ಬ್ರೇಕಿಂಗ್ ನ್ಯೂಸ್
13-03-22 03:19 pm HK Desk news ಕರ್ನಾಟಕ
ಮಂಡ್ಯ, ಮಾ.13: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ. ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲು ಕಾರ್ಯಕರ್ತರು ಆಫರ್ ನೀಡುತ್ತಿದ್ದಾರೆ. ಆದ್ರೆ ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ತೀರ್ಮಾನ ಮಾಡುತ್ತೇನೆ. ಆದ್ರೆ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡೋದಿಲ್ಲ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ನಿಲ್ಲೋದಿಲ್ಲ ಎನ್ನುವ ಮೂಲಕ ಜಿಟಿ ದೇವೇಗೌಡರಿಗೆ ಕ್ಷೇತ್ರವನ್ನು ಬಿಟ್ಟು ಕೊಡುವ ಸುಳಿವು ನೀಡಿದ್ದಾರೆ.
ನನ್ನ ಪ್ರಕಾರ ಅವಧಿಗು ಮುನ್ನ ಚುನಾವಣೆ ಬರಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಕೂಡ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಸಿಟಿ ರವಿ ಸೇರಿದಂತೆ ಹಲವರು ಹೇಳಿದ್ದಾರೆ. ಅವಧಿಗೂ ಮುನ್ನ ಯಾಕಾಗಿ ಚುನಾವಣೆ ಮಾಡ್ತಾರೆ. ಏಪ್ರಿಲ್ ನಲ್ಲಿ ಚುನಾವಣೆ ಇರೋದು. ಇದೆಲ್ಲ ಬರೀ ಊಹಾಪೋಹಗಳು ಅಷ್ಟೇ. ಅವಧಿಗು ಮುನ್ನ ಚುನಾವಣೆ ಬಂದ್ರೆ ನಾವು ಸಿದ್ದರಿದ್ದೇವೆ. ಜನರು ನಮ್ಮ ಪರವಾಗಿದ್ದಾರೆ. ಗೆಲುವು ನಮ್ಮದೇ ಆಗಿರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು !
ಹಿರಿಯ ನಾಯಕ ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆದ ವಿಚಾರದ ಪ್ರಶ್ನೆಗೆ, ವಲ್ಲದ ಗಂಡನಿಗೆ ಮೊಸರಲ್ಲು ಕಲ್ಲು ಅಂತಾರಲ್ಲ. ಆ ರೀತಿ ಆಗಿದೆ ಇಬ್ರಾಹಿಂ ಆರೋಪಗಳು. ಪಕ್ಷದಿಂದ ಬಿಡ್ತಾ ಇರೋದ್ರಿಂದ ಆರೋಪ ಮಾಡ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಬ್ರಾಹಿಂಗೆ ಎಲ್ಲವನ್ನು ಕೊಟ್ಟಿದೆ. ಆದ್ರೆ ಮನುಷ್ಯನಿಗೆ ಆಸೆ ಇರಬೇಕು, ದುರಾಸೆ ಇರಬಾರದು. ಹಾಲಿ ಶಾಸಕ ಸಂಗಮೇಶ್ ಗೆ ಟಿಕೆಟ್ ತಪ್ಪಿಸಿ ಭದ್ರಾವತಿಯಲ್ಲಿ ಇಬ್ರಾಹಿಂಗೆ ಟಿಕೆಟ್ ಕೊಟ್ಟಿದ್ದೇವು. ಅಲ್ಲಿಯು ಆತ ಸೋತ. ಅದಾದ ಮೇಲೆ ಎಂಎಲ್ ಸಿ ಮಾಡಿದ್ವಿ. ಎಂಎಲ್ಸಿ ಯನ್ನು ರಿನಿವಲ್ ಮಾಡಿದ್ವಿ. ಆದ್ರು ಕೂಡ ಪಕ್ಷ ಬಿಟ್ಟೋಗಿದ್ದಾನೆ. ನಾನು ಪಕ್ಷ ಬಿಡಬೇಡ ಅಂತ ಫೋನ್ ಮಾಡಿ ಹೇಳಿದೆ. ಆದ್ರೆ ಲೀಡರ್ ಆಫ್ ಅಪೋಸಿಷನ್ ಸಿಗಲಿಲ್ಲ ಅಂತ ಪಕ್ಷ ಬಿಟ್ಟಿದ್ದಾರೆ. ರಾಜಕಾರಣದಲ್ಲಿ ಆಸೆಗಳಿರಬೇಕು ಆದ್ರೆ ದುರಾಸೆ ಇರಬಾರದು ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
Chamundeswari is not contesting again in the constituency. Activists are already offering me to stand by four quarters. Former CM Siddaramaiah has said that he has not decided where to stand.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm