ಬ್ರೇಕಿಂಗ್ ನ್ಯೂಸ್
12-09-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 12: ಜೆಡಿಎಸ್ ಪಕ್ಷದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆ ಶ್ರೀಲಂಕಾ ಪ್ರವಾಸ ಹೋಗಿದ್ದು ನಿಜ. ಹಾಗೆಂದು ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿಯರ ಜೊತೆ ಕೊಲಂಬೋಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಯಾಗಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಒಂದಾನೊಂದು ಕಾಲದಲ್ಲಿ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋಗೆ ಪ್ರವಾಸ ಹೋಗಿದ್ದಾಗಿ ಹೇಳಿಕೆ ನೀಡಿದ್ದು ಎತ್ತಣ ಮಾಮರ, ಎತ್ತಣ ಕೋಗಿಲೆ ಎಂಬಂತಾಗಿದೆ ಎಂದಿದ್ದಾರೆ.

2014ರ ಜೂನ್ ತಿಂಗಳಲ್ಲಿ ಪಕ್ಷದ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಶ್ರೀಲಂಕಾಗೆ ಹೋಗುವುದಾಗಿ ಬಹಿರಂಗವಾಗೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೆ, ಅಲ್ಲಿ ಶಾಸಕರ ಜೊತೆ ನಡೆದ ಮಾತುಕತೆಗಳ ಬಗ್ಗೆ ದೃಶ್ಯಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ. ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಚರ್ಚಿಸಲು ಕೊಲಂಬೋಗೆ ಹೋಗುವುದು ದುಬಾರಿಯಲ್ಲದ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಅದೇ ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿದ್ದಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಸುವುದಕ್ಕೆ
ಚಾಚಿ ಕೊಂಡಿರುವುಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಎಂದು ಪುರಂದರದಾಸರ ಕೀರ್ತನೆಯನ್ನು ಉಲ್ಲೇಖಿಸಿ ಜಮೀರ್ ಅಹ್ಮದ್ ವಿರುದ್ಧ ಜಾಡಿಸಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜೊತೆ ಲಿಂಕ್ ಹೊಂದಿರುವ ಆರೋಪ ಜಮೀರ್ ಅಹ್ಮದ್ ಮೇಲೆ ಕೇಳಿಬರುತ್ತಿದ್ದಂತೆ ಕೊಲಂಬೋಗೆ ಹೋಗಿರುವ ವಿಚಾರದಲ್ಲಿ ಕುಮಾರಸ್ವಾಮಿಯನ್ನು ಎಳೆತರಲು ಪ್ರಯತ್ನ ಮಾಡಿದ್ದರು.
ಆಚಾರವಿಲ್ಲದ ನಾಲಿಗೆ ನಿನ್ನ
— H D Kumaraswamy (@hd_kumaraswamy) September 12, 2020
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ
ಚಾಚಿ ಕೊಂಡಿರುವಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಪುರಂದರ ದಾಸರು
6/6
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm