ಬ್ರೇಕಿಂಗ್ ನ್ಯೂಸ್
27-04-22 10:56 am Bengaluru Correspondent ಕರ್ನಾಟಕ
ಬೆಂಗಳೂರು, ಎ.27: ಗೃಹ ಇಲಾಖೆಯಲ್ಲಿ ಮೇಜರ್ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರವು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಚುನಾವಣೆ ಮುಂದಿಟ್ಟುಕೊಂಡು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲು ನಿರ್ಧರಿಸಿದೆ.
ಪ್ರಮುಖವಾಗಿ ಬೆಂಗಳೂರು ನಗರ, ಮೈಸೂರು, ಮಂಗಳೂರು ನಗರ ಪೊಲೀಸ್ ಆಯುಕ್ತರ ಅವಧಿ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹೊಸ ಆಯುಕ್ತರ ನೇಮಕಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ನಡುವೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗೇರಲು ಹಿರಿಯ ಐಪಿಎಸ್ ಅಧಿಕಾರಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹುದ್ದೆಯಲ್ಲಿ 20 ತಿಂಗಳು ಪೂರೈಸಿದ್ದು ಅವರಿಂದ ತೆರವಾಗುವ ಸ್ಥಾನಕ್ಕಾಗಿ ಅಧಿಕಾರಿಗಳು ಲಾಬಿ ನಡೆಸಿದ್ದಾರೆ. ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಗುಪ್ತಚರ ದಳ ಮುಖ್ಯಸ್ಥ ಬಿ.ದಯಾನಂದ್ ಹೆಸರು ಬೆಂಗಳೂರು ಆಯುಕ್ತರ ಸ್ಥಾನಕ್ಕೆ ಮುಂಚೂಣಿಯಲ್ಲಿದೆ. ಅಲ್ಲದೆ, ಆಯಕಟ್ಟಿನ ಹುದ್ದೆ ಪಡೆಯಲು ಐಪಿಎಸ್ ಅಧಿಕಾರಿಗಳು ತಮ್ಮ ಪರಿಚಿತ ರಾಜಕಾರಣಿಗಳ ಮುಖಾಂತರ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಕಮಿಷನರ್ ಆಗಿರುವ ಶಶಿಕುಮಾರ್, ಮೈಸೂರಿಗೆ ವರ್ಗಾವಣೆ ಬಯಸಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕಾಗಿ ತೆರೆಮರೆಯಲ್ಲಿ ಆಪ್ತರ ಮೂಲಕ ಲಾಬಿ ನಡೆಸಿದ್ದಾರೆ.

ಮಂಗಳೂರು ಮತ್ತು ಮೈಸೂರು ನಗರ ಪೊಲೀಸ್ ಆಯುಕ್ತರು ಒಂದು ವರ್ಷ ಪೂರೈಸಿದ್ದಾರೆ. ಕನಿಷ್ಠ ಒಂದು ವರ್ಷ ಪೂರೈಸಿದ ಕಮಿಷನರ್, ಎಸ್ಪಿ ದರ್ಜೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಅವಕಾಶ ಇದೆ. ಹೀಗಾಗಿ, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಅಳೆದು ತೂಗಿ ಅಧಿಕಾರಿಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಬೆಂಗಳೂರು ನಗರ ಒಳಗೊಂಡಂತೆ ವಿವಿಧ ವಲಯಗಳ ಎಸಿಪಿ, ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಗಳ ವರ್ಗಾವಣೆಗೂ ಸರ್ಕಾರ ತಯಾರಿ ನಡೆಸಿದೆ ಎಂದು ತಿಳಿದುಬಂದಿದೆ. ಪೂರ್ವ ವಲಯದಲ್ಲಿ ಐಜಿಪಿ ಹುದ್ದೆಯೂ ಖಾಲಿಯಿದ್ದು ಅದನ್ನು ತುಂಬುವುದಕ್ಕೂ ಸರಕಾರ ಮುಂದಾಗಿದೆ.
Bangalore, Mangaluru and Mysuru Police commissioner to transfer soon as major surgery is plan is all ready by the Home Ministry department.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm