ಬ್ರೇಕಿಂಗ್ ನ್ಯೂಸ್
28-04-22 05:33 pm HK Desk News ಕರ್ನಾಟಕ
ಹುಬ್ಬಳ್ಳಿ, ಏ. 28: ರಾಜ್ಯದಲ್ಲಿ ಕೋವಿಡ್ 4ನೇ ಅಲೆ ಬಂದಿಲ್ಲ. ಏಪ್ರಿಲ್ 9 ರ ನಂತರ ಸ್ವಲ್ಪ ಪ್ರಮಾಣದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವದುದನ್ನು ಗಮನಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಯೂರೋಪ್ ಮತ್ತು ಇತರೆ ರಾಷ್ಟ್ರಗಳಲ್ಲಿ ಲಸಿಕೆ ಪಡೆಯದವರಿಂದ ಪುನಃ ಪ್ರಕರಣಗಳು ಉಲ್ಬಣವಾಗಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಎರಡೂ ಡೋಸ್ ಗಳನ್ನು 98% ರಷ್ಟು ಜನ ಲಸಿಕೆ ಪಡೆದಿದ್ದಾರೆ. ಮುನ್ನೆಚ್ಚರಿಕಾ ಡೋಸ್ ಗಳನ್ನು ಇನ್ನಷ್ಟು ಜನಕ್ಕೆ ನೀಡುವ ಬಗ್ಗೆ ಗಮನ ಹರಿಸಲಾಗುವುದು ಎಂದರು.
ಮೊನ್ನೆ ಕೇಂದ್ರ ಸರ್ಕಾರ 6ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಹಾಕಲು ಅನುಮೋದನೆ ನೀಡಿದೆ. ಅದನ್ನು ಪ್ರಾಥಮಿಕ ಶಾಲೆಗಳಲ್ಲಿ ಪ್ರಾರಂಭಿಸುವ ತೀರ್ಮಾನ ಮಾಡಲಾಗಿದೆ. ಲಸಿಕೆ ಹಾಕಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಕೋವಿಡ್ ಸೂಕ್ತ ನಡವಳಿಕೆ ಪಾಲಿಸಲು ಸೂಚನೆ ನೀಡಲಾಗಿದೆ. ಪರೀಕ್ಷೆ ಗಳನ್ನು ಹೆಚ್ಚಿಸಲಾಗುತ್ತಿದೆ. ವಿಶೇಷವಾಗಿ ಐ.ಎಲ್.ಐ ಮತ್ತು SARI ಪ್ರಕರಣಗಳು ಆಸ್ಪತ್ರೆಗಳಿಗೆ ದಾಖಲಾಗಿರುವವರ ಪರೀಕ್ಷೆ ಮಾಡಿ , ಅವರಲ್ಲಿ ಪಾಸಿಟಿವ್ ಬಂದರೆ, ಅದನ್ನು ಜಿನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗುವುದು. ಇದನ್ನು ಮಾಡಿದರೆ ಬೇರೆ ಬೇರೆ ರೂಪಾಂತರ ತಳಿಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಈಗಾಗಲೇ 8500 ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ಗಳನ್ನು ರಾಜ್ಯದಲ್ಲಿ ಮಾಡಲಾಗಿದೆ. 4 ಸಾವಿರ ಬೆಂಗಳೂರಿನಲ್ಲಿ ಹಾಗೂ ಇನ್ನಿತರೆ ಕಡೆಗಳಲ್ಲಿ 4 ಸಾವಿರ ಪರೀಕ್ಷೆಗಳನ್ನು ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆ ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಆರು ವರ್ಷದ ಮೇಲ್ಪಟ್ಟ ಮಕ್ಕಳಿಗೆ ಬೂಸ್ಟರ್ ಡೋಸ್ ಕೊಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅತಿ ಶೀಘ್ರದಲ್ಲಿಯೇ ಶಾಲಾ ಹಂತದಲ್ಲಿ ಮಕ್ಕಳಿಗೆ ಕೊರೊನಾಗೆ ವ್ಯಾಕ್ಸಿನ್ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಆರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಹಾಕಲು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದ್ದು, ಶಾಲೆಗಳು ಆರಂಭದ ನಂತರ ಶಾಲೆಗಳಲ್ಲಿಯೇ ಕೊರೊನಾ ಡೋಸ್ ನೀಡಲಾಗುವುದು. ರಾಜ್ಯದಲ್ಲಿ ಶೇ. 98 ಮಂದಿಗೆ ಕೊರೊನಾ ಎರಡು ಡೋಸ್ ನೀಡಲಾಗಿದೆ. ಹೆಚ್ಚುವರಿ ಬೂಸ್ಟರ್ ಡೋಸ್ ಕೊಡಲಾಗುತ್ತಿದೆ. ಹೀಗಾಗಿ ಯಾರೂ ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಬ ಪಡುವ ಅಗತ್ಯವಿಲ್ಲ. ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿದೆ.
Covid 19 4th wave didn't come in the state. Chief Minister Basavaraja Bommai said that the number of cases has been increased slightly after April 9 and necessary precautions are being taken.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm