ಬ್ರೇಕಿಂಗ್ ನ್ಯೂಸ್
26-12-21 12:36 pm HK Desk news ಕರ್ನಾಟಕ
ಬೆಂಗಳೂರು, ಡಿ.26 : ಕೊರೊನಾ ರೂಪಾಂತರಿ ಒಮಿಕ್ರಾನ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ ಹತ್ತು ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅರೋಗ್ಯ ಸಚಿವ ಸುಧಾಕರ್, ಡಿ.28 ರಿಂದ ಜನವರಿ 10 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರ ವರೆಗೆ ನೈಟ್ ಕರ್ಫ್ಯೂ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಹೊಸ ವರ್ಷಾಚರಣೆಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪಬ್, ಬಾರ್ ಹೋಟೆಲ್ ಸೇರಿದಂತೆ ಎಲ್ಲಾ ರೀತಿಯ ಅಂಗಡಿ, ವ್ಯಾಪಾರ ರಾತ್ರಿ ಹತ್ತು ಗಂಟೆಯ ನಂತರ ಸಂಪೂರ್ಣ ಬಂದ್ ಆಗಲಿದೆ. ಇದರಿಂದ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಯಾವುದೇ ರೀತಿಯ ಹೊಸ ವರ್ಷ ಆಚರಿಸುವಂತಿಲ್ಲ. ಅಲ್ಲದೆ ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಅಂತ ತಿಳಿಸಿದ್ದಾರೆ.
ಡಿ.28ರ ಮಂಗಳವಾರ ರಾತ್ರಿ 10 ಗಂಟೆಯಿಂದಲೇ ಎಲ್ಲವೂ ಬಂದ್ ಆಗಲಿದೆ. 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೂ ಎಲ್ಲ ಚವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ. ಅಂತರ್ ರಾಜ್ಯ ಪ್ರಯಾಣಕಷ್ಟೆ ರಾತ್ರಿ 10 ಗಂಟೆಗ ನಂತರ ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸರಕಾರದ ಈ ಆದೇಶದಿಂದಾಗಿ ಹೊಸ ವರ್ಷಕ್ಕೆ ನಡುರಾತ್ರಿ ಪಾರ್ಟಿ ಆಯೋಜಿಸಿದ್ದವರು ನಿರಾಶರಾಗಿದ್ದಾರೆ.
ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿಯೂ ನೈಟ್ ಕರ್ಫ್ಯೂ ಹಾಕಲಾಗಿದ್ದು ಕೇಂದ್ರ ಸರಕಾರದ ಸೂಚನೆಯಂತೆ ಆಯಾ ರಾಜ್ಯಗಳು ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಹೊಸ ವರ್ಷದ ಪಾರ್ಟಿ ನೆಪದಲ್ಲಿ ಜನರು ಗುಂಪು ಕೂಡುವುದನ್ನು ತಡೆಯಲು ಈ ನಿರ್ಧಾರಕ್ಕೆ ಬರಲಾಗಿದೆ.
The government has also announced certain restrictions for New Year related parties and gatherings, amid fresh COVID-19 concerns. The Karnataka government has decided to impose "night curfew" for 10 days from December 28, between 10 pm to 5 am, Health Minister K Sudhakar said on Sunday. The government has also announced certain restrictions for New Year related parties and gatherings, amid fresh COVID-19 concerns with new clusters emerging and increasing threat of the new Omicron variant of Coronavirus.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm