ಬ್ರೇಕಿಂಗ್ ನ್ಯೂಸ್
09-02-22 03:18 pm HK Desk news ಕರ್ನಾಟಕ
ಮಂಡ್ಯ, ಫೆ.9 : ಜೈಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಜೈಹೋ ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿಗೆ ಜಮಾತ್ ಉಲೆಮಾ ಎ-ಹಿಂದ್ ಸಂಘಟನೆಯ ಪ್ರಮುಖನೊಬ್ಬ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾನೆ.
ಮಂಡ್ಯದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹುಡುಗರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದರು. ಈ ವೇಳೆ, ಬುರ್ಖಾಧಾರಿ ವಿದ್ಯಾರ್ಥಿನಿ ಬಂದಿದ್ದು ಜೈಶ್ರೀರಾಮ್ ಘೋಷಣೆಯಿಂದ ಸಿಟ್ಟಿಗೆದ್ದ ವಿದ್ಯಾರ್ಥಿನಿ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಎಂದು ಕೂಗಿ ಪ್ರತಿಭಟಿಸಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗೆ ಘೋಷಣೆ ಕೂಗಿದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಭಾರೀ ಪ್ರಚಾರ ಪಡೆದಿದ್ದು ಮುಸ್ಲಿಂ ಸಂಘಟನೆಗಳನ್ನು ಆಕರ್ಷಿಸಿದೆ. ವಿಡಿಯೋ ಫೇಸ್ಬುಕ್ ನಲ್ಲಿ ವೈರಲ್ ಆಗಿದ್ದು ಜಮಾತ್ ಉಲೆಮಾ-ಎ-ಹಿಂದ್ ಪ್ರಮುಖನಾದ ಮೈಸೂರು ಮೂಲದ ಮಹಮೂದ್ ಮದನಿ ಎಂಬವರು ಜಾಲತಾಣದಲ್ಲಿ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ವಿಧ್ಯಾರ್ಥಿನಿ, ನಾನು ಎಂದಿನಂತೆ ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು ಈ ವೇಳೆ ವಿದ್ಯಾರ್ಥಿಗಳ ಗುಂಪು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗತೊಡಗಿದ್ದರು. ನಾನು ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದೆ. ಆ ಗುಂಪಿನಲ್ಲಿದ್ದವರಲ್ಲಿ ಕೇವಲ ಶೇ.10ರಷ್ಟು ಮಂದಿ ಮಾತ್ರ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಒಂದು ತುಂಡು ಬಟ್ಟೆ ವಿಚಾರಕ್ಕೆ ಅವರು ನಮ್ಮ ಶಿಕ್ಷಣವನ್ನು ಕಸಿದುಕೊಳ್ಳಲು ಯತ್ನಿಸುತ್ತಿದ್ದಾರೆ. ನಮಗೆ ಶಿಕ್ಷಣವೇ ಮೊದಲ ಆದ್ಯತೆ. ಬುರ್ಖಾ ಮತ್ತು ಹಿಜಬ್ ಧರಿಸಿ ಕಾಲೇಜಿಗೆ ಬರುತ್ತಿದ್ದೆವು. ಆದ್ರೆ ಕಾಲೇಜಿನ ಒಳಗೆ ಬುರ್ಖಾ ತೆಗೆದು ಹಿಜಬ್ ಮಾತ್ರ ಉಳಿಸಿಕೊಳ್ಳುತ್ತಿದ್ದೆವು. ಇದು ಮುಂಚೆಯಿಂದಲೂ ನಡೆದುಕೊಂಡು ಬಂದಿದೆ ಎಂದು ಆ ವಿದ್ಯಾರ್ಥಿನಿ ಹೇಳಿದ್ದಾರೆ.
Mandya Muslim Hijab Student rewarded Five Lakhs cash price by Jamaat for bravely tackling Hindu students at college. As the Karnataka hijab row continues to make headlines, a disturbing video of a solitary student in a burqa being heckled by a group of saffron shawl clad students has come to the fore. Videos of the incident, which happened in the state’s Mandya district, that were aired on regional TV channels start with the student arriving at PES College in her two-wheeler on the morning of February 8, Tuesday.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am