ಬ್ರೇಕಿಂಗ್ ನ್ಯೂಸ್
16-03-22 05:39 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.16: ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿರುವ ತೀರ್ಪನ್ನು ವಿರೋಧಿಸಿ ಮಾ.17 ರಂದು ರಾಜ್ಯ ಬಂದ್ ನಡೆಸಲು ಮುಸ್ಲಿಂ ಸಂಘಟನೆಗಳ ನಾಯಕರು ಕರೆ ನೀಡಿದ್ದಾರೆ. ಅಮೀರ್ ಇ- ಷರೀಯತ್ ಕರ್ನಾಟಕ ಎನ್ನುವ ಸಂಘಟನೆಯ ನಾಯಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶದಿ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನ ಸ್ವಯಂಪ್ರೇರಿತ ಬಂದ್ ನಡೆಸುವಂತೆ ಹೇಳಿದ್ದಾರೆ.
ಅಮೀರ್ ಇ -ಷರೀಯತ್ ಎನ್ನುವುದು ರಾಜ್ಯದಲ್ಲಿ ಎಲ್ಲ ಮುಸ್ಲಿಂ ಸಂಘಟನೆಗಳ ಪೈಕಿ ಪ್ರಮುಖವಾಗಿದ್ದು ಇದರ ಮುಖ್ಯಸ್ಥರ ಕರೆಯನ್ನು ಓಗೊಟ್ಟು ಇತರ ಸಂಘಟನೆಗಳ ನಾಯಕರು ಬಂದ್ ಬೆಂಬಲಿಸಲು ಕರೆ ನೀಡುತ್ತಿದ್ದಾರೆ. ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವುದನ್ನು ಸಂಘಟನೆಗಳ ನಾಯಕರು ವಿರೋಧಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ಅರ್ಜಿಯನ್ನು ಕೂಡಲೇ ಪರಿಗಣಿಸಲು ಕೋರ್ಟ್ ನಿರಾಕರಿಸಿತ್ತು. ಅಲ್ಲದೆ, ಹೋಲಿ ರಜೆಯ ಬಳಿಕ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ವಿದ್ಯಾರ್ಥಿನಿಯರ ಬೆನ್ನಿಗೆ ನಿಂತಿದ್ದಾರೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಸಭೆ ನಡೆಸಿದ ಮಸೀದಿ ಕಮಿಟಿಗಳ ಮುಖ್ಯಸ್ಥರು, ವಿವಿಧ ಸಂಘಟನೆಗಳ ನಾಯಕರು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಮುಸ್ಲಿಮರು ಎಲ್ಲ ವ್ಯಾಪಾರ, ವಹಿವಾಟುಗಳನ್ನು ಸ್ಥಗಿತಗೊಳಿಸಿ ಸಾತ್ವಿಕ ವಿರೋಧ ವ್ಯಕ್ತಪಡಿಸಬೇಕು. ಆದರೆ ಯುವಕರು ಸಂಯಮ ಕಾಪಾಡಬೇಕು. ಯಾರನ್ನೂ ಬಲವಂತದಿಂದ ಬಂದ್ ಮಾಡಲು ಮುಂದಾಗಬಾರದು. ಮೂಲೆ, ಮೂಲೆಯಲ್ಲಿರುವ ಎಲ್ಲ ರೀತಿಯ ಮುಸ್ಲಿಮರು ಸ್ವಯಂ ಆಗಿ ಬಂದ್ ಮಾಡಿ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು ಎಂದು ನಾಯಕರು ಹೇಳಿದ್ದಾರೆ.
Ameer-e-Shariat of Karnataka (head priest) Maulana Sagheer Ahmad Khan Rashadi on Wednesday issued a call for a state-wide bandh on Thursday and called upon the community members to observe it peacefully.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm