ಬ್ರೇಕಿಂಗ್ ನ್ಯೂಸ್
15-02-22 11:24 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಪೊಲೀಸರಿಗೆ ಮೇಲಿನ ಸಿಟ್ಟಿನಲ್ಲಿ ಟ್ರಾಫಿಕ್ ಸಿಗ್ನಲ್ ಕಂಬದ ಬ್ಯಾಟರಿಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಅಶೋಕ ನಗರದ ಪೊಲೀಸರು ಬಂಧಿಸಿದ್ದಾರೆ. ದಂಪತಿಯನ್ನು ಸಿಕಂದರ್ ಮತ್ತು ನಜ್ಮಾ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಬರೋಬ್ಬರಿ 20 ಲಕ್ಷ ಮೌಲ್ಯದ ಸುಮಾರು 230 ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಾಕ್ ಡೌನ್ ವೇಳೆ ತಮ್ಮ ಟೀ ಅಂಗಡಿಯಲ್ಲಿದ್ದ ವಸ್ತುಗಳನ್ನ ಪೊಲೀಸರು ದಾಳಿ ನೆಪದಲ್ಲಿ ನಾಶಪಡಿಸಿದ್ದರು ಎಂಬ ಸಿಟ್ಟಿನಲ್ಲಿ ಪೊಲೀಸರಿಗೆ ಬುದ್ಧಿ ಕಲಿಸಲು ನಿರ್ಧರಿಸಿದ್ದ ದಂಪತಿ ನಗರದ ಸಿಗ್ನಲ್ ಗಳಲ್ಲಿನ ಬ್ಯಾಟರಿಗಳ ಕಳ್ಳತನಕ್ಕೆ ಇಳಿದಿದ್ದರು.
ಗಂಡ - ಹೆಂಡತಿ ಸೇರಿಕೊಂಡು ಬೆಳಗಿನ ಜಾವ 3 ಗಂಟೆಯಿಂದ 5 ಗಂಟೆಯೊಳಗೆ ಕಳ್ಳತನ ಮಾಡುತ್ತಿದ್ದರು. ತಮ್ಮ ಟಿವಿಎಸ್ ಎನ್ ಟಾರ್ಕ್ ಬೈಕ್ ನಲ್ಲಿ ಒಂದು ಕಟರ್ ಸಹಿತ ಸ್ಥಳಕ್ಕೆ ಬಂದು ಟ್ರಾಫಿಕ್ ಸಿಗ್ನಲ್ ಕಂಬದಲ್ಲಿ ವೈರ್ ಕಟ್ ಮಾಡಿ ಸುಲಭವಾಗಿ ಬ್ಯಾಟರಿ ಎತ್ತಿಕೊಂಡು ಪರಾರಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಆರೋಪಿಗಳನ್ನ ಹೆಡೆಮುರಿ ಕಟ್ಟಲು ವಿಶೇಷ ಕಾರ್ಯಾಚರಣೆ ನಡೆಸಿದ ಅಶೋಕನಗರ ಪೊಲೀಸ್ ಠಾಣೆಯ ಎಎಸ್ಐ ದೇವರಾಜ್ ಮತ್ತು ಇನ್ಸ್ಪೆಕ್ಟರ್ ಮಲ್ಲೇಶ್ ಬೊಳೆತ್ತಿನ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕದ್ದ 7 ಸಾವಿರ ಬೆಲೆಯ ಬ್ಯಾಟರಿಗಳನ್ನ ಕೇವಲ 1 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಇದೇ ಸುಳಿವು ಆಧರಿಸಿ ತನಿಖೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ.
The police on Wednesday said that a couple have been arrested for stealing batteries from traffic signals. They added that 230 batteries stolen from 68 traffic junctions over the last few months have also been recovered. These batteries are used to run traffic signals.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm