ಬ್ರೇಕಿಂಗ್ ನ್ಯೂಸ್
01-12-21 01:14 pm HK Desk news ಕರ್ನಾಟಕ
ಬೆಂಗಳೂರು, ಡಿ.1: ಹೈಕೋರ್ಟ್ ಕಲಾಪ ನಡೆಯುತ್ತಿದ್ದಾಗ ಕರಾವಳಿ ಮೂಲದ ವ್ಯಕ್ತಿಯೊಬ್ಬರು ಅರೆನಗ್ನ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ನ್ಯಾಯಾಧೀಶರು ಗರಂ ಆಗಿರುವ ಪ್ರಸಂಗ ನಡೆದಿದೆ. ನ.30ರಂದು ಬೆಳಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಬಗ್ಗೆ ವರ್ಚುವಲ್ ಮೂಲಕ ವಿಡಿಯೋ ಕಾನ್ಫರೆನ್ಸ್ ನಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಉಜಿರೆ ಮೂಲದ ವ್ಯಕ್ತಿ ಎಂಟ್ರಿ ಆಗಿ ಅರೆನಗ್ನ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ತಂಡವನ್ನು ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಧೀಶ ರಿತುರಾಜ್ ಅವಸ್ಥಿ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸುತ್ತಿತ್ತು. ಈ ವೇಳೆ, ಸಂತ್ರಸ್ತ ಯುವತಿಯ ಪರವಾಗಿ ಹಾಜರಾಗಿದ್ದ ಹಿರಿಯ ಮಹಿಳಾ ವಕೀಲೆ ಇಂದಿರಾ ಜೈಸಿಂಗ್, ವಾದ ಮಂಡನೆ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಗೆ ಲಾಗಿನ್ ಆಗಿದ್ದ ‘ಶ್ರೀಧರ ಭಟ್ ಉಜಿರೆ ಎಸ್ ಡಿಎಂ’ ಎಂಬ ಹೆಸರಿನ ವ್ಯಕ್ತಿ ಸ್ನಾನ ಮಾಡಿಕೊಂಡು ಬಂದು ಮೈಯನ್ನು ಒಜ್ಜುತ್ತಿರುವ ಸ್ಥಿತಿಯಲ್ಲಿ ಬರಿ ಮೈಯಲ್ಲಿ ಕಾಣಿಸಿಕೊಂಡಿದ್ದಾರೆ.

20 ನಿಮಿಷಗಳ ಕಾಲ ಈ ರೀತಿ ವ್ಯಕ್ತಿ ಕಾಣಿಸಿಕೊಂಡಿದ್ದು, ಇದರಿಂದ ಮಹಿಳಾ ವಕೀಲೆ ತೀವ್ರ ಮುಜುಗರ ಅನುಭವಿಸಿದ್ದಾರೆ. ಈ ಬಗ್ಗೆ ಮಹಿಳಾ ವಕೀಲೆ ನ್ಯಾಯಾಧೀಶರ ಗಮನಕ್ಕೆ ತಂದಿದ್ದು, ಈ ರೀತಿ ವ್ಯಕ್ತಿಯೊಬ್ಬ ಕಾಣಿಸಿಕೊಂಡು ಅಡ್ಡಿಪಡಿಸಿರುವುದರಿಂದ ವಾದ ಮಂಡನೆಗೆ ಇರಿಸುಮುರಿಸು ಉಂಟಾಗಿದೆ. ಮುಜುಗರಕ್ಕೀಡಾಗಿ ವಾದ ಮಂಡಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಕೂಡಲೇ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನಾವು ಇದರ ಬಗ್ಗೆ ಗಮನಿಸಿಲ್ಲ. ಯಾರು ವ್ಯಕ್ತಿ ಕಾಣಿಸಿಕೊಂಡಿದ್ದಾರೋ ಅದರ ಬಗ್ಗೆ ತನಿಖೆ ನಡೆಸಿ, ನೋಟೀಸ್ ನೀಡುವಂತೆ ಸೂಚನೆ ನೀಡಿದ್ದಾರೆ.
ಶ್ರೀಧರ ಭಟ್ ಉಜಿರೆ ಎಸ್ ಡಿಎಂ ಹೆಸರಿನಲ್ಲಿ ಎಂಟ್ರಿ ಆಗಿದ್ದ ವ್ಯಕ್ತಿ ಕರಾವಳಿಯ ದಕ್ಷಿಣ ಕನ್ನಡ ಮೂಲದವರೇ ಆಗಿರಬೇಕು ಎನ್ನುವ ಮಾತುಗಳು ಕೇಳಿಬಂದಿವೆ. ಈ ವ್ಯಕ್ತಿಯೂ ಹೈಕೋರ್ಟ್ ವಕೀಲನೇ, ತಪ್ಪಾಗಿ ಲಾಗಿನ್ ಆಗಿದ್ದನೇ ಅಥವಾ ಕಿಡಿಗೇಡಿ ಉದ್ದೇಶದಿಂದ ಈ ರೀತಿ ವರ್ತಿಸಿದ್ದಾನೆಯೇ ಎನ್ನುವ ಬಗ್ಗೆ ತನಿಖೆಯಲ್ಲಿ ತಿಳಿದುಬರಬೇಕು.
A division bench of the high court headed by chief justice Ritu Raj Awasthi on Tuesday directed issuance of notice to a man who allegedly joined videoconference case hearing in a semi-naked condition. The incident took place during the hearing of petitions in the sex-for-job case involving former minister Ramesh Jarkiholi. Senior advocate Indira Jaising, appearing for the complainant, brought the conduct of the man, identified as Sridhar Bhat, to the notice of the chief justice and urged him to take strong action against Bhat.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm