ಬ್ರೇಕಿಂಗ್ ನ್ಯೂಸ್
27-11-21 10:11 pm HK NEWS DESK ಕರ್ನಾಟಕ
ಬೆಂಗಳೂರು, ನ.27: ವಿದೇಶದಲ್ಲಿ ಕೊರೋನಾ ರೂಪಾಂತರಿ ತಳಿಯ ಕಳವಳ ಹೆಚ್ಚಿದ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರಿಗಳನ್ನು ಎಲರ್ಟ್ ಮಾಡಲಾಗಿದೆ. ಗಡಿಭಾಗದಲ್ಲಿ ಮತ್ತು ವಿದೇಶದಿಂದ ಬರುವವರ ಬಗ್ಗೆ ಬಿಗಿ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು ಮತ್ತು ನೆಗಟಿವ್ ಇದ್ದವರನ್ನು ನಗರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವ ದಲ್ಲಿ ಶನಿವಾರ ಸಂಜೆ ಮಹತ್ವದ ಸಭೆ ನಡೆದಿದ್ದು ಕೊರೋನಾ ತಜ್ಞರ ಸಮಿತಿಯ ಅಧ್ಯಕ್ಷರು, ಪ್ರಮುಖ ಸಚಿವರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯದ ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ್ದು, ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವುದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ಕ್ರಮ ಕೈಗೊಳ್ಳುವುದು, ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯಕ್ಕೆ ಸೂಚನೆ ನೀಡಲಾಗಿದೆ.
ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ 24 ಗಂಟೆ ಕೆಲಸ ಮಾಡುವಂತೆ ಅಧಿಕಾರಿಗಳನ್ನು ನಿಯೋಜಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವಂತೆ ಸೂಚಿಸಲಾಗಿದೆ.
16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
ಹೋಟೇಲು, ರೆಸ್ಟೋರೆಂಟ್ಗಳು, ಸಿನಿಮಾ ಹಾಲ್ಗಳು, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.
ಇದಲ್ಲದೇ ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ ಗೆ ಹೊಸ ಮಾರ್ಗಸೂಚಿ ಬಿಡುಗಡೆಯಾಗಲಿದ್ದು, ಈ ಬಗ್ಗೆ ಸಿಎಂ ಬೊಮ್ಮಾಯಿ ಅಧಿಕಾರಿಗಳ ಜೊತೆ ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.
As a precautionary measure, the authorities in Karnataka have made Covid test compulsory for all passengers arriving from Kerala and Maharashtra, officials said on Saturday. An official said awareness, along with vaccination, is necessary amid fears of the new Omicron variant, as well as Covid outbreak at a medical college in Dharwad, Mysuru and Bengaluru institutions.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm