ಬ್ರೇಕಿಂಗ್ ನ್ಯೂಸ್
11-11-21 10:42 pm H K Desk ಕರ್ನಾಟಕ
ಬೆಂಗಳೂರು, ನ.11: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ಎಕ್ಸ್ ಚೇಂಜ್ ಮತ್ತು ಸರಕಾರಿ ವೆಬ್ ಸೈಟ್ ಹ್ಯಾಕ್ ಪ್ರಕರಣದ ಕುರಿತು ಕೇಂದ್ರ ಗೃಹ ಸಚಿವಾಲಯ ತನಿಖೆ ಆರಂಭಿಸಿದೆ ಎನ್ನುವ ಮಾಹಿತಿ ಲಭಿಸಿದೆ. ಕೇಂದ್ರದ ವಿವಿಧ ತನಿಖಾ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಾಜ್ಯಕ್ಕೆ ಕಳುಹಿಸಿರುವ ಕೇಂದ್ರ ಗೃಹ ಸಚಿವಾಲಯ, ಹಗರಣಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದೆ.
ಸಿಬಿಐ, ಜಾರಿ ನಿರ್ದೇಶನಾಲಯ, ಕೇಂದ್ರ ಗುಪ್ತಚರ ಇಲಾಖೆ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡ ನವೆಂಬರ್ 2ರಂದು ಬೆಂಗಳೂರಿಗೆ ಬಂದಿತ್ತು. ಮಹಿಳಾ ಅಧಿಕಾರಿಯೊಬ್ಬರ ನೇತೃತ್ವದ ಉನ್ನತ ಮಟ್ಟದ ತಂಡ, ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸಿದೆ. ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರ ಹೇಳಿಕೆ ಪಡೆದು ದೆಹಲಿಗೆ ವಾಪಸಾಗಿರುವ ಈ ತಂಡ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿಯನ್ನೂ ಸಲ್ಲಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಮಹತ್ವದ ಹುದ್ದೆಯಲ್ಲಿರುವ ಎಡಿಜಿಪಿಗಳು, ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಲವು ಅಧಿಕಾರಿಗಳಿಂದ ಕೇಂದ್ರದ ತಂಡ ಮಾಹಿತಿ ಸಂಗ್ರಹಿಸಿದೆ. ಸಿಸಿಬಿ ಮತ್ತು ಸಿಐಡಿಯಲ್ಲಿ ಶ್ರೀಕೃಷ್ಣನಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸಿದ್ದ ಅಧಿಕಾರಿಗಳ ಹೇಳಿಕೆಯನ್ನೂ ಪಡೆಯಲಾಗಿದೆ. ಪ್ರಕರಣದ ತನಿಖೆಯಲ್ಲಿ ನೆರವಾಗಿದ್ದ ಸೈಬರ್ ತಂತ್ರಜ್ಞರ ಹೇಳಿಕೆಯನ್ನೂ ಕೇಂದ್ರ ತಂಡ ಪಡೆದಿದೆ.
ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಅತ್ಯಂತ ರಹಸ್ಯವಾಗಿ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದು ಕೇಂದ್ರ ತಂಡಕ್ಕೆ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪ್ರತ್ಯೇಕವಾಗಿ ಸ್ಥಳಾವಕಾಶ ಕಲ್ಪಿಸಲಾಗಿತ್ತು. ಮಾಹಿತಿ ಸಂಗ್ರಹ ಸಂದರ್ಭದಲ್ಲಿ ಇತರ ಯಾವುದೇ ವ್ಯಕ್ತಿಗಳು ಅಲ್ಲಿಗೆ ಪ್ರವೇಶಿಸದಂತೆ ನಿರ್ಬಂಧಿಸಲಾಗಿತ್ತು.
ಬಿಟ್ ಕಾಯಿನ್, ಹಣಕಾಸು ಸಂಸ್ಥೆಗಳ ಸರ್ವರ್ ಹ್ಯಾಕ್ ಮಾಡಿ ಸಾವಿರಾರು ಕೋಟಿ ರೂಪಾಯಿಗಳನ್ನು ದೋಚಿದ ಆರೋಪ ಶ್ರೀಕೃಷ್ಣನ ಮೇಲಿದೆ. ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳ ಸರ್ವರ್ಗಳಿಗೂ ಕನ್ನ ಹಾಕಿ ಹಣ ಲಪಟಾಯಿಸಿದ್ದ. ಈ ಕೃತ್ಯಗಳಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳು ಮತ್ತು ಕೆಲವು ಹಿರಿಯ ಅಧಿಕಾರಿಗಳೂ ಪಾಲು ಪಡೆದಿದ್ದಾರೆ ಎಂಬ ಆಪಾದನೆಯೂ ಇದೆ. ಈ ಕುರಿತು ಮಾಹಿತಿ ಸಂಗ್ರಹಿಸುವುದಕ್ಕಾಗಿಯೇ ಅಧಿಕಾರಿಗಳ ತಂಡವನ್ನು ಕೇಂದ್ರ ಗೃಹ ಸಚಿವಾಲಯ ಕಳುಹಿಸಿತ್ತು ಎನ್ನಲಾಗುತ್ತಿದೆ.
ಮೊದಲಿಗೆ, 2020ರ ನವೆಂಬರ್ 7ರಂದು ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಮಾದಕ ವಸ್ತು ಪ್ರಕರಣದಲ್ಲಿ ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಆತನ ಹ್ಯಾಕಿಂಗ್ ಕೈಚಳಕದ ಕೃತ್ಯಗಳು ಹೊರಬಂದಿದ್ದವು. ಹಗರಣದ ಕುರಿತು ಸಿಸಿಬಿ ಮತ್ತು ಸಿಐಡಿ ಪೊಲೀಸರು ಪ್ರತ್ಯೇಕವಾದ ತನಿಖೆ ನಡೆಸಿದ್ದರು. ಆದರೆ, ತನಿಖೆಯ ಬೆಳವಣಿಗೆ ಬಗ್ಗೆ ಮಾಹಿತಿ
ಇಡಿಯಿಂದಲೂ ಕೇಂದ್ರಕ್ಕೆ ವರದಿ
ಇದಕ್ಕೂ ಮುನ್ನ ಅಕ್ಟೋಬರ್ 25ರಿಂದ ನಾಲ್ಕು ದಿನಗಳ ಕಾಲ ಶ್ರೀಕಿಯನ್ನು ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರತ್ಯೇಕ ವರದಿ ಸಲ್ಲಿಸಿದ್ದಾರೆ. ಬಿಟ್ ಕಾಯಿನ್ ಮತ್ತು ಸರ್ವರ್ ಹ್ಯಾಕಿಂಗ್ ಹಗರಣದಲ್ಲಿ ಇಡಿ ಅಧಿಕಾರಿಗಳು ಶ್ರೀಕೃಷ್ಣ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆಗಸ್ಟ್ ತಿಂಗಳಲ್ಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಹ್ಯಾಕಿಂಗ್ ಪ್ರಕರಣಗಳಲ್ಲಿ ದೋಚಿರುವ ಹಣವನ್ನು ರಾಜ್ಯದ ಕೆಲವು ಪ್ರಭಾವಿ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ನೀಡಿರುವುದಾಗಿ ಇಡಿ ಎದುರು ಆಗಲೇ ಹೇಳಿಕೆ ನೀಡಿದ್ದ. ಈ ಬಗ್ಗೆ ಇಡಿ ಅಧಿಕಾರಿಗಳು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಹೊರಬಂದಿರಲಿಲ್ಲ.
ಸದ್ದು ಮಾಡಿದ ಪ್ರಧಾನಿ ಕಚೇರಿಗೆ ದೂರು
ಈ ನಡುವೆ, ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಸಚಿನ್ ಮಾಮನಿ ಪ್ರಧಾನಿ ಕಚೇರಿಗೆ ನೀಡಿದ್ದಾರೆ ಎನ್ನಲಾದ ದೂರಿನ ಪ್ರತಿ ಜಾಲತಾಣದಲ್ಲಿ ಸದ್ದು ಮಾಡಿದೆ. ದೂರಿನಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳು, ಅವರ ಮಕ್ಕಳು, ಆಯಕಟ್ಟಿನ ಹುದ್ದೆಗಳಲ್ಲಿರುವ ಕೆಲವು ಹಿರಿಯ ಅಧಿಕಾರಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಧಾನಿ ಗಮನಕ್ಕೆ ತಂದಿದ್ದರು. ಇದೇ ವೇಳೆ, ಇನ್ನೊಬ್ಬ ಸಾಮಾಜಿಕ ಕಾರ್ಯಕರ್ತ ಭಾರದ್ವಾಜ್ ಎಂಬವರು ಕೂಡ ಪ್ರಧಾನಿ ಕಚೇರಿಗೆ ದೂರು ನೀಡಿದ್ದು ಹೈಕಮಾಂಡನ್ನು ನಿದ್ದೆಗೆಡಿಸಿದೆ.
ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಢೀರ್ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುತ್ತಿರುವುದು ರಾಜಕೀಯ ವಲಯದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಬಿಟ್ ಕಾಯಿನ್ ಹಗರಣದ ಬಗ್ಗೆ ಸಿಎಂ ಹೈಕಮಾಂಡಿಗೆ ಮಾಹಿತಿ ನೀಡಲು ತೆರಳಿದ್ದಾರೆ ಎನ್ನಲಾಗುತ್ತಿದೆ.
Home ministry launches secret investigation into Bitcoin scam in Karnataka
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm