ಬ್ರೇಕಿಂಗ್ ನ್ಯೂಸ್
08-01-22 03:18 pm HK Desk news ಕರ್ನಾಟಕ
ಬೆಂಗಳೂರು, ಜ.8 : ಬನ್ನೇರುಘಟ್ಟ- ತುಮಕೂರು ನೈಸ್ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಇಬ್ಬರು ಯುವತಿಯರು ಸೇರಿದಂತೆ ನಾಲ್ವರು ಸಾಫ್ಟ್ ವೇರ್ ಟೆಕ್ಕಿಗಳು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಸಾಫ್ಟ್ ವೇರ್ ಉದ್ಯೋಗಿಗಳಿದ್ದ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿಯಾಗಿದ್ದು, ಇದರ ರಭಸಕ್ಕೆ ಕಾರು ಮುಂದಿದ್ದ ಹಲವಾರು ವಾಹನಗಳಿಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ಸರಣಿ ಅಪಘಾತದಲ್ಲಿ ಮೂರು ಟ್ರಕ್ ಮತ್ತು ನಾಲ್ಕು ಕಾರು ಬಡಿದಾಡಿದ್ದು ಸ್ಥಳದಲ್ಲಿ ಭೀಕರ ಸ್ಥಿತಿ ನಿರ್ಮಾಣವಾಗಿತ್ತು. ವ್ಯಾಗನರ್ ಕಾರಿನ ಹಿಂಭಾಗದಲ್ಲಿ ಕುಳಿತಿದ್ದ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇತರ ವಾಹನಗಳಲ್ಲಿದ್ದ ಆರು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮೃತ ನಾಲ್ವರು ಕೇರಳದ ನಿವಾಸಿಗಳಾಗಿದ್ದು, ಬೊಮ್ಮನಹಳ್ಳಿಯ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸದಲ್ಲಿದ್ದರು.
ಕುಮಾರಸ್ವಾಮಿ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕಾಗಮಿಸಿ, ಚೆಲ್ಲಾಪಿಲ್ಲಿ ಬಿದ್ದಿದ್ದ ವಾಹನಗಳು, ಗಾಯಾಳುಗಳನ್ನು ತೆರವು ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಭೀಕರವಾಗಿತ್ತು. ಟ್ರಕ್ ಚಾಲಕನ ಅತಿ ವೇಗದ ಮತ್ತು ಅಜಾಗ್ರತೆಯ ಚಾಲನೆಯಿಂದಲೇ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ವಾಂಕರ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least four persons, including two women died in a ghastly serial accident that occurred late night on Friday January 7 on Bannerghatta-Tumakuru NICE Road. The collision occured between a car and a truck under the limits of Kumaraswamy layout traffic police station, leading up to a pile up of other vehicles.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm