ಬ್ರೇಕಿಂಗ್ ನ್ಯೂಸ್
23-01-22 02:46 pm HK Desk news ಕರ್ನಾಟಕ
ಬೆಂಗಳೂರು, ಜ.23 : ಕರ್ನಾಟಕ - ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ದಚಿತ್ರ ಈ ಬಾರಿಯ ಗಣರಾಜ್ಯೋತ್ಸವ ಪರೇಡಿಗೆ ಆಯ್ಕೆಯಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ. ಎಸ್ ಹರ್ಷ ಪ್ರಕಟಿಸಿದ್ದಾರೆ.
ಈ ಬಾರಿ ಆಯ್ಕೆಯಾದ 12 ರಾಜ್ಯಗಳ ಸ್ತಬ್ದಚಿತ್ರಗಳಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಏಕೈಕ ಸ್ತಬ್ದಚಿತ್ರ ಕರ್ನಾಟಕದ್ದು. ಅಲ್ಲದೆ, ರಾಜ್ಯದ ಸ್ತಬ್ದಚಿತ್ರ ಸತತವಾಗಿ ಹದಿಮೂರನೇ ಬಾರಿಗೆ ಆಯ್ಕೆಯಾಗುತ್ತಿದೆ ಎಂಬ ಮಾಹಿತಿಯನ್ನು ಪಿ.ಎಸ್ ಹರ್ಷ ನೀಡಿದ್ದಾರೆ.
ಕೌಶಲ್ಯದಿಂದ ತಯಾರಿಸಿದ ಮಡಿಕೆ, ಸೂಕ್ಷ್ಮವಾಗಿ ಕೆತ್ತನೆ ಮಾಡಿದ ಶ್ರೀಗಂಧದ ಚಿಕಣಿ (ಮಿನಿಯೇಚರ್ಸ್ ಅಥವಾ ಕಿರು ಮಾದರಿ ವಸ್ತುಗಳು), ಕೈಮಗ್ಗದ ಸೀರೆಗಳು, ಕೈಯಿಂದಲೇ ವಿಶಿಷ್ಟ ಕಲಾಕೃತಿಗಳು ಒಳಗೊಂಡಂತೆ 16 ಕರಕುಶಲ ವಸ್ತುಗಳನ್ನು ಭೌಗೋಳಿಕ ಸೂಚಿ ಸಂಕೇತದ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಚೆನ್ನಪಟ್ಟಣ ಮತ್ತು ಕಿನ್ನಾಳ ಮರದ ಕೆತ್ತನೆ ವಸ್ತುಗಳು ( ಇನ್ಲೇ ಕಾರ್ವಿಂಗ್ಸ್ ), ಕಂಚಿನ ಪ್ರತಿಮೆಗಳು, ಮೆರುಗೆಣ್ಣೆಯ ಹಾಗೂ ಬಿದರಿಯ ಕಲಾಕೃತಿಗಳು ಕರ್ನಾಟಕದ ಪ್ರಮುಖ ಕಲೆಗಳಾಗಿವೆ.
ಟಿರ್ರಾಕೋಟ ಅತ್ಯಂತ ಹಳೆಯ ಕಲೆಯಾಗಿದೆ. ವಿಜಯನಗರದ ಅರಸರು ಪೋಷಿಸುತ್ತಿದ್ದ ಕಿನ್ನಾಳದ ಮೆರುಗೆಣ್ಣೆಯ ಕಲಾಕೃತಿಗಳು, ಕರ್ನಾಟಕದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ಮತ್ತು ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಶ್ರೀಗಂಧದ ಕಲಾಕೃತಿಗಳು ಹಾಗೂ ದಂತದ ಕೆತ್ತನೆಯ ಕಲೆ ರಾಜ್ಯಕ್ಕೇ ವಿಶಿಷ್ಟ ಎನಿಸಿದೆ.
ಸ್ತಬ್ಧಚಿತ್ರದಲ್ಲಿ ಏನಿದೆ ?
ಕರ್ನಾಟಕದ ಸ್ತಬ್ದಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಹಾಗೂ ಕೆಳಗಿನ ಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ. ಜೊತೆಗೆ, ಗಂಜೀಫಾ ಕಲಾಕೃತಿಗಳಿವೆ. ಸ್ತಬ್ದಚಿತ್ರದ ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿರುವ ದೊಡ್ಡ ಪ್ರಮಾಣದ ಹೂಜಿ. ಹೂಜಿಯ ಇಕ್ಕೆಲಗಳಲ್ಲಿ ಕರಾವಳಿಯ ವೈಶಿಷ್ಠ್ಯವನ್ನು ಬಿಂಬಿಸುವ ಭೂತಾರಾಧನೆಯ ಮುಖವಾಡವನ್ನು ಹೊತ್ತ ಲೋಹದ ಕಲಾಕೃತಿಗಳಿವೆ. ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ದಪಡಿಸಿರುವ ನವಿಲುಗಳಿವೆ.
ಅಲ್ಲದೆ, ಮಧ್ಯ ಭಾಗದ ಹಿಂಬದಿಯಲ್ಲಿ ಕಿನ್ನಾಳದ ವೈಶಿಷ್ಟ್ಯ ಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಸ್ತಬ್ದಚಿತ್ರದ ಕೇಂದ್ರ ಬಿಂದುವಿನಂತೆ ಕಂಗೊಳಿಸುತ್ತಿದೆ. ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚೆನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ ( ಜಮಖಾನೆ ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳಿವೆ.
ಸ್ತಬ್ದಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಕಲಾಲೋಕದ ಮಹಾ ಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ ಇದೆ.
ಅದೇ ಭಾಗದಲ್ಲಿ ಕರ್ನಾಟಕದ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೋರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆಗಳು, ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡಾ ಸ್ತಬ್ದಚಿತ್ರಕ್ಕೆ ವಿಶೇಷ ಮೆರುಗನ್ನು ನೀಡಿದೆ.
ಸ್ತಬ್ಧಚಿತ್ರದ ತಯಾರಕರು ಯಾರು ?
ಈ ಬಾರಿಯ ಸ್ತಬ್ದಚಿತ್ರ ನಿರ್ಮಾಣ ಕಾರ್ಯದಲ್ಲಿ ಹೆಸರಾಂತ ಕಲಾ ನಿರ್ದೇಶಕ ಶಶಿಧರ್ ಅಡಪ ನೇತೃತ್ವದ ಪ್ರತಿರೂಪಿ ಸಂಸ್ಥೆಯ ಒಂದು ನೂರಕ್ಕೂ ಹೆಚ್ಚು ಕಲಾವಿದರು, ಸುಪ್ರಸಿದ್ಧ ಸಂಗೀತ ನಿರ್ದೇಶಕ ಪ್ರವೀಣ್ ದಯಾನಂದ ರಾವ್ ಮತ್ತು ತಂಡ ಹಾಗೂ ಜಾನಪದ ತಜ್ಞ ಡಾ ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡವು ಶ್ರಮಿಸಿದೆ.
Bengaluru Karnataka's tableau for the Republic Day parade in New Delhi is themed 'Karnataka, the cradle of traditional handicrafts'. As per information, the then Department of Information and Publicity (DIP) was assigned the job of making the tableau on behalf of the state and the DIP first participated in the Republic Day Parade in New Delhi in 1972.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am