ಬ್ರೇಕಿಂಗ್ ನ್ಯೂಸ್
15-02-22 01:56 pm HK Desk news ಕರ್ನಾಟಕ
ಮಡಿಕೇರಿ, ಫೆ.15 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕೂಡ 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಶಾಲೆಯಿಂದ ಮನೆಗೆ ಮರಳಿದ್ದಾರೆ.
ಹಿಜಾಬ್ ಧರಿಸುವುದು ನಮ್ಮ ಧರ್ಮ. ಹಿಜಬ್ ಇಲ್ಲದೆ ನಾವು ಶಾಲೆಗೆ ತೆರಳುವುದಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದೇ ಇದ್ದರೆ ಮನೆಯಲ್ಲೇ ಕೂರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದು ಇವರ ಬೆಂಬಲಕ್ಕೆ ಪೋಷಕರು ನಿಂತಿದ್ದಾರೆ.



ಹಿಜಾಬ್ ಇಲ್ಲದೆ ನಾವು ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಆಂಟನಿ ಆಲ್ವಾರಿಸ್ ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸದೆ, ಹಿಜಾಬ್ ಧರಿಸಲು ಬಿಡದಿದ್ದರೆ ನಾವು ಶಾಲೆಗೆ ಬರಲ್ಲ ಎಂದು ಹಿಂದಕ್ಕೆ ತೆರಳಿದ್ದಾರೆ.



ಶಾಲಾ ಆವರಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ಬಂದು ಒಬ್ಬೊಬ್ಬರೇ ಮನೆಗೆ ಮರಳಿದ್ದಾರೆ. ಶಾಲೆಯ ಆವರಣದಲ್ಲಿ ನಿಂತು ಪ್ರಾಂಶುಪಾಲರು ಮಕ್ಕಳ ಮನವೊಲಿಕೆ ಮಾಡಲು ಯತ್ನಿಸಿದರೂ, ಕೆಲವು ವಿದ್ಯಾರ್ಥಿನಿಯರು ಕೇಳಲಿಲ್ಲ.



ನೆಲ್ಲಿಹುದಿಕೇರಿಯಲ್ಲಿ ಸ್ವಲ್ಪ ಮುಸ್ಲಿಂ ಬಾಹುಳ್ಯ ಇದ್ದು ಒಂದಷ್ಟು ಮಂದಿ ಹಿಜಾಬ್ ತೆಗೆದು ತರಗತಿಗೆ ಬಂದರೆ, ಕೆಲವು ಖಟ್ಟರ್ ವಾದಿಗಳು ತಮ್ಮ ಮಕ್ಕಳನ್ನು ಹಿಜಾಬ್ ತೆಗೆಯದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಎರಡನೇ ದಿನವೂ ಈ ಶಾಲೆಯಲ್ಲಿ ಹೈಡ್ರಾಮಾ ಮುಂದುವರಿದಿದೆ. ಸೋಮವಾರ 30 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಶಾಲೆಯಿಂದ ಮರಳಿ ಮನೆಗೆ ತೆರಳಿದ್ದರು.
Madikeri 20 Hijab students go back home from school because they were asked to remove.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm