ಬ್ರೇಕಿಂಗ್ ನ್ಯೂಸ್
04-02-22 07:26 pm HK Desk news ಕರ್ನಾಟಕ
ಬೆಂಗಳೂರು, ಫೆ.4 : ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗಿರುವುದರಿಂದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ, ತಜ್ಞರು ಮತ್ತು ಹಿರಿಯ ಸಚಿವರ ಜೊತೆ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.
ಜಿಮ್, ಸಿನಿಮಾ, ಯೋಗ, ಸ್ವಿಮ್ಮಿಂಗ್ ಪೂಲ್ ಗಳಿಗೆ ನೀಡಲಾಗಿದ್ದ 50 ಶೇಕಡಾ ಸಾಮರ್ಥ್ಯ ಆದೇಶವನ್ನು ಹಿಂಪಡೆದಿದ್ದು, ಪೂರ್ಣಕಾಲಿಕವಾಗಿ ತೆರೆಯಲು ಅವಕಾಶ ನೀಡಲಾಗಿದೆ. ಜನವರಿ 15ರಿಂದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತಷ್ಟು ನಿರ್ಬಂಧ ತೆರವುಗೊಳಿಸಿ, ಮುಕ್ತ ಅವಕಾಶ ನೀಡಲಾಗಿದೆ ಎಂದು ಸಭೆಯ ಬಳಿಕ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ ಕೊನೆ ವಾರದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಿತ್ತು. ಹಾಗಾಗಿ ಕೆಲವು ಕ್ಷೇತ್ರಗಳಲ್ಲಿ ಕಠಿಣ ನಿರ್ಬಂಧಗಳನ್ನು ಹಾಕಲಾಗಿತ್ತು. ಜನವರಿ ಕೊನೆಯ ವೇಳೆಗೆ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಜನವರಿಯಲ್ಲಿ 5ರಿಂದ 6 ಪರ್ಸೆಂಟ್ ಜನ ಅಷ್ಟೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಎರಡು ಶೇಕಡಾಕ್ಕೆ ಇಳಿದಿದೆ. ಕೋವಿಡ್ ನಿರ್ಬಂಧದಿಂದ ಸಿನಿಮಾ ರಂಗಕ್ಕೆ ದೊಡ್ಡ ನಷ್ಟವಾಗಿತ್ತು. ಹೀಗಾಗಿ ಅವರಿಗೆ ಪೂರಕವಾಗಿ ಕ್ರಮ ತೆಗೆದುಕೊಂಡಿದ್ದೇವೆ. ನಾಳೆಯಿಂದಲೇ 100 ಶೇಕಡಾ ಭರ್ತಿ ಮಾಡಲು ಅವಕಾಶ ನೀಡಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಹಾಗೆಂದು ಯಾರು ಕೂಡ ಮೈಮರೆಯುವುದಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಇರುತ್ತದೆ. ಥಿಯೇಟರ್ ಒಳಗೆ ತಿಂಡಿ, ಪದಾರ್ಥ ಒಯ್ಯುವುದಕ್ಕೆ ಅವಕಾಶ ಇಲ್ಲ. ಎರಡು ಡೋಸ್ ಲಸಿಕೆ ಪಡೆದವರಿಗಷ್ಟೇ ಜಿಮ್, ಥಿಯೇಟರ್, ಸ್ವಿಮ್ಮಿಂಗ್ ಪೂಲ್ ಗಳಲ್ಲಿ ಅವಕಾಶ ನೀಡಲು ಮಾರ್ಗಸೂಚಿ ನೀಡಲಾಗುವುದು ಎಂದು ಹೇಳಿದ ಸುಧಾಕರ್, ಕೊರೊನಾ ಜೊತೆಗೆ ನಾವು ಬದುಕ ಬೇಕಾಗಿದೆ. ಅದಕ್ಕಾಗಿ ಕಠಿಣ ಕ್ರಮಗಳನ್ನು ಮುಂದುವರಿಸುತ್ತಿದ್ದೇವೆ. ಆದರೆ ಮದುವೆ, ಸಮಾರಂಭ, ಪ್ರತಿಭಟನೆಗಳಿಗೆ ಇರುವ ನಿಯಮ ಮುಂದುವರಿಯುತ್ತದೆ. ಮೂರನೇ ಅಲೆಯ ತೀವ್ರ ಕಡಿಮೆಯಾಗಿರುವುದರಿಂದ ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದರು.
Further relaxing COVID-19 curbs, the Karnataka government on Friday decided to allow theatres, gyms, yoga centres and swimming pools in the state to operate at full capacity. The decision was taken at a meeting chaired by Chief Minister Basavaraj Bommai with the Health Minister, senior officials and technical advisory committee representatives.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm