ಬ್ರೇಕಿಂಗ್ ನ್ಯೂಸ್
23-02-22 10:45 pm Bengaluru Correspondent ಕರ್ನಾಟಕ
ಬೆಂಗಳೂರು ಫೆ.23 : ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೇಳಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ಸಂಘಟನೆ ನೇರ ಕಾರಣ. ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಪೋಷಕರನ್ನು ಪ್ರಚೋದಿಸಿ, ಸಮವಸ್ತ್ರ ವಿಚಾರವನ್ನು ದೊಡ್ಡ ವಿವಾದವನ್ನಾಗಿ ಮಾಡಿದೆ ಎಂದು ಕಾಲೇಜು ಪರ ವಕೀಲರು ಹೈಕೋರ್ಟ್ ನಲ್ಲಿ ಬುಧವಾರ ವಾದ ಮಂಡಿಸಿದ್ದಾರೆ.
ಕಾಲೇಜು ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಎಸ್.ಎಸ್. ನಾಗಾನಂದ್, ಸಿಎಫ್ ಐ ನೋಂದಾಯಿತ ಸಂಘಟನೆಯಲ್ಲ. ವಿದ್ಯಾರ್ಥಿ ಸಂಘಟನೆ ಎಂದು ಹೇಳಲಾಗುತ್ತಿದೆ. ಅದು ಕಾಲೇಜಿಗೆ ಬಂದು ಹಿಜಾಬ್ ಗೆ ಅನುಮತಿ ನೀಡಬೇಕೆಂದು ಆಗ್ರಹ ಮಾಡಿತ್ತು. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಚೋದನೆಯನ್ನೂ ನೀಡಿದೆ. ಈ ಬಗ್ಗೆ ಸರ್ಕಾರದ ಗುಪ್ತಚರ ದಳದಲ್ಲಿ ಹೆಚ್ಚಿನ ಮಾಹಿತಿ ಸಿಗಬಹುದು ಎಂದರು.
ಆಗ ನ್ಯಾಯಪೀಠ, ಅಡ್ವೊಕೇಟ್ ಜನರಲ್ ಅವರನ್ನು ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ಎಜಿ, ಆ ಬಗ್ಗೆ ಸರ್ಕಾರದ ಬಳಿ ಮಾಹಿತಿ ಇದೆ, ಅದನ್ನು ಮೊಹರು ಮಾಡಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು ಎಂದರು.
ಅದಕ್ಕೆ ಆಕ್ಷೇಪ ಎತ್ತಿದ ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹೀರ್, ಒಂದು ಸಂಘಟನೆಯನ್ನು ಗುರಿ ಮಾಡುವುದು ಸರಿಯಲ್ಲ. ಬೇರೆ ಸಂಘಟನೆಗಳು ಕೇಸರಿ ಶಾಲು ಹಂಚಿವೆ ಎಂಬ ಕುರಿತು ಮಾಧ್ಯಮಗಳಲ್ಲಿ ವರದಿ ಬಂದಿವೆ. ಹಾಗಾಗಿ ಎಲ್ಲ ಸಂಘಟನೆಗಳ ಬಗ್ಗೆಯೂ ಸರ್ಕಾರ ವರದಿ ನೀಡಲಿ ಎಂದು ಹೇಳಿದರು.
2004ರಿಂದಲೇ ಸಮವಸ್ತ್ರ ಜಾರಿ
ಕಾಲೇಜಿನಲ್ಲಿ ಸಮವಸ್ತ್ರ ಧರಿಸುವುದು 2004ರಿಂದಲೂ ಕಡ್ಡಾಯವಾಗಿದೆ ಮತ್ತು ಅದನ್ನು ಎಲ್ಲ ವಿದ್ಯಾರ್ಥಿಗಳೂ ನಿರಂತರವಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ. ಯಾವೊಬ್ಬ ವಿದ್ಯಾರ್ಥಿಯೂ ಅದನ್ನು ಪ್ರಶ್ನಿಸಿಲ್ಲ. ಅರ್ಜಿದಾರರೂ ಸಹ ಎರಡು ವರ್ಷಗಳಿಂದ ಆ ನಿಯಮ ಪಾಲನೆ ಮಾಡುತ್ತಿದ್ದರು. ಇದೀಗ ಇದ್ದಕ್ಕಿದ್ದಂತೆ ಆ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ ಎಂದು ನಾಗಾನಂದ್ ಹೇಳಿದರು.
ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ಹಾಗೂ ಪೋಷಕರು, ಅಧ್ಯಾಪಕರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದಾರೆ, ಅವುಗಳಲ್ಲಿ ಯಾವುದೇ ಹುರುಳಿಲ್ಲ ಎಂದು ತಳ್ಳಿಹಾಕಿದ ನಾಗಾನಂದ್, ಅಧ್ಯಾಪಕರು ಎಲ್ಲ ವಿದ್ಯಾರ್ಥಿಗಳನ್ನೂ ಒಂದೇ ರೀತಿಯಲ್ಲಿ ನೋಡುತ್ತಿದ್ದಾರೆ, ಆದರೂ ತಾರತಮ್ಯದಿಂದ ನೋಡುತ್ತಿದ್ದರು, ಹೊಡೆಯುತ್ತಿದ್ದರು ಎಂದೆಲ್ಲಾ ಆರೋಪಿಸಿರುವುದನ್ನು ಒಪ್ಪಲಾಗದು ಎಂದು ತಿಳಿಸಿದರು.
ಕಾಲೇಜು ಆಡಳಿತ ಮಂಡಳಿ ಪರ ಹಿರಿಯ ನ್ಯಾಯವಾದಿ ಸಜ್ಜನ್ ಪೂವಯ್ಯ ವಾದ ಮಂಡಿಸಿದ್ದು ಜಾತ್ಯತೀತವಾಗಿ ಕೂಡಿರಬೇಕಾದ ಶಿಕ್ಷಣ ಸಂಸ್ಥೆಯಲ್ಲಿ ಬೇರೆ ಬೇರೆ ಧರ್ಮವನ್ನು ಪ್ರತಿನಿಧಿಸುವ ರೀತಿ ಉಡುಗೆ ತೊಡಲು ಅವಕಾಶ ನೀಡಲಾಗದು ಎಂದರು.
ಶಿಕ್ಷಣವನ್ನು ನೀಡುವುದು ರಾಜ್ಯದ ಜಾತ್ಯತೀತ ಚಟುವಟಿಕೆಯಾಗಿದೆ ಮತ್ತು ಜಾತ್ಯತೀತ ವಸ್ತ್ರ ಸಂಹಿತೆ ಕಾಪಾಡಿಕೊಳ್ಳುವುದು ಅತ್ಯುನ್ನತವಾದ ಪರಿಗಣನೆಯಾಗಿದೆ. ಸಂವಿಧಾನದ ವಿಧಿ 25 (2) ರ ಅಡಿಯಲ್ಲಿ ಶಾಲೆಯಲ್ಲಿ ಯಾವುದೇ ಧಾರ್ಮಿಕ ಸಂಕೇತವಿಲ್ಲದಿರುವುದನ್ನು ಖಚಿತಪಡಿಸಿಕೊಳ್ಳಲು ಶಾಲೆಯು ಬಾಧ್ಯತೆ ಹೊಂದಿದೆ. ಆದರೂ ಆರ್ಟಿಕಲ್ 25 ರ ಅಡಿಯಲ್ಲಿ ಹಿಜಾಬ್ ಧರಿಸುವುದನ್ನು ಅತ್ಯಗತ್ಯ ಅಭ್ಯಾಸವೆಂದು ಪರಿಗಣಿಸಲಾಗಿದೆ ಎಂದು ಉಡುಪಿ ಸರ್ಕಾರಿ ಪಿಯು ಕಾಲೇಜು ಸಮಿತಿ ಪರವಾಗಿ ಹಿರಿಯ ವಕೀಲ ಸಜ್ಜನ್ ಪೂವಯ್ಯ ವಾದ ಮಂಡಿಸಿದರು. ತದನಂತರ ಪ್ರಕರಣದ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2-30ಕ್ಕೆ ನ್ಯಾಯಪೀಠ ಮುಂದೂಡಿತು.
Naganand said the hijab row was started by some students owing allegiance to CFI. To this, the Chief Justice sought to know what the CFI stood for and what its role was. The senior counsel said the organisation was coordinating and organising protests in the state. “It is also a voluntary organisation, which is spearheading and drumbeating in favour of students (demanding wearing of hijab in classrooms),” he said.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm