ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm