ಬ್ರೇಕಿಂಗ್ ನ್ಯೂಸ್
21-01-22 04:33 pm HK Desk news ಕರ್ನಾಟಕ
ಬೆಂಗಳೂರು, ಜ.21 : ನಿರೀಕ್ಷೆಯಂತೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಆದೇಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಆಸ್ಪತ್ರೆಗೆ ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆ ಶೇಕಡ 5ರಷ್ಟಿದೆ. ಹಾಗಾಗಿ, ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯ ಬಳಿಕ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಇದೇ ವೇಳೆ, ನೈಟ್ ಕರ್ಫ್ಯೂ ಎಂದಿನಂತೆ ಮುಂದುವರಿಯಲಿದ್ದು, ಈಗ ಇರುವಂತೆ 50–50 ನಿಯಮಗಳು ಯಥಾಸ್ಥಿತಿ ಮುಂದುವರಿಯಲಿವೆ. ರಾತ್ರಿ10 ರಿಂದ ಮುಂಜಾನೆ 5ರ ವರೆಗೆ ಮಾತ್ರ ಕರ್ಫ್ಯೂ ಇರಲಿದೆ. ಬಾರ್, ರೆಸ್ಟೋರೆಂಟ್ , ಹೋಟೆಲ್ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ. 50 ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಕಂದಾಯ ಸಚಿವ ಅಶೋಕ ಹೇಳಿದರು. ಬೆಂಗಳೂರಿನಲ್ಲಿ ಪಾಸಿಟಿವ್ ಪ್ರಮಾಣ ಹೆಚ್ಚು ಇರುವುದರಿಂದ ಮುಂದಿನ ಶುಕ್ರವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಬೇರೆ ಊರುಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾದರೆ ಶಾಲೆಯನ್ನು ಒಂದು ಘಟಕವಾಗಿ ಪರಿಗಣಿಸಿ, ಹೆಚ್ಚು ಪ್ರಕರಣ ಬಂದರೆ 7 ದಿನ, ಅದಕ್ಕಿಂತ ಕಡಿಮೆ ಬಂದರೆ 3 ದಿನ ಶಾಲಾ– ಕಾಲೇಜು ಮುಚ್ಚಲು ಸೂಚನೆ ನೀಡಲಾಗಿದೆ ಎಂದರು.
ಇತರ ಎಲ್ಲ ನಿಯಮಗಳು ಈಗಿರುವಂತೆ ಮುಂದುವರೆಯುತ್ತವೆ. ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ರಾಲಿಗಳ ಮೇಲೆ ನಿರ್ಬಂಧ ಮುಂದುವರೆಯಲಿದೆ. ಮದುವೆ, ಸಭೆ, ಸಮಾರಂಭ, ದೇವಸ್ಥಾನಗಳಿಗೆ ಈಗ ಇರುವ ನಿಯಮವೇ ಮುಂದುವರೆಯಲಿವೆ. ಬಾರ್, ಕ್ಲಬ್ಗಳು, ಪಾರ್ಟಿಗಳಲ್ಲಿ ರಾತ್ರಿ ವೇಳೆ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಲು ರಾತ್ರಿ ಕರ್ಫ್ಯೂ ಮುಂದುವರೆಯುತ್ತದೆ ಎಂದು ಸಚಿವ ಆರ್.ಅಶೋಕ ಸ್ಪಷ್ಟಪಡಿಸಿದರು.
ವೀಕೆಂಡ್ ಕರ್ಫ್ಯೂ ವಿಚಾರದಲ್ಲಿ ರಾಜ್ಯದಾದ್ಯಂತ ಭಾರೀ ವಿರೋಧ ಕೇಳಿಬಂದಿತ್ತು. ವ್ಯಾಪಾರಿಗಳು ಸೇರಿ ವಿವಿಧ ವಲಯಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕರಾವಳಿಯಲ್ಲಿ ಎಲ್ಲ ವಲಯದ ವರ್ತಕರು ಸೇರಿ ಸಂಘಟನೆ ಕಟ್ಟಿಕೊಂಡು ರಾಜ್ಯ ಸರಕಾರಕ್ಕೆ ಎಚ್ಚರಿಕೆ ರವಾನಿಸಿದ್ದರು. ಕರ್ಫ್ಯೂ ಮುಂದುವರಿಸಿದರೆ ಅದನ್ನು ಮುರಿದು ವ್ಯಾಪಾರ ಸಂಕೀರ್ಣ ಓಪನ್ ಮಾಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮೇಲೆ ತೀವ್ರ ಒತ್ತಡವೂ ಬಿದ್ದಿತ್ತು.
Karnataka Chief Minister Basavaraj Bommai on Friday said a decision on lifting COVID restrictions in the state including weekend and night curfew will be made on a “scientific basis”. CM Bommai said the spike in COVID-19 cases in the state and how the third wave has unfolded will be taken into consideration while making the decision.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am