ಬ್ರೇಕಿಂಗ್ ನ್ಯೂಸ್
05-04-22 08:04 pm Bengaluru Correspondent ಕರ್ನಾಟಕ
ಬೆಂಗಳೂರು, ಎ.5: ಮಸೀದಿಯಲ್ಲಿ ಧ್ವನಿವರ್ಧಕಗಳ ಶಬ್ದಮಾಲಿನ್ಯ ಕಡಿಮೆಗೊಳಿಸಬೇಕು, ಈ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶ ಪಾಲನೆ ಮಾಡಬೇಕು ಎಂಬುದಾಗಿ ಹಿಂದು ಸಂಘಟನೆಗಳು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿವೆ. ಈಗಾಗ್ಲೇ ಈ ಬಗ್ಗೆ ಬೆಂಗಳೂರಿನಲ್ಲಿ ಹಿಂದು ಸಂಘಟನೆಗಳ ನಾಯಕರು ಅಭಿಯಾನ ಕೈಗೆತ್ತಿಕೊಂಡಿದ್ದು ಮಸೀದಿ ಆಜಾನ್ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಇದೇ ವೇಳೆ, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಆರು ತಿಂಗಳ ಹಿಂದೆಯೇ ಕೋರ್ಟ್ ಆದೇಶದ ಬಗ್ಗೆ ಬೆಂಗಳೂರು ನಗರ ವ್ಯಾಪ್ತಿಯ ಮಂದಿರ, ಮಸೀದಿಗಳಿಗೆ ನೋಟೀಸ್ ನೀಡಿದ್ದೇವೆ. ಅಲ್ಲದೆ, ಕಾರ್ಖಾನೆ, ಪಬ್ ಮಾಲೀಕರಿಗೂ ನೋಟೀಸ್ ನೀಡಿದ್ದೇವೆ. ಇಂತಿಷ್ಟೇ ಡೆಸಿಬಲ್ ಇರುವಷ್ಟು ಧ್ವನಿವರ್ಧಕ ಬಳಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
![]()
ಅಲ್ಲದೆ, ಬೆಂಗಳೂರಿನಲ್ಲಿ ಧಾರ್ಮಿಕ ಮುಖಂಡರ ಜೊತೆಗೂ ಸಭೆ ನಡೆಸಲಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಿದ್ದೇವೆ. ಹೆಚ್ಚಿನ ಕಡೆ ಧಾರ್ಮಿಕ ಮುಖಂಡರು ಕೋರ್ಟ್ ಆದೇಶಕ್ಕೆ ತಲೆಬಾಗಿದ್ದಾರೆ. ಹೈಕೋರ್ಟ್ ಆದೇಶ ಏನಿದೆ, ಅದನ್ನು ಯಥಾವತ್ ಪಾಲನೆ ಮಾಡಬೇಕು. ಕಾನೂನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸಲಾಗುವುದು. ಈಗಾಗಲೇ ನಗರ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಕೇಸ್ ಗಳನ್ನ ದಾಖಲಿಸಲಾಗಿದೆ. ಹಲವೆಡೆ ಮೈಕ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಮಸೀದಿ ಧ್ವನಿವರ್ಧಕ- ಅನುಮತಿ ಕಡ್ಡಾಯ
ಇದೇ ವೇಳೆ, ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಅಳವಡಿಸುವುದಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆಗೆ ಪೊಲೀಸ್ ಅನುಮತಿಯನ್ನೂ ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಬೆಂಗಳೂರು ನಗರದ ಮಸೀದಿ ವ್ಯಾಪ್ತಿಯಲ್ಲಿ 55 ಡೆಸಿಬಲ್ ಮೀರದಂತೆ ಸ್ಪೀಕರ್ ಅಳವಡಿಸಲು ಸೂಚನೆ ನೀಡಲಾಗಿದೆ. ದಿನಕ್ಕೆ 5 ಬಾರಿ ಆಜಾನ್ ಕೂಗುವುದಕ್ಕೆ ಪ್ರತ್ಯೇಕ ಅನುಮತಿ ಪಡೆಯಬೇಕು. ರಾಜ್ಯಾದ್ಯಂತ ಮಸೀದಿಗಳಲ್ಲಿ ಶಬ್ದ ನಿಯಂತ್ರಣ ಮಾಪಕ ಅಳವಡಿಸಬೇಕು. ನಿಯಮ ಬಾಹಿರವಾಗಿ ಶಬ್ಧ ಹೊರಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ಪೊಲೀಸ್ ಠಾಣೆಗಳಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

83 ದೇವಸ್ಥಾನ, 125 ಮಸೀದಿಗಳಿಗೆ ನೋಟಿಸ್
ಇದೇ ವೇಳೆ, ಶಬ್ದ ಮಾಲಿನ್ಯ ವಿಚಾರದಲ್ಲಿ ನಿಯಮ ಪಾಲಿಸದ ಮಂದಿರ, ಮಸೀದಿ, ಚರ್ಚ್ ಗಳಿಗೆ ರಾಜ್ಯ ಸರಕಾರ ನೋಟೀಸ್ ನೀಡಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 125 ಮಸೀದಿ, 83 ದೇವಸ್ಥಾನ, 22 ಚರ್ಚ್ ಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಒಟ್ಟಾರೆ 301 ಧಾರ್ಮಿಕ ಸ್ಥಳಗಳಿಗೆ ಈ ಬಗ್ಗೆ ನೋಟಿಸ್ ಜಾರಿ ಮಾಡಿದ್ದು, 55 ಡೆಸಿಬಲ್ ಗಿಂತ ಹೆಚ್ಚು ಧ್ವನಿವರ್ಧಕ ಯಾವುದೇ ಧಾರ್ಮಿಕ ಆಚರಣೆಗೂ ಬಳಸದಂತೆ ಹೈಕೋರ್ಟ್ ಆದೇಶವನ್ನು ಯಥಾವತ್ ಪಾಲನೆ ಮಾಡಲು ಸರಕಾರ ಸೂಚನೆ ನೀಡಿದೆ.
The situation is turning more serious in Karnataka with Hindu organisations planning to broadcast Hindu prayers at the time of azaan in mosques.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm