ಬ್ರೇಕಿಂಗ್ ನ್ಯೂಸ್
17-06-22 06:07 pm HK News Desk ದೇಶ - ವಿದೇಶ
ಕೊಲೊಂಬೊ, ಜೂ 17: ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೀಗ ಪೆಟ್ರೋಲ್, ಡೀಸೆಲ್ ಅಭಾವದಿಂದಾಗಿ, ಸಾರಿಗೆ ವ್ಯವಸ್ಥೆ ಸ್ಥಗಿತಗೊಳ್ಳುವಂತಾಗಿದೆ. ಅಲ್ಲದೇ ಶ್ರೀಲಂಕಾಕ್ಕೆ ಇಂಧನ ಸರಬರಾಜಾಗುವ ಲಕ್ಷಣ ಕಡಿಮೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಪೆಟ್ರೋಲ್, ಡೀಸೆಲ್ ಅಭಾವದ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರ ಶುಕ್ರವಾರ ಸರ್ಕಾರಿ ಕಚೇರಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿದೆ. ಇದರಿಂದಾಗಿ ರಾಜಧಾನಿ ಕೊಲಂಬೊ ಮತ್ತು ಸುತ್ತಮುತ್ತಲಿನ ಪ್ರದೇಶಗಳು ನಿರ್ಜನವಾಗಿದೆ.
ಮತ್ತೊಂದೆಡೆ ಇಂಧನಕ್ಕಾಗಿ ಕಿಲೋ ಮೀಟರ್ ಗಳಷ್ಟು ದೂರ ವಾಹನಗಳು ಮತ್ತು ಚಾಲಕರು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ಕಂಡು ಬಂದಿರುವುದಾಗಿ ವರದಿ ವಿವರಿಸಿದೆ.
"ಸರ್ಕಾರಿ ಸ್ವಾಮ್ಯದ ಸಿಲೋನ್ ಪೆಟ್ರೋಲಿಯಂ ಕಾರ್ಪೋರೇಶನ್ ಇಂಧನ ದಾಸ್ತಾನು ಮಾಡಿಕೊಳ್ಳುವ ಬಗ್ಗೆ ಟೆಂಡರ್ ಅನ್ನು ಪಡೆದಿಲ್ಲ. ಇದಕ್ಕೆ ಕಾರಣ ಹಿಂದಿನ ಬಾಕಿ ಪಾವತಿ ಮಾಡದಿರುವುದಕ್ಕೆ ಇಂಧನ ಸರಬರಾಜು ತಡೆ ಹಿಡಿದಿರುವುದಾಗಿ ಶ್ರೀಲಂಕಾದ ವಿದ್ಯುತ್ ಮತ್ತು ಇಂಧನ ಸಚಿವ ಕಾಂಚನ ವಿಜೆಶೇಖರ ತಿಳಿಸಿದ್ದಾರೆ.
ಇಂಧನ ಆಮದು ಮಾಡಿಕೊಳ್ಳಲು ಭಾರತದ ಸರ್ಕಾರದ 500 ಮಿಲಿಯನ್ ಡಾಲರ್ ಸಾಲದ ನಿರೀಕ್ಷೆಯಲ್ಲಿರುವುದಾಗಿ ಶ್ರೀಲಂಕಾ ಸರ್ಕಾರ ಹೇಳಿದೆ. ಶ್ರೀಲಂಕಾದ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಇದು ದ್ವೀಪರಾಷ್ಟ್ರದ ಇತಿಹಾಸದ ಕರಾಳ ದಿನಗಳಾಗಿದೆ ಎಂದು ವರದಿ ತಿಳಿಸಿದೆ.
ಪ್ರಧಾನಿ ರನಿಲ್ ವಿಕ್ರಮಸಿಂಘೆ ಪ್ರಕಾರ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ಭಾರತ, ಚೀನಾ ಸೇರಿದಂತೆ ಅಂದಾಜು 6 ಬಿಲಿಯನ್ ಡಾಲರ್ ಶತಕೋಟಿ ಮೊತ್ತದ ನೆರವಿನ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು, ರಾಜಕೀಯ ಅಸ್ಥಿರತೆಯಿಂದ ಕಂಗೆಟ್ಟಿರುವ ಜನರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನರು ಪರದಾಡುವಂತಾಗಿದೆ ಎಂದು ಬ್ಲೂಮ್ ಬರ್ಗ್ ಎಕಾನಾಮಿಕ್ಸ್ ತಿಳಿಸಿದೆ.
With economic activity coming to near halt in Sri Lanka, the government on Friday declared a holiday to stop vehicular movement in a bid to save fuel, news agency Bloomberg said in a report.The decision from the Ranil Wickremesinghe-led government came after government fuel deposits ran out of stock with chances of fresh supplies unlikely.Following the announcement, streets around the capital city of Colombo were deserted. Queues of thousands of vehicles stretching for dozens of miles were seen outside petrol stations as they waited for them to be refilled.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm