ಬ್ರೇಕಿಂಗ್ ನ್ಯೂಸ್
14-01-22 07:27 pm HK Desk news ಕರ್ನಾಟಕ
ತುಮಕೂರು, ಜ.14 : ಪ್ರಕರಣ ಒಂದರಲ್ಲಿ ವೃದ್ಧ ವ್ಯಕ್ತಿಯನ್ನು ಸತಾಯಿಸುತ್ತಿದ್ದ ಠಾಣೆಯ ಪಿಎಸ್ಐಗೆ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಾಕ್ ನೀಡಿದ್ದಾರೆ. ದೂರು ಹೇಳಿಕೊಂಡು ಬಂದವರನ್ನು ತಮ್ಮದೇ ಕಾರಿನಲ್ಲಿ ದಂಡಿನವರ ಠಾಣೆಗೆ ಕಳುಹಿಸಿ, ಪಿಎಸ್ಐ ಮತ್ತು ಅಲ್ಲಿನ ಪೊಲೀಸರು ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ.
2021ರ ಆಗಸ್ಟ್ 28ರಂದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನಶಿವರ ಠಾಣಾ ವ್ಯಾಪ್ತಿಯ ಕೋಡಿಹಳ್ಳಿ ಎಂಬಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ವಿವಾದ ಆಗಿತ್ತು. ನಾಗೇಂದ್ರಪ್ಪ ಹಾಗೂ ಪಕ್ಕದ ಮನೆಯ ಶಿವಪ್ರಕಾಶ್ ಮತ್ತು ಆತನ ಮಗ ಚಂದನ್ ನಡುವೆ ಜಗಳವಾಗಿತ್ತು. ನಾಗೇಂದ್ರಪ್ಪ ಹಾಗೂ ಪತ್ನಿ ಶಿವಮ್ಮಗೆ ಚಂದನ್ ಮತ್ತು ಶಿವಪ್ರಕಾಶ್ ಹಲ್ಲೆಗೈದಿದ್ದರು. ನಾಗೇಂದ್ರಪ್ಪ ಮತ್ತು ಶಿವಮ್ಮಗೆ ಗಂಭೀರ ಗಾಯಗಳಾಗಿ ತುರುವೇಕೆರೆ ಆಸ್ಪತ್ರೆ ಹಾಗೂ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ವೈದ್ಯರು ಇದು ಮಾರಣಾಂತಿಕ ಹಲ್ಲೆ ಎಂದು ವರದಿ ನೀಡಿದ್ದನ್ನ ಹಿಡಿದು ನಾಗೇಂದ್ರಪ್ಪ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನ ಕೇಸ್ ನೀಡಿದ್ದರು.
ಆದರೆ ಆರೋಪಿಗಳನ್ನು ಬಂಧಿಸದೆ ಪಿಎಸ್ಐ ನಿರ್ಲಕ್ಷ್ಯ ವಹಿಸಿದ್ದರು. ಈ ನಡುವೆ ಆರೋಪಿ ಶಿವಪ್ರಕಾಶ್ಗೆ ಜಾಮೀನು ದೊರೆತಿದ್ದು, ಮಗ ಚಂದನ್ ತಲೆಮರೆಸಿಕೊಂಡಿದ್ದ. ಹೀಗಾಗಿ ಆರೋಪಿ ಚಂದನ್ನನ್ನು ಬಂಧಿಸುವಂತೆ ದೂರುದಾರ ನಾಗೇಂದ್ರಪ್ಪ ಠಾಣೆಗೆ ಬಂದು ಪಿಎಸ್ಐ ಬಳಿ ಮನವಿ ಮಾಡಿದ್ದರು. ಆರೋಪಿಯನ್ನು ಬಂಧಿಸೋಣ. ಅದಕ್ಕಾಗಿ ನೀನೊಂದು ಬಾಡಿಗೆ ವಾಹನ ಮಾಡಿಕೊಂಡು ಬಾ ಎಂದು ಪಿಎಸ್ಐ ಶಿವಲಿಂಗಯ್ಯ ಹೇಳಿ ಕಳುಹಿಸಿದ್ದರು.
ಪದೇ ಪದೆ ಠಾಣೆಗೆ ಭೇಟಿ ನೀಡುತ್ತಿದ್ದರೂ, ನಿರ್ಲಕ್ಷ್ಯ ವಹಿಸಿದ ಪಿಎಸ್ಐ ವರ್ತನೆಗೆ ರೋಸಿಹೋದ ನಾಗೇಂದ್ರಪ್ಪ ಗುರುವಾರ ತುಮಕೂರಿಗೆ ಬಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್ಕುಮಾರ್ ಅವರನ್ನು ಭೇಟಿಯಾಗಿ ಕಣ್ಣೀರಿಟ್ಟಿದ್ದಾರೆ. ಪಿಎಸ್ಐ ವರ್ತನೆಗೆ ಕೆಂಡಾಮಂಡಲರಾದ ಎಸ್ಪಿ, ಸ್ವತಃ ತಮ್ಮ ಕಾರಿನಲ್ಲೇ ನಾಗೇಂದ್ರಪ್ಪ ಮತ್ತು ಅವರ ಕಡೆಯವರನ್ನ ಕುಳಿತುಕೊಳ್ಳುವಂತೆ ಹೇಳಿ, ತಮ್ಮ ಕಾರು ಚಾಲಕನನ್ನು ಕರೆದು ಇವರನ್ನು ಸೀದಾ ದಂಡಿನಶಿವರ ಪೊಲೀಸ್ ಠಾಣೆಗೆ ಬಿಟ್ಟು ಬಾ ಎಂದಿದ್ದಾರೆ. ಕಾರು ಬಂದಿದೆ, ಆರೋಪಿಯನ್ನು ಬಂಧಿಸುವಂತೆ ಪಿಎಸ್ಐ ಅವರಿಗೆ ಹೇಳುವಂತೆ ನಾಗೇಂದ್ರಪ್ಪ ಅವರನ್ನು ಕಳುಹಿಸಿದ್ದರು.
ಪೊಲೀಸ್ ಠಾಣೆ ಮುಂದೆ ಸಾಹೇಬರ ಕಾರು ಕಂಡೊಡನೆ ದಂಗಾದ ದಂಡಿನಶಿವರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ನಿಂತಲ್ಲಿಯೇ ಬೆವತು ಹೋಗಿದ್ದಾರೆ. ಅಷ್ಟೇ ಅಲ್ಲ, ದಂಡಿನಶಿವರ ಪಿಎಸ್ಐ ಶಿವಲಿಂಗಯ್ಯಗೆ ದೂರವಾಣಿ ಕರೆ ಮಾಡಿದ ಎಸ್ಪಿ ರಾಹುಲ್, ಆರೋಪಿ ಎಲ್ಲೇ ಇದ್ದರೂ ಒಂದು ದಿನ ಟೈಮ್ ಕೊಡ್ತೇನೆ. ಬಂಧಿಸಿ ತರಬೇಕು ಎಂದು ಖಡಕ್ ವಾರ್ನಿಂಗ್ ಮಾಡಿದ್ದು ಜಿಲ್ಲೆಯಲ್ಲಿ ಚರ್ಚೆಯ ವಸ್ತುವಾಗಿದೆ.
SP Rahul Kumar gives surprise shock treatment to Tumkuru Police inspector who was neglecting in arresting the accused. He was harassing the Complainant to send a private car for the arrest of the accused when this was brought to the notice of SP Rahul Kumar he sent his government car to the police station which put the Station Inspector in Uttar Shock.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am