ಬ್ರೇಕಿಂಗ್ ನ್ಯೂಸ್
21-12-21 04:10 pm HK Desk news ಕರ್ನಾಟಕ
ಬೆಳಗಾವಿ, ಡಿ.21 : ರಾಷ್ಟ್ರಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಮಾನಸಿಕ ರೋಗಿಗಳ ಕೆಲಸ. ರಾಯಣ್ಣ, ಶಿವಾಜಿ ಯಾವುದೇ ಜಾತಿಗೆ, ಸಮುದಾಯಕ್ಕೆ ಸೀಮಿತ ಆಗಿರಲಿಲ್ಲ. ಇಡೀ ಮನುಕುಲ, ದೇಶವನ್ನು ಉದ್ಧಾರ ಮಾಡುವ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಅನಗೋಳದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಕಿಡಿಗೇಡಿಗಳು ಕನ್ನಡ ಧ್ವಜ ಸುಡುವ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡಿದ್ದಾರೆ. ಇವರನ್ನು ಸುಮ್ಮನೇ ಬಿಡಲ್ಲ. ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟವರ ಕುಲದವರು ಇವರು. ಅಂತವರನ್ನ ಬಿಡಲ್ಲ, ಮಟ್ಟ ಹಾಕುತ್ತೇವೆ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ. ಬೆಳಗಾವಿ ಪ್ರಕರಣ ಸಂಬಂಧಿಸಿದಂತೆ ಇದುವರೆಗೆ 38 ಜನರನ್ನು ಅರೆಸ್ಟ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಶಿವಾಜಿ ವಿಗ್ರಹಕ್ಕೆ ಮಸಿ ಬಳಿದ ಪ್ರಕರಣದಲ್ಲಿ ಏಳು ಜನರನ್ನು ಅರೆಸ್ಟ್ ಮಾಡಲಾಗಿದೆ. ಇವರ ಮೇಲೆ ಗೂಂಡಾ ಕಾಯ್ದೆ ಹಾಕಲು ಚಿಂತನೆ ಮಾಡಲಾಗಿದೆ. ಇದರ ಹಿಂದೆ ಯಾರು ಇದ್ದಾರೆ ಅನ್ನೋದನ್ನ ಪತ್ತೆ ಹಚ್ಚಲಾಗುತ್ತದೆ. ಇದು ಹೊರಗೆ ಬರಬೇಕು. ಕೆಲವರ ಮುಖವಾಡ ಹೊರಗೆ ಬರಬೇಕು ಎಂದು ಗೃಹ ಸಚಿವರು ಹೇಳಿದರು.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಘಟನೆ ಬಗ್ಗೆ ಮಹಾರಾಷ್ಟ್ರ ಸರ್ಕಾರ, ಗೃಹ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಯಾರು ಯಾರ ಮೇಲೆ ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡಬೇಕು ಅನ್ನೊದು ಸಲಹೆ ಬಂದಿದೆ. ಇದಲ್ಲದೆ, ಇವೆಲ್ಲದಕ್ಕೂ ಕಾರಣ ಆಗಿರುವ ಎಂಇಎಸ್ ನಿಷೇಧ ಮಾಡುವ ಬಗ್ಗೆ ಸದನದಲ್ಲಿ ಚರ್ಚೆ ಮಾಡ್ತಿವಿ. ಇಂತಹ ಘಟನೆ ಮಾಡಿದವರು ದೇಶದ್ರೋಹಿಗಳು. ಇವರ ಮೇಲೆ ದೇಶದ್ರೋಹ ಕೇಸ್ ಹಾಕಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದರು.
Home Minister Araga Jnanendra said that cases of sedition and treason will be filed against those attacking statues and pictures of national heroes like Chatrapati Shivaji Maharaj, Sangolli Rayanna and Lord Basaweshwar. Jnanendra informed reporters here on Tuesday that the incidents of desecrating statues and pictures of national heroes appear to be premeditated acts and police have been asked to identify the conspirators.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm