ಬ್ರೇಕಿಂಗ್ ನ್ಯೂಸ್
05-03-22 09:07 pm HK Desk news ಕರ್ನಾಟಕ
ಹಾವೇರಿ, ಮಾ 05: ಉಕ್ರೇನ್ನಲ್ಲಿ ಬಾಂಬ್ ದಾಳಿಗೆ ಬಲಿಯಾದ ಜಿಲ್ಲೆಯ ನವೀನ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಅಲ್ಲದೇ, ನವೀನ್ ಅವರ ಹಿರಿಯ ಸಹೋದರನಿಗೆ ಉದ್ಯೋಗ ನೀಡುವ ಭರವಸೆಯನ್ನು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.
ಇಂದು ನವೀನ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ದಾಳಿಗೆ ಉಕ್ರೇನ್ನಲ್ಲಿ ಮೃತಪಟ್ಟ ರಾಜ್ಯದ ಯುವಕ ನವೀನ್ ಪಾರ್ಥಿವ ಶರೀರವನ್ನು ತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ. ಕೇಂದ್ರ ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಸುತ್ತಲೂ ಬಾಂಬಿಂಗ್ ಹೆಚ್ಚಾಗಿದೆ. ಹೀಗಾಗಿ ನವೀನ್ ಮೃತದೇಹ ತರಲು ಆಗುತ್ತಿಲ್ಲ. ಇಂದು ಯುದ್ಧ ವಿರಾಮ ನೀಡಲಾಗಿದೆ. ಆದಷ್ಟು ಬೇಗ ಪಾರ್ಥಿವ ಶರೀರವನ್ನ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಉಕ್ರೇನ್ನಲ್ಲಿ ಯುದ್ಧ ನಿಲ್ಲಲಿ ಎಂದು ಪ್ರಾರ್ಥಿಸಲಾಗುವುದು. ಅಲ್ಲಿ ಸಿಲುಕಿರುವ ಕನ್ನಡಿಗರು ನಡೆದುಕೊಂಡು ಬೇರೆ ದೇಶದ ಗಡಿಗಳಿಗೆ ಬಂದಿದ್ದಾರೆ. ಕೆಲವರು ಬಂಕರ್ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ 10 ಜನರು ಹೋಗಿದ್ದರು. ಐವರು ಬಂದಿದ್ದಾರೆ, ಉಳಿದ ಐವರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಹೇಳಿದರು.

ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಚೆಕ್ ವಿತರಣೆ:
ಉಕ್ರೇನ್ನಲ್ಲಿ ರಷ್ಯಾದ ಬಾಂಬ್ ದಾಳಿಗೆ ಅಸುನೀಗಿದ ನವೀನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೇ, ಹಿರಿಯ ಸಹೋದರನಿಗೆ ಸೂಕ್ತ ಉದ್ಯೋಗ ನಿಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.
ನವೀನ್ ಪಾರ್ಥಿವ ಶರೀರ ತಾಯ್ನಾಡಿಗೆ ತರುವ ಹಾಗೂ ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವುದು ನಮ್ಮ ಮುಂದಿರುವ 2 ದೊಡ್ಡ ಸವಾಲುಗಳು ಎಂದು ಸಿಎಂ ಬೊಮ್ಮಾಯಿ ಹೇಳಿದರು.
Chief Minister Basavaraj Bommai meets the family of Naveen SG, the Karnataka medical student who was killed in Ukraine recently. The Chief Minister handed over a cheque of Rs 25 lakh to the bereaved family members of the victim.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm