ಬ್ರೇಕಿಂಗ್ ನ್ಯೂಸ್
02-05-22 01:14 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಆಗಿರುವುದು ಕಲಬುರಗಿ ಜಿಲ್ಲೆಯಲ್ಲಿ ಮಾತ್ರವಲ್ಲ. ಈಗ ಅಕ್ರಮ ಜಾಲದ ಬೇರು ಬೆಂಗಳೂರಿಗೂ ಹರಡಿಕೊಂಡಿದ್ದು ಪರೀಕ್ಷೆ ಬರೆದ 22 ಅಭ್ಯರ್ಥಿಗಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಿಐಡಿ ಅಧಿಕಾರಿಗಳು ಅಕ್ರಮದ ಜಾಡು ಹಿಡಿದು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳ ಮೇಲೂ ನಿಗಾ ಇಟ್ಟಿದ್ದು ಪರೀಕ್ಷೆ ಬರೆದು ಪಾಸ್ ಆಗಿರುವ ಅಭ್ಯರ್ಥಿಗಳನ್ನು ತನಿಖೆ ನಡೆಸುತ್ತಿದ್ದಾರೆ. ತಪಾಸಣೆ ವೇಳೆ ಕೆಲವು ಅಭ್ಯರ್ಥಿಗಳ ಕಳ್ಳಾಟ ಪತ್ತೆಯಾಗಿದ್ದು ಓಎಂಆರ್ ಶೀಟ್ ಮತ್ತು ಓಎಂಆರ್ ಕಾರ್ಬನ್ ಶೀಟ್ ನಲ್ಲಿ ವ್ಯತ್ಯಾಸ ಕಂಡುಬಂದಿರುವುದು ಸಂಶಯಕ್ಕೆ ಕಾರಣವಾಗಿದೆ. ಹೀಗಾಗಿ ತನಿಖೆಗೊಳಗಾದ 172 ಅಭ್ಯರ್ಥಿಗಳ ಪೈಕಿ 22 ಅಭ್ಯರ್ಥಿಗಳ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಿಐಡಿ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕಲಬುರಗಿ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿದ್ದ ಸಿಐಡಿ ತಂಡವು ಬೆಂಗಳೂರು ನಗರದಲ್ಲಿ ಅಯ್ಕೆಯಾದ 172 ಮಂದಿಗೆ ನೋಟಿಸ್ ನೀಡಿತ್ತು. ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಹಾಲ್ ಟಿಕೆಟ್, ಓಎಂಆರ್ ಕಾರ್ಬನ್ ಶೀಟ್ ಹಾಜರು ಪಡಿಸಲು ನೋಟಿಸ್ ಸೂಚಿಸಲಾಗಿತ್ತು. ನಾಲ್ಕು ಅಭ್ಯರ್ಥಿಗಳನ್ನ ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ವಿಚಾರಣೆಗೆ ಹಾಜರಾಗಿದ್ದರು. ತಪಾಸಣೆ ವೇಳೆ ಅಭ್ಯರ್ಥಿಗಳ ಓಎಂಆರ್ ಶೀಟ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಎಫ್ಎಸ್ಎಲ್ ತಪಾಸಣೆಗೆ ರವಾನಿಸಿದ್ದರು. ಏಪ್ರಿಲ್ 28 ರಂದು ಎಫ್ಎಸ್ಎಲ್ ರಿಪೋರ್ಟ್ ಸಿಐಡಿ ತನಿಖಾ ತಂಡಕ್ಕೆ ಸಲ್ಲಿಕೆಯಾಗಿದ್ದು ವರದಿಯಲ್ಲಿ 22 ಅಭ್ಯರ್ಥಿಗಳ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್ ನಲ್ಲಿ ವ್ಯತ್ಯಾಸ ಕಂಡುಬಂದಿದೆ. 22 ಅಭ್ಯರ್ಥಿಗಳಲ್ಲಿ 9 ಮಂದಿಯನ್ನು ಸಿಐಡಿ ಅಧಿಕಾರಿಗಳು ಏಪ್ರಿಲ್ 29 ರಂದು ವಿಚಾರಣೆಗೆ ಕರೆಸಿದ್ದರು. ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್ ನಡುವೆ ವ್ಯತ್ಯಾಸ ಇರುವ ಬಗ್ಗೆ ವಿಚಾರಣೆ ನಡೆಸಿದಾಗ ಸರಿಯಾದ ಉತ್ತರ ನೀಡದೆ ನುಣುಚಿಕೊಳ್ಳುವ ಯತ್ನ ಮಾಡಿದ್ದಾರೆ. ಇದರಿಂದಾಗಿ ಒಂಬತ್ತು ಅಭ್ಯರ್ಥಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉಳಿದ ಅಭ್ಯರ್ಥಿಗಳ ಬಗ್ಗೆಯೂ ಸಿಐಡಿ ವಿಭಾಗದ ಒಂದು ತಂಡ ತನಿಖೆ ಕೈಗೊಂಡಿದೆ.
ಹೀಗಾಗಿ ಕಲಬುರಗಿಯ ಬಳಿಕ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ 172 ಮಂದಿ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದು ಈ ಪೈಕಿ ಎಷ್ಟು ಮಂದಿ ಅಕ್ರಮದ ಮೂಲಕ ನೇಮಕಾತಿ ಮಾಡಿಕೊಂಡಿದ್ದಾರೆ, ಎಷ್ಟು ಲಕ್ಷ ರೂಪಾಯಿ ಯಾರಿಗೆಲ್ಲ ನೀಡಿದ್ದಾರೆ, ಯಾರೆಲ್ಲ ಕಿಂಗ್ ಪಿನ್ ಭಾಗಿಯಾಗಿದ್ದಾರೆ ಎಂಬ ಬಗ್ಗೆ ತನಿಖೆಗೆ ತಂಡ ಮುಂದಾಗಿದೆ. ಇಲ್ಲಿ ವರೆಗೂ ಕಲಬುರಗಿಗ ಕೇಂದ್ರಿತವಾಗಿದ್ದ ಅಕ್ರಮದ ತನಿಖೆ ಈಗ ಬೆಂಗಳೂರಿಗೂ ವಿಸ್ತರಣೆಯಾಗಿದೆ.
Just days after investigators hinted at the police sub-inspector (PSI) recruitment scam having occurred in examination centres even outside Kalaburagi, 12 people who had cracked the now-annulled exam were arrested in Bengaluru on Saturday. The suspects were produced before a local court which has remanded them in a 10-day police custody.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 01:23 pm
HK News Desk
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm