ಬ್ರೇಕಿಂಗ್ ನ್ಯೂಸ್
05-12-21 09:37 pm HK Desk news ಕರ್ನಾಟಕ
ಮಂಡ್ಯ, ಡಿ.5: ರಾಜ್ಯದಲ್ಲಿ ಕಾಂಗ್ರೆಸ್ ಉಸಿರಾಡೋದನ್ನ ನಿಲ್ಲಿಸಬೇಕು. ಅದಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಬಿಜೆಪಿ ಗ್ರಾಮ ಪಂಚಾಯಿತಿ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲವೇ ಇಲ್ಲ. ಕರ್ನಾಟಕದಲ್ಲಿ ಒಬ್ಬ, ಇಬ್ಬರಿಂದ ಕಾಂಗ್ರೆಸ್ ಉಸಿರಾಡ್ತಿದೆ. ಅದನ್ನ ನಿಲ್ಲಿಸುವ ಕೆಲಸವನ್ನ ನಾನು ಮಾಡೇ ಮಾಡ್ತೀನಿ. ಅದಕ್ಕಾಗಿ ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಂಜುಗೆ ಮತ ನೀಡಿ ಗೆಲ್ಲಿಸಿ. 25 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಮಾಡಿದ್ದಾರೆ. 25ರಲ್ಲಿ ಮಂಡ್ಯ ಸೇರಿದಂತೆ 15 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದಾರೆ.
ನಿಮ್ಮ ಪ್ರೀತಿ, ಅಭಿಮಾನಕ್ಕೆ ನಾನು ಸದಾ ಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡ್ತೇನೆ. ನೀವು ಸ್ವಾಗತ ಮಾಡಿದ ರೀತಿ ನೋಡಿದಾಗ ನನಗೆ ಆಶ್ಚರ್ಯ ಆಯ್ತು. ನಾನು ಬಂದಿರೋದು ಶಿವಮೊಗ್ಗಕ್ಕಾ ಅಥವಾ ಮಂಡ್ಯಕ್ಕಾ ಅನ್ನೋ ಅನುಮಾನ ಮೂಡ್ತು. ನಿಮ್ಮ ಈ ಪ್ರೀತಿ, ಅಭಿಮಾನಕ್ಕೆ ನಾನು ಋಣಿಯಾಗಿದ್ದೇನೆ.
ನಾರಾಯಣ ಗೌಡರ ಸಮ್ಮುಖದಲ್ಲಿ ಈ ಚುನಾವಣೆ ಗೆಲ್ಲಿಸಿ. ನನ್ನೊಟ್ಟಿಗೆ ರಾಜ್ಯದ ಎಲ್ಲಾ ನಾಯಕರನ್ನು ಕರೆ ತರುತ್ತೇನೆ. ಆ ಮೂಲಕ ಹುಟ್ಟೂರಲ್ಲಿ ಬಿಜೆಪಿ ಕಟ್ಟುವ ಕೆಲಸ ಮಾಡೋಣ. ಅದಕ್ಕಾಗಿ ಮಂಜು ಅವರನ್ನ ಗೆಲ್ಲಿಸಿ, ನಮಗೆ ಶಕ್ತಿ ನೀಡಿ. ಈಗಾಗಲೇ ಪ್ರತಿಯೊಬ್ಬರ ಮನೆಗೆ ಹೋಗಿ ಬಂದಿದ್ದಾರೆ. ಸ್ಥಳೀಯ ನಾಯಕರು, ಕಾರ್ಯಕರ್ತರು ಕೂಡ ಮತದಾರರ ಮನೆಗೆ ತೆರಳಿ ಮನವೊಲಿಸಬೇಕು. ಮೊದಲ ಸುತ್ತಿನಲ್ಲೇ ಬಿಜೆಪಿ ಅಭ್ಯರ್ಥಿ ಮಂಜು ಗೆಲ್ಲಬೇಕು ಎಂದು ಯಡಿಯೂರಪ್ಪ ಕರೆ ನೀಡಿದ್ದಾರೆ.
ಮಂಡ್ಯದಲ್ಲಿ ಹೊಂದಾಣಿಕೆ ಪ್ರಶ್ನೆಯೇ ಇಲ್ಲ
ಮಂಡ್ಯದಲ್ಲಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ. ಅಭ್ಯರ್ಥಿ ಇಲ್ಲದ ಕಡೆ ಜೆಡಿಎಸ್ ಬೆಂಬಲ ಕೇಳಿದ್ದೇವೆ, ಅಷ್ಟೇ. ಅದರಲ್ಲಿ ಯಾವುದೇ ಗೊಂದಲ ಇಲ್ಲವೇ ಇಲ್ಲ. ಮಂಡ್ಯದಲ್ಲಂತೂ ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.
Senior BJP leader B S Yediyurappa on Sunday claimed that there is a wave of public support in favour of his party in the country and the Congress will continue to sit in the opposition for the next 25 years.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm