ಬ್ರೇಕಿಂಗ್ ನ್ಯೂಸ್
09-01-22 08:51 pm HK Desk news ಕರ್ನಾಟಕ
ಬೆಂಗಳೂರು, ಜ.9 : ವಿದ್ಯಾರ್ಥಿಗಳಿಂದ ಶುಲ್ಕದ ರೂಪದಲ್ಲಿ ಸಂಗ್ರಹಿಸಿದ್ದ 107 ಕೋಟಿ ರೂಪಾಯಿಯನ್ನು ವಂಚಿಸಿದ ಆರೋಪದಲ್ಲಿ ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯ ಮಾಜಿ ಕುಲಪತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಜಿ ಕುಲಪತಿ ಮಧುಕರ್ ಜಿ. ಅಂಗೂರ್ ಬಂಧಿತ ಆರೋಪಿ. ಇವರನ್ನು ಶನಿವಾರ ಅಧಿಕಾರಿಗಳು ಬಂಧಿಸಿದ್ದು ಭಾನುವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಧುಕರ್ ಜಿ. ಅಂಗೂರ್ ಸೇರಿದಂತೆ ಅವರ ಕುಟುಂಬದ ನಾಲ್ವರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿತ್ತು. ಅಂಗೂರ್ ಕುಲಪತಿಯಾಗಿದ್ದಾಗ 2016-17ರಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶುಲ್ಕವನ್ನು ವಿಶ್ವವಿದ್ಯಾನಿಲಯದ ಖಾತೆಯ ಬದಲಿಗೆ ಶ್ರೀವಾರಿ ಎಜುಕೇಶನಲ್ ಸರ್ವಿಸಸ್ ಹೆಸರಿನಲ್ಲಿದ್ದ ಟ್ರಸ್ಟಿಗೆ ಹಾಕುವಂತೆ ಸೂಚಿಸಲಾಗಿತ್ತು. ಇದರಂತೆ, 4500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಹಣವನ್ನು ತುಂಬಿದ್ದರು. ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ ಇತ್ಯಾದಿ ಹೆಸರಲ್ಲಿ ವಿದ್ಯಾರ್ಥಿಗಳು ಹಣ ಜಮೆ ಮಾಡಿದ್ದರು.
ಈ ಬಗ್ಗೆ ಅಲಯನ್ಸ್ ವಿವಿಯಿಂದ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಳೆದ ಸೆಪ್ಟಂಬರ್ ತಿಂಗಳಲ್ಲಿ ಮಧುಕರ್ ಜಿ. ಅಂಗುರ್, ಕುಟುಂಬ ಸದಸ್ಯರಾದ ಪ್ರಿಯಾಂಕ ಅಂಗೂರ್, ರವಿಕುಮಾರ್, ಶ್ರುತಿ, ಪಾವನಾ ದಿಬ್ಬೂರ್ ಹೆಸರಿನಲ್ಲಿದ್ದ 19 ಕೋಟಿ ಆಸ್ತಿಯನ್ನು ಜಪ್ತಿ ಮಾಡಲಾಗಿತ್ತು. ಬೆಂಗಳೂರು ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ನಾಲ್ಕು ಎಫ್ಐಆರ್ ದಾಖಲಿಸಿತ್ತು. ಆನಂತರ ಜಾರಿ ನಿರ್ದೇಶನಾಲಯವು ತನಿಖೆ ಕೈಗೆತ್ತಿಕೊಂಡಿದ್ದು ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.
The ED initiated an investigation based on four FIRs registered against Angur, Priyanka BS and Ravi Kumar. Amounts to the tune of Rs 107 crore was allegedly swindled by the accused in the name of tuition fees, hostel fees and so on.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm