ಬ್ರೇಕಿಂಗ್ ನ್ಯೂಸ್
14-01-22 10:50 pm HK Desk news ಕರ್ನಾಟಕ
ಬೆಂಗಳೂರು, ಜ.14 : ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಗದೀಶ್ ವಿ ಸದಂ, ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ.ಚನ್ನಣ್ಣನವರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ ಬೇಲಿಯೇ ಎದ್ದು ಹೊಲ ಮೇಯ್ತು ಎಂಬ ಗಾದೆಯಂತೆ, ಪೊಲೀಸ್ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ.ಚನ್ನಣ್ಣನವರ್ ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೂಡ ಪೊಲೀಸ್ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಒತ್ತಾಯಿಸಿದ್ದಾರೆ.
CID SP Ravi D Channannavar and 3 other police officers alleged for taking bribe of 50 lakhs from accused. A complaint has been given to the police chief of Karnataka.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm