ಬ್ರೇಕಿಂಗ್ ನ್ಯೂಸ್
20-05-22 02:13 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ವಿದೇಶದ ಸಂಸತ್ತಿನಲ್ಲಿ ಇದೇ ಮೊದಲ ಬಾರಿಗೆ ಕನ್ನಡದ ಡಿಂಡಿಮ ಮೊಳಗಿದೆ. ಉತ್ತರ ಅಮೆರಿಕಾದ ಕೆನಡಾದ ಸಂಸತ್ತಿನಲ್ಲಿ ಕರ್ನಾಟಕ ಮೂಲದ ಸಂಸದರೊಬ್ಬರು ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ನಿವಾಸಿ ಚಂದ್ರ ಆರ್ಯ ಎಂಬವರು 2019ರಲ್ಲಿ ಕೆನಡಾ ದೇಶದ ನೇಪಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರು ಲಿಬರಲ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ತಾವು ಸಂಸತ್ತಿನಲ್ಲಿ ಕನ್ನಡದಲ್ಲಿ ನಾಲ್ಕು ವಾಕ್ಯಗಳನ್ನು ಮಾತನಾಡಿ ತನ್ನ ಮಾತೃಭಾಷೆಯೆಂದು ಹೇಳಿ ಭಾಷಾ ಪ್ರೇಮ ಮೆರೆದಿದ್ದಾರೆ.
ಚಂದ್ರ ಆರ್ಯ ದ್ವಾರಾಳು ಗ್ರಾಮದ ಕೆ.ಗೋವಿಂದಯ್ಯ ಮತ್ತು ಜಯಮ್ಮ ದಂಪತಿ ಪುತ್ರನಾಗಿದ್ದು ರಾಮನಗರದ ಗೌಸಿಯಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದರು. ಬಳಿಕ ಧಾರವಾಡದಲ್ಲಿ ಎಂಬಿಎ ಶಿಕ್ಷಣ ಪೂರೈಸಿದ್ದರು. ಆನಂತರ ಕೆನಡಾದಲ್ಲಿ ಉದ್ಯೋಗ ಕಂಡುಕೊಂಡು ಅಲ್ಲಿಯೇ ನೆಲೆಸಿದ್ದರು.
ಈ ಬಗ್ಗೆ ಚಂದ್ರ ಆರ್ಯ ಟ್ವೀಟ್ ಮಾಡಿದ್ದು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಅವರು ಬರೆದುಕೊಂಡಿದ್ದು ವಿಡಿಯೊ ತುಣುಕನ್ನು ಹಂಚಿಕೊಂಡಿದ್ದಾರೆ.
Canada MP Chandra Arya became the first to speak Kannada in a Parliament outside India. While addressing the house, he said in his native language, "Elladaru iru enthadaru iru endendigu nee Kannadavaagiru", which roughly translates to wherever you are, however you are, be a Kannadiga forever."I spoke in my mother tongue (first language) Kannada in Canadian parliament. This beautiful language has long history and is spoken by about 50 million people.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm