ಬ್ರೇಕಿಂಗ್ ನ್ಯೂಸ್
08-06-22 01:55 pm HK News Desk ದೇಶ - ವಿದೇಶ
ನವದೆಹಲಿ, ಜೂ 08: ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ದ್ವೈಮಾಸಿಕ ಸಾಲ ನೀತಿಯನ್ನು ಪ್ರಕಟಿಸಿದ್ದು, ಸಾಲದ ಮೇಲಿನ ಬಡ್ಡಿ ದರವನ್ನು 50 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳ ಮಾಡಿದೆ. ಇದರೊಂದಿಗೆ ಕಾರ್ಪೋರೇಟ್ ಮತ್ತು ಗೃಹ ಸಾಲ ಪಡೆದವರಿಗೆ ಇನ್ನಷ್ಟು ಹೊರೆಯಾದಂತಾಗಿದೆ.
ಆರ್ ಬಿಐ ಪ್ರಕಟಿಸಿರುವ ಸಾಲ ನೀತಿಯಲ್ಲಿ ರೆಪೋ ದರವನ್ನು ಶೇ.4.90ಕ್ಕೆ ಏರಿಕೆ ಮಾಡಿದೆ. ಕಳೆದ ತಿಂಗಳು ಕೂಡಾ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 40 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳ ಮಾಡುವ ಮೂಲಕ ಶೇ.4.40ರಷ್ಟು ಏರಿಕೆ ಮಾಡಿತ್ತು. ಇದರೊಂದಿಗೆ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರೆಪೋ ದರವನ್ನು ಹೆಚ್ಚಳ ಮಾಡಿದಂತಾಗಿತ್ತು. ಇದೀಗ ಎರಡನೇ ಬಾರಿಯೂ ರೆಪೋ ದರವನ್ನು ಹೆಚ್ಚಳ ಮಾಡಿರುವುದು ಇಎಂಐ ಕಟ್ಟುವವರಿಗೆ ಹೆಚ್ಚಿನ ಹೊರೆಯಾದಂತಾಗಿದೆ.
ಬುಧವಾರ ರೆಪೋ ದರವನ್ನು ಶೇ.4.90ರಷ್ಟು ಹೆಚ್ಚಳ ಮಾಡಿದ್ದರಿಂದ ಗೃಹ ಮತ್ತು ಇತರ ಸಾಲಗಳ ಮಾಸಿಕ ಕಂತಿನಲ್ಲಿ ಮತ್ತಷ್ಟು ಏರಿಕೆಯಾಗಲಿದೆ. ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದ ಹಣಕಾಸು ನೀತಿ ಸಮಿತಿಯು ಸೋಮವಾರದಿಂದ ತನ್ನ ಮೂರು ದಿನಗಳ ಸಭೆಯ ಆರಂಭಿಸಿದ್ದು, ಬುಧವಾರ ಆರ್ ಬಿಐ ತನ್ನ ನಿರ್ಧಾರವನ್ನು ಪ್ರಕಟಿಸಿದೆ.
ಚಿಲ್ಲರೆ ಹಣದುಬ್ಬರ ಪ್ರಮಾಣವು ಹಲವು ಸಮಯಗಳಿಂದ ನಿರ್ವಹಣೆ ಮಾಡಬಹುದು ಎಂದು ಅಂದಾಜಿಸಲಾಗಿದ್ದ ಶೇ.6ರ ಆಸುಪಾಸಿನಲ್ಲಿ ಇತ್ತು. ಆದರೆ ಕಳೆದ ಏಪ್ರಿಲ್ ನಲ್ಲಿ ಅದು ಶೇ.7.79ಕ್ಕೆ ತಲುಪುವ ಮೂಲಕ 8ವರ್ಷದ ಗರಿಷ್ಠ ಮಟ್ಟ ಮುಟ್ಟಿತ್ತು. ಈ ಹಿನ್ನೆಲೆಯಲ್ಲಿ ಆರ್ ಬಿಐ ಆರ್ಥಿಕ ನೀತಿಯ ಮೂಲಕ ಹಣದುಬ್ಬರ ನಿಯಂತ್ರಣಕ್ಕೆ ಮುಂದಾಗಿದೆ ಎಂದು ವರದಿ ವಿವರಿಸಿದೆ.
ಏನಿದು ರೆಪೋ ದರ?
ವಾಣಿಜ್ಯ ಬ್ಯಾಂಕುಗಳಿಗೆ (Commercial banks) ಹಣದ ಕೊರತೆ ಎದುರಾದಾಗ ಅವು ಆರ್ ಬಿಐಯಿಂದ ಪಡೆಯೋ ಸಾಲದ (Loan) ಮೇಲೆ ವಿಧಿಸೋ ಬಡ್ಡಿದರವೇ ರೆಪೋ ದರ. ಆರ್ ಬಿಐ ನಿರ್ದಿಷ್ಟ ದರದಲ್ಲಿ ಈ ಬ್ಯಾಂಕುಗಳಿಗೆ ಸಾಲ ನೀಡುತ್ತದೆ. ರೆಪೋ ದರ ದೇಶದಲ್ಲಿನ ಹಣದುಬ್ಬರ ನಿಯಂತ್ರಣಕ್ಕೆ ಆರ್ ಬಿಐ ಬಳಸುವ ಅತೀಮುಖ್ಯ ಸಾಧನವಾಗಿದೆ. ಉದಾಹರಣೆಗೆ ಆರ್ ಬಿಐ ರೆಪೋ ದರ ಇಳಿಕೆ ಮಾಡಿದ್ರೆ ಬ್ಯಾಂಕುಗಳು ಕಡಿಮೆ ಬಡ್ಡಿದರದಲ್ಲಿ ಸಾಲಗಳನ್ನು ನೀಡುತ್ತವೆ. ಇದ್ರಿಂದ ಆರ್ಥಿಕತೆಯಲ್ಲಿ ಹಣದ ಹರಿವು ಹೆಚ್ಚುತ್ತದೆ. ಅದೇ ರೆಪೋ ದರದಲ್ಲಿ ಏರಿಕೆ ಮಾಡಿದ್ರೆ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿದರ ಹೆಚ್ಚಿಸುತ್ತವೆ. ಹೀಗಾಗಿ ಹಣದುಬ್ಬರ ಏರಿಕೆಯಾಗಿರುವ ಸಮಯದಲ್ಲಿ ಆರ್ ಬಿಐ ರೆಪೋ ದರವನ್ನು ಹೆಚ್ಚಿಸುತ್ತದೆ, ಇದ್ರಿಂದ ಸಹಜವಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿದರ ಹೆಚ್ಚಿಸುತ್ತವೆ. ಇದ್ರಿಂದ ಆರ್ಥಿಕತೆಗೆ ಹಣದ ಹರಿವು ತಗ್ಗುತ್ತದೆ. ಆ ಮೂಲಕ ಹಣದುಬ್ಬರ ನಿಯಂತ್ರಣಕ್ಕೆ ಬರುತ್ತದೆ. ಸರಳವಾಗಿ ಹೇಳಬೇಕೆಂದ್ರೆ ರೆಪೋ ದರ ಹೆಚ್ಚಳವಾದ್ರೆ ಹಣದುಬ್ಬರ ತಗ್ಗುತ್ತದೆ. ಅದೇ ರೆಪೋ ದರ ಇಳಿಕೆಯಾದ್ರೆ ಹಣದುಬ್ಬರ ಏರಿಕೆಯಾಗುತ್ತದೆ.
ಸಾಲಗಳ ಬಡ್ಡಿದರ ಹೆಚ್ಚಳ;
ರೆಪೋ ದರ ಏರಿಕೆಯಿಂದ ಬ್ಯಾಂಕುಗಳು ಸಾಲಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಲಿವೆ. ಹೀಗಾಗಿ ಗೃಹಸಾಲಗಳು , ವಾಹನಸಾಲಗಳು ಸೇರಿದಂತೆ ಎಲ್ಲ ವಿಧದ ಸಾಲಗಳ ಬಡ್ಡಿದರ ಹೆಚ್ಚಳವಾಗಲಿದೆ. ಈಗಾಗಲೇ ಗೃಹ, ವಾಹನ ಸಾಲಗಳ ಮೇಲಿನ ಬಡ್ಡಿದರವನ್ನು ಬ್ಯಾಂಕುಗಳು ಒಮ್ಮೆ ಹೆಚ್ಚಳ ಮಾಡಿ ಆಗಿದೆ. ಈಗ ಇನ್ನೊಮ್ಮೆ ಹೆಚ್ಚಳ ಮಾಡಲಿದ್ದು, ಸಾಲ ಪಡೆದವರ ಮೇಲಿನ ಹೊರೆ ಹೆಚ್ಚಿದೆ.
ಬಡ್ಡಿದರ ಏರಿಕೆಗೆ ಕಾರಣವೇನು?
ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮ ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಏರಿಕೆಯಾಗಿದೆ ಎಂದು ಆರ್ ಬಿಐ ಗರ್ವನರ್ ತಿಳಿಸಿದ್ದಾರೆ. ಇನ್ನು ದೇಶದಲ್ಲಿ ಚಿಲ್ಲರೆ ಹಣದುಬ್ಬರ ಆರ್ ಬಿಐ ನಿಗದಿಪಡಿಸಿರುವ ಸಹನಾ ಮಟ್ಟವನ್ನು ಮೀರಿದೆ. ಕಳೆದ ಏಪ್ರಿಲ್ನಲ್ಲಿ ಅದು ಶೇ.7.79ಕ್ಕೆ ತಲುಪುವ ಮೂಲಕ 8 ವರ್ಷದ ಗರಿಷ್ಠ ಮಟ್ಟಮುಟ್ಟಿತ್ತು. ಕೇಂದ್ರ ಸರ್ಕಾರವು ಆರ್ಬಿಐಗೆ ಹಣದುಬ್ಬರ ಪ್ರಮಾಣವನ್ನು ಶೇ.4ರಲ್ಲಿ ಕಾಪಾಡುವಂತೆ ಸೂಚಿಸಿದೆ. ಆದರೂ ಶೇ.2ರಷ್ಟುಏರುಪೇರಿಗೆ ಅವಕಾಶ ಕಲ್ಪಿಸಿದೆ. ಆದರೆ ಇದೀಗ ಆ ಮಿತಿಯೂ ಮೀರಿರುವ ಹಿನ್ನೆಲೆಯಲ್ಲಿ ಆರ್ಬಿಐ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
The Reserve Bank of India (RBI) on Tuesday hiked the benchmark lending rate by 50 basis points as inflation continues to remain above its comfort level. One basis point is one-hundredth of a percentage point. Accordingly, the repo rate now stands at 4.90 per cent. Addressing the media, RBI Governor Shaktikanta Das informed that all the six members of the Monetary Policy Committee (MPC) unanimously voted for the latest rate hike, adding that repo rate remains below the pre-pandemic level.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm