ಬ್ರೇಕಿಂಗ್ ನ್ಯೂಸ್
22-09-20 10:42 am Headline Karnataka News Network ಕರ್ನಾಟಕ
ಮಡಿಕೇರಿ, ಸೆಪ್ಟಂಬರ್ 22: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನಿನ್ನೆ ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.
2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮ್ ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm