ಬ್ರೇಕಿಂಗ್ ನ್ಯೂಸ್
12-04-22 06:49 pm HK Desk news ಕರ್ನಾಟಕ
ಬೆಂಗಳೂರು, ಎ.12: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಕೂಡಲೇ ಅವರನ್ನು ಪೊಲೀಸರು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹ ಮಾಡಿದ್ದಾರೆ.
ಗುತ್ತಿಗೆದಾರ ಸಾಯುವುದಕ್ಕೂ ಮುನ್ನ ಈಶ್ವರಪ್ಪ ಹೆಸರು ಹೇಳಿದ್ದಾರೆ. ತನ್ನ ಸಾವಿಗೆ ಈಶ್ವರಪ್ಪನೇ ಕಾರಣ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಡಿಕೆಶಿ ಆಗ್ರಹಿಸಿದ್ದಾರೆ.

ರಾಜ್ಯ ಮಟ್ಟದ ಗುತ್ತಿಗೆದಾರರ ಸಂಘದ ನಾಯಕರೇ ಸರಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತನೂ ಆಗಿರುವ ಸಂತೋಷ್ ಪಾಟೀಲ್ ಬಗ್ಗೆಯೂ ಉಲ್ಲೇಖ ಮಾಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದರು. ಆದರೆ ಈಗ ಒಬ್ಬ ಗುತ್ತಿಗೆದಾರ ಸಾವಿಗೆ ಶರಣಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಯಾರನ್ನೂ ರಕ್ಷಿಸಲು ಹೋಗಬಾರದು. ತನಿಖೆ ನಡೆಸ್ತೀವಿ, ಸತ್ಯ ಹೊರತರುತ್ತೇವೆ ಎಂದು ಹೇಳಿ ಸಮಯ ತಳ್ಳುವ ಕೆಲಸ ಬೇಡ. ಕೂಡಲೇ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಬೇಕು. ಮುಖ್ಯಮಂತ್ರಿ ತಮ್ಮ ಹುದ್ದೆಯ ಗೌರವ ಕಾಪಾಡಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.

ಸಚಿವರ ವಿರುದ್ಧ ತುಂಬ ಗಂಭೀರವಾದ ಆರೋಪವನ್ನು ಮಾಡಲಾಗಿದೆ. ಹಾಗಾಗಿ ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿ, ತನಿಖೆಯ ನಾಟಕ ಮಾಡಬಾರದು. ಆಮೇಲೆ ಬಿ ರಿಪೋರ್ಟ್ ಹಾಕಿಸುವ ಕೆಲಸ ಮಾಡುವುದು ಬೇಡ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಸಂತೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಎಂದು ಡಿಕೆಶಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Karnataka Youth Congress workers on Tuesday staged a protest demanding the arrest of minister Eshwarappa in connection with the alleged suicide of contractor Santosh Patil. The protest was held near BJP leader Eshwarappa's house in Shivamogga. All workers were detained by police when they headed for Eshwarappa's residence.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm