗಳು ಕೂಡ ಹರಿದಾಡುತ್ತಿದ್ದು, ಅದೇ ಹಿನ್ನೆಲೆಯಲ್ಲಿ ಮೋದಿ ಕರ್ನಾಟಕಲ್ಲಿ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಮರು ಜೀವ ನೀಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
Bitcoin scam Karnataka CM Basavaraj Bommai called to Delhi by High Command.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm