ಬ್ರೇಕಿಂಗ್ ನ್ಯೂಸ್
30-12-21 04:23 pm HK Desk news ಕರ್ನಾಟಕ
ಬೆಂಗಳೂರು, ಡಿ.30: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿಯಲ್ಲಿ ಅಪಘಾತ ಸಂಭವಿಸಿ ಸುಮಾರು ಒಂಬತ್ತು ವಾಹನಗಳು ಜಖಂಗೊಂಡು, ಒರ್ವನಿಗೆ ಗಾಯವಾಗಿರುವ ಘಟನೆ ನೆಲಮಂಗಲದ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ.
ದಟ್ಟ ಮಂಜಿನಿಂದಾಗಿ ಎದುರಿನ ವಾಹನ ಸ್ಪಷ್ಟವಾಗಿ ಕಂಡಿರಲಿಲ್ಲ, ಹೀಗಾಗಿ ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ ಕಾರಣ ಹಿಂದೆಯೇ ವೇಗವಾಗಿ ಬರುತ್ತಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ ಲಾರಿ ಸೇರಿದಂತೆ ಒಂಬತ್ತು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ.


ಅಪಘಾತದ ರಬಸಕ್ಕೆ ಲಾರಿ ಹಾಗೂ ಇತರ ವಾಹನಗಳು ರಸ್ತೆ ವಿಭಜಕದ ಮೇಲೆರಿ, ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಸಂಪೂರ್ಣ ಅಡ್ಡಲಾಗಿ ನಿಂತಿವೆ. ಇದರಿಂದ ಹಿಂದಿನಿಂದ ಬಂದ ವಾಹನಗಳು ಚಲಿಸಲಾಗದೆ ಸಂಚಾರ ದಟ್ಟಣೆ ಉಂಟಾಯಿತು. ಮುಂಜಾನೆ ಅಪಘಾತ ಸಂಭವಿಸಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಬೆಳಗ್ಗೆ 11 ಗಂಟೆಯವರೆಗೂ ಹರಸಾಹಸ ಪಟ್ಟರು.

ಅನಿವಾರ್ಯವಾಗಿ ಕೆಲ ಕಾಲ ಹೆದ್ಧಾರಿಯ ಬಲಭಾಗದ ರಸ್ತೆಯಲ್ಲೇ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ತರಕಾರಿ ಲಾರಿ ಅಪಘಾತದಿಂದ ರಸ್ತೆಯಲ್ಲೆಲ್ಲಾ ತರಕಾರಿ ಚೆಲ್ಲಾಪಿಲ್ಲಿಯಾಗಿತ್ತು. ಕ್ಯಾಂಟರ್ ಡಿಕ್ಕಿಯಿಂದ ವಾಹನ ಚಾಲಕನ ಕಾಲು ಮುರಿದಿದೆ. ಕಾರು ಡಿಕ್ಕಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.
As many as 12 people were injured and around 10 vehicles were damaged in a serial accident that occurred on National Highway 4 in Nelamangala due to heavy fog and poor visibility in the early hours of Thursday. Traffic movement on NH 4 was disrupted for over two hours as hundreds of vehicles were stranded on either side of the roads. The Nelamangala traffic police struggled to restore normalcy and used cranes to pull out the damaged vehicle to clear the road.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm