ಬ್ರೇಕಿಂಗ್ ನ್ಯೂಸ್
30-01-22 12:22 pm HK Desk news ಕರ್ನಾಟಕ
ತುಮಕೂರು, ಜ 30: ಕಾರು ಖರೀದಿಗೆ ಹೋಗಿದ್ದ ವೇಳೆ ಅವಮಾನಕ್ಕೆ ಒಳಗಾಗಿದ್ದ ತುಮಕೂರು ರೈತನ ಮನೆಗೆ ಹೊಸ ಗೂಡ್ಸ್ ಜೀಪ್ ಕಳುಹಿಸುವ ಮೂಲಕ ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಶುಭಕೋರಿದ್ದಾರೆ.
ಟ್ವೀಟ್ ಮೂಲಕ ರೈತನಿಗೆ ಶುಭಕೋರಿರುವ ಆನಂದ್ ಮಹೀಂದ್ರಾ ನಮ್ಮ ಮಹೀಂದ್ರಾ ಕುಟುಂಬಕ್ಕೆ ಸುಸ್ವಾಗತ ಎಂದು ಹೇಳಿದ್ದಾರೆ. ಕಳೆದ ಜನವರಿ 21 ರಂದು ಗೂಡ್ಸ್ ಜೀಪ್ ಖರೀದಿಸಲು ಹೆಬ್ಬೂರು ಹೋಬಳಿಯ ರಾಮನಪಾಳ್ಯದ ಯುವರೈತ ಕೆಂಪೇಗೌಡ, ತುಮಕೂರಿನ ಮಹೀಂದ್ರಾ ಶೋರೂಂಗೆ ಬಂದಿದ್ದ. ಈ ವೇಳೆ ಆತನ ವೇಷಭೂಷಣ ನೋಡಿ ಶೋ ರೂಂ ಸಿಬ್ಬಂದಿ ಅವಮಾನ ಮಾಡಿದ್ದರು. ಆತನ ಸ್ನೇಹಿತರಿಗೂ ಅವಮಾನಿಸಿದ್ದರು.
ಶೋರೂಂ ಸಿಬ್ಬಂದಿ ಅವಮಾನ ಮಾಡಿದ್ದಕ್ಕೆ ಕೇವಲ ಅರ್ಧ ಗಂಟೆಯಲ್ಲಿ 10 ಲಕ್ಷ ರೂ. ಹಣ ತಂದು ಸಿಬ್ಬಂದಿ ಮುಂದಿಟ್ಟಿದ್ದ. ಇದನ್ನು ನೋಡಿದ ಶೋರೂಂ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದರು. ಈ ಘಟನೆ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿ, ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿತ್ತು.
ಇದರ ಬೆನ್ನಲ್ಲೆ ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಟ್ವಿಟ್ ಮೂಲಕ ರೈತನಿಗೆ ಕ್ಷಮೆಯಾಚಿಸಿದ್ದರು. ಇದೀಗ ರೈತ ಕೆಂಪೇಗೌಡನ ಮನೆ ಬಾಗಿಲಿಗೆ ಮಹೀಂದ್ರಾ ಗೂಡ್ಸ್ ಜಿಪ್ ಡೆಲಿವರಿ ಮಾಡುವ ಮೂಲಕ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ. ಅಲ್ಲದೆ, ನಮ್ಮ ಕುಟುಂಬಕ್ಕೆ ಸ್ವಾಗತ ಎಂದು ಹೇಳಿದ್ದಾರೆ.
ಜನವರಿ 21ರಂದು ನಮ್ಮ ಡೀಲರ್ ಬಳಿ ಕೆಂಪೇಗೌಡ ಮತ್ತು ಆತನ ಸ್ನೇಹಿತರು ಬಂದಾಗ ನಡೆದ ಘಟನೆಗೆ ನಾವು ವಿಷಾದ ವ್ಯಕ್ತಪಡಿಸುತ್ತೇವೆ. ನಾವು ಭರವಸೆ ನೀಡಿದಂತೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಮಹೀಂದ್ರಾ ಆಯ್ಕೆ ಮಾಡಿದ್ದಕ್ಕಾಗಿ ನಾವು ಕೆಂಪೇಗೌಡರಿಗೆ ಧನ್ಯವಾದ ಅರ್ಪಿಸುತ್ತೇವೆ. ನಾವು ಅವರನ್ನು ಮಹೀಂದ್ರಾ ಕುಟುಂಬಕ್ಕೆ ಸ್ವಾಗತಿಸುತ್ತೇವೆ ಎಂದು ಟ್ವೀಟ್ ಮೂಲಕ ಮಹೀಂದ್ರಾ ಆಟೋಮೋಟಿವ್ ತಿಳಿಸುವ ಮೂಲಕ ವಿವಾದಕ್ಕೆ ಸುಖಾಂತ್ಯ ಆಡಿದೆ.
Here is our official update with reference to the incident that happened at one of our dealers' showrooms in Tumukur, Karnataka. https://t.co/m1lTpObXVC pic.twitter.com/etzQTonykP
— Mahindra Automotive (@Mahindra_Auto) January 28, 2022
Industrialist Anand Mahindra has heartily welcomed the farmer who had been reportedly humiliated at an SUV showroom in Tumukur, Karnataka, into the Mahindra & Mahindra family.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am