ಬ್ರೇಕಿಂಗ್ ನ್ಯೂಸ್
17-02-22 10:52 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.17 : ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗದಿದ್ದರೆ ಸೇನೆಗೆ ಜವಾಬ್ದಾರಿ ನೀಡುತ್ತೇವೆ ಎಂದು ಕರ್ನಾಟಕ ಹೈಕೋರ್ಟ್ ಬಿಬಿಎಂಪಿ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ಹೈಕೋರ್ಟ್ ನಿಂದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಜಾಮೀನು ಸಹಿತ ವಾರೆಂಟ್ ಜಾರಿಯಾಗಿತ್ತು. ಕೊನೆಗೂ ಇಂದು ಕೋರ್ಟ್ ಗೆ ಹಾಜರಾದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಎಸ್. ಪ್ರಭಾಕರ್ ಗೈರು ಹಾಜರಿಗೆ ಬೇಷರತ್ ಆಗಿ ನ್ಯಾಯಾಲಯದ ಕ್ಷಮೆ ಕೋರಿದರು.
ಈ ವೇಳೆ, ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಎಂಜಿನಿಯರ್ ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಛೀಮಾರಿ ರೀತಿಯಲ್ಲಿ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಹೈಕೋರ್ಟ್ ಪ್ರಶ್ನೆ ಮಾಡಿತು.
ರಸ್ತೆಗಳನ್ನು ಸರಿಪಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಪೈಥಾನ್ ಯಂತ್ರ ಬಳಸಲು ಟೆಂಡರ್ ಕರೆಯಲಾಗಿದೆ. 20 ವರ್ಷ ಬಾಳಿಕೆಯ ರಸ್ತೆಗಳನ್ನು ನಿರ್ಮಿಸಲಾಗುವುದು. ಸ್ಮಾರ್ಟ್ ಸಿಟಿ ಯೋಜನೆಯಡಿಯೂ ಕಾಮಗಾರಿ ನಡೆಯುತ್ತಿದೆ ಎಂದು ಹೈಕೋರ್ಟ್ಗೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಹೇಳಿದರು. ಆಗ ಕೋರ್ಟ್, ನಿಮ್ಮ ಅಧೀನ ಇಂಜಿನಿಯರ್ಗಳೇ ಸಮಸ್ಯೆ ಸೃಷ್ಟಿಸಿದ್ದಾರೆ.
ನಿಮ್ಮ ಮನಸ್ಸನ್ನು ಸ್ವತಂತ್ರವಾಗಿ ಅನ್ವಯಿಸಿ, ರಸ್ತೆ ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಬಯಸದ ನಿಮ್ಮ ಎಂಜಿನಿಯರ್ಗಳ ನಂಬಿ ಕೂರಬೇಡಿ. ಬಾಳಿಕೆ ಬರುವಂತೆ ರಸ್ತೆ ದುರಸ್ತಿ ಮಾಡಬೇಕು. ದುರಸ್ತಿಯಾದ ರಸ್ತೆಗಳ ಪರಿಶೀಲನೆ ನಡೆಸುತ್ತೇವೆ. ರಸ್ತೆ ಗುಂಡಿಗಳಿಂದ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿ ಇಂಜಿನಿಯರ್ಗಳಿಗೆ ನೀಡುವುದಾಗಿ ಬಿಬಿಎಂಪಿ ಪ್ರಧಾನ ಇಂಜಿನಿಯರ್ಗೆ ಹೈಕೋರ್ಟ್ ಎಚ್ಚರಿಕೆ ನೀಡಿತು.
Bengaluru pothole menace, the High Court had directed on February 7 that the BBMP engineer-in-chief should be present before the court for the inquiry to be taken up on February 15. The court had also sought information on technology used for pothole filling and measures taken on building quality roads in the city.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm