ಬ್ರೇಕಿಂಗ್ ನ್ಯೂಸ್
01-05-22 01:58 pm HK Desk News ಕರ್ನಾಟಕ
ಮೈಸೂರು, ಮೇ 1: ನಾಯಕತ್ವವನ್ನು ಬದಲಿಸುವ ಸಾಮರ್ಥ್ಯವೇ ಬಿಜೆಪಿಗೆ ಇರುವ ದೊಡ್ಡ ಶಕ್ತಿ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳಲ್ಲಿ ಬಿಜೆಪಿ ನಡೆಸಿದ ಪ್ರಯೋಗಗಳು ಯಶಸ್ವಿಯಾಗಿವೆ. ಹಾಲಿ ಶಾಸಕರು, ಕುಟುಂಬ ಸದಸ್ಯರನ್ನು ಹೊರಗಿಟ್ಟು ಚುನಾವಣೆ ಎದುರಿಸುವ ಬಿಜೆಪಿ ತಂತ್ರಕ್ಕೆ ಫಲ ಸಿಕ್ಕಿದೆ. ಬಿಜೆಪಿಯು ಕೆಲವೆಡೆ ಅಧಿಕಾರಕ್ಕೆ ಬರಲು ಹೊಸ ಮುಖಗಳ ಪರಿಚಯವೇ ಕಾರಣ. ದೆಹಲಿ ಪಾಲಿಕೆ ಎಲೆಕ್ಷನ್ನಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲಿಲ್ಲ. ಗುಜರಾತ್ ಪಾಲಿಕೆಗಳಲ್ಲೂ ಟಿಕೆಟ್ ಪಡೆದ ಹೊಸಬರು ಗೆಲುವು ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಮಾತ್ರ ಇಂತಹ ಪ್ರಯೋಗಗಳು ನಡೆಯುತ್ತವೆ ಎಂದು ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ ನೀಡಿರುವುದು ಬಿಜೆಪಿ ನಾಯಕರಲ್ಲಿ ಸಂಚಲನ ಮೂಡಿಸಿದೆ.
ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರಿಗೆ ನಿವೃತ್ತಿ ನೀಡಲಾಯಿತು. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದೆವು ಎಂದರು. ಕರ್ನಾಟಕದ ವಿಧಾನಸಭೆ ಚುನಾವಣೆಯು ಸನಿಹದಲ್ಲಿಯೇ ಇರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೀಡಿರುವ ಹೇಳಿಕೆಯು ಕುತೂಹಲ ಮೂಡಿಸಿದೆ.

ಸಂತೋಷ್ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಲ್.ಸಂತೋಷ್ ಅವರು ಹೇಳಿದ್ದು ಸರಿಯಿದೆ ಎಂದರು. ಗುಜರಾತಿನ ಕಾರ್ಪೊರೇಷನ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಬಿ.ಎಲ್.ಸಂತೋಷ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಸಿ.ಟಿ.ರವಿ, ಅವರು ಯಾವ ಉದ್ದೇಶದಲ್ಲಿ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಚುನಾವಣೆಯಲ್ಲಿ ಗೆಲ್ಲುವ ಶಕ್ತಿ ಇರುವವರಿಗೆ ಮಾತ್ರವೇ ಪಕ್ಷದ ಬೆಂಬಲ ಸಿಗುತ್ತದೆ. ದುರ್ಬಲ ಪ್ರತಿನಿಧಿಗಳು ಇರುವ ಕಡೆ ಅಭ್ಯರ್ಥಿಗಳನ್ನು ಬದಲಿಸಲಾಗುತ್ತದೆ. ಇದು ಹಿಂದಿನಿಂದಲೂ ನಡೆದು ಬಂದಿರುವ ಪದ್ಧತಿ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿದರು. ಗೆಲ್ಲುವ ಸಾಮರ್ಥ್ಯ ಇರುವವರನ್ನು ಪಕ್ಷ ಬೆಂಬಲಿಸುತ್ತದೆ. ಸಾಮರ್ಥ್ಯ ಇದ್ದವರು ಎಲ್ಲೇ ಇದ್ದರೂ ಯಶಸ್ವಿಯಾಗುತ್ತಾರೆ. ಕರ್ನಾಟಕಕ್ಕೆ ಕರ್ನಾಟಕವೇ ಮಾದರಿ. ನಮಗೆ ಗುಜರಾತ್ ಅಥವಾ ಪಂಜಾಬ್ ಮಾದರಿ ಆಗುವುದಿಲ್ಲ ಎಂದರು.
"The biggest strength for the BJP is its ability to change leadership," BJP national unit organizing general secretary BL Santosh said.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm