ಬ್ರೇಕಿಂಗ್ ನ್ಯೂಸ್
18-09-20 02:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 18: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.
ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ದೇವರಾಜ್ ಮಗ ಕಾರ್ಪೊರೇಟರ್ ಯುವರಾಜ್, ನಟ ಸಂತೋಷ್ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ:
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟೀಸ್ ಬಂದಿದೆ. ನಾನು ಈಗ ಹೈದರಾಬಾದ್ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ ಎಂದರು.
ಡ್ರಗ್ ಪ್ರಕರಣದಲ್ಲಿ ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದರೆ, ಈಗ ಡ್ರಗ್ ಉರುಳು ಮತ್ತಷ್ಟು ನಟ- ನಟಿಯರನ್ನು ಸುತ್ತಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಈಗಾಗ್ಲೇ ಸ್ಟಾರ್ ದಂಪತಿ ದಿಗಂತ್- ಐಂದ್ರಿತಾ ಅವರನ್ನು ಸಿಸಿಬಿ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ರಾಜಕಾರಣಿಗಳ ಪುತ್ರರು ಇದ್ದಾರೆಂಬ ಮಾಹಿತಿ ಇದ್ದರೂ, ಸಿಸಿಬಿ ಇನ್ನೂ ಆ ಬಗ್ಗೆ ಕಾರ್ಯಾಚರಣೆಗೆ ಮುಂದಾಗಿಲ್ಲ. ಬಂಧಿತರು ನೀಡುತ್ತಿರುವ ಮಾಹಿತಿ ಆಧರಿಸಿ ಒಬ್ಬೊಬ್ಬರನ್ನೇ ವಿಚಾರಣೆಗೆ ಕರೆಸಲಾಗುತ್ತಿದೆ.
ಡ್ರಗ್ ಪೆಡ್ಲರ್ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಆರ್.ವಿ.ದೇವರಾಜ್ ಪುತ್ರ ಕಾರ್ಪೊರೇಟರ್ ಯುವರಾಜ್ ಪಾಲ್ಗೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm