ಬ್ರೇಕಿಂಗ್ ನ್ಯೂಸ್
09-04-22 11:09 pm Bengaluru Correspondent ಕರ್ನಾಟಕ
ಬೆಂಗಳೂರು, ಎ.9 : ಆಮ್ ಆದ್ಮಿ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಯತ್ತ ಕಣ್ಣಿಟ್ಟು ಸಿದ್ಧತೆ ಆರಂಭಿಸಿದ್ದು, ಪ್ರಭಾವಿ ನಾಯಕರು, ನಿವೃತ್ತ ಅಧಿಕಾರಿಗಳನ್ನು ಸೆಳೆದುಕೊಳ್ಳಲು ಮುಂದಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಆಮ್ ಆದ್ಮಿ ಸೇರಿದ ಬಳಿಕ ಮತ್ತೊಬ್ಬ ನಿವೃತ್ತ ಕೆಎಎಸ್ ಅಧಿಕಾರಿ ಮಥಾಯಿ ಅವರು ಆಪ್ ಸೇರಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಬಂದಿದೆ.
ಕೆಎಎಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಕೆ. ಮಥಾಯಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು. ಈ ಹಿಂದೆ ಸಕಾಲ ಯೋಜನೆ, ಬಿಬಿಎಂಪಿ ಜಾಹಿರಾತು ವಿಭಾಗದಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಮಥಾಯಿ, 2020ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ ದಿಟ್ಟ ನಿಲುವು, ಕ್ರಮಗಳಿಂದ ಸರ್ಕಾರವನ್ನೇ ಎದುರು ಹಾಕಿಕೊಂಡು ಸುದ್ದಿಯಾಗಿದ್ದವರು ಮಥಾಯಿ.

ಮಥಾಯಿ ಅವರು ಏಪ್ರಿಲ್ 21 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ ರೈತ ಸಂಘದ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ. ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳುವ ನಿರೀಕ್ಷೆಗಳಿವೆ. ಇದೇ ವೇಳೆ, ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಆಪ್'ಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಮಾಹಿತಿಗಳಿವೆ.

ಸಿದ್ದರಾಮಯ್ಯ ಅವರ ಕೆಲ ಬೆಂಬಲಿಗರು ಕೂಡ ಬಾದಾಮಿ ಕ್ಷೇತ್ರದಲ್ಲಿ ಆಪ್ ಸೇರ್ಪಡೆಗೊಳ್ಳಲು ಉತ್ಸುಕರಾಗಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರು ಭಾಸ್ಕರ್ ರಾವ್ ಅವರೊಂದಿಗೆ ದೆಹಲಿಯಲ್ಲಿ ಆಪ್ ಸೇರಿದ್ದರು. ಅಲ್ಲದೆ, ರಾಜ್ಯದ ವಿವಿಧೆಡೆ ಯಡಿಯೂರಪ್ಪ ಬೆಂಬಲಿಗರು ಮತ್ತು ಸಿದ್ದರಾಮಯ್ಯ ಬೆಂಬಲಿಗರು ಆಪ್ ಪಕ್ಷ ಸೇರಲು ಮುಂದಾಗಿದ್ದಾರೆ ಎನ್ನುವ ಮಾಹಿತಿಗಳಿವೆ. ಸದ್ಯದಲ್ಲೇ ಕೇಜ್ರಿವಾಲ್ ರಾಜ್ಯ ಪ್ರವಾಸ ಮಾಡಲಿದ್ದು ಆ ಹೊತ್ತಿಗೆ ಈ ವಿಚಾರ ಪಕ್ಕಾ ಆಗಲಿದೆ.
The aam aadmi party (aap) is gearing up for the assembly elections in the state to rope in influential leaders and retired bureaucrats. after former ips officer bhaskar rao joined the aam aadmi party( aap), another retired kas officer mathai is all set to join aap.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm