ಬ್ರೇಕಿಂಗ್ ನ್ಯೂಸ್
21-06-22 10:06 pm HK News Desk ದೇಶ - ವಿದೇಶ
ನವದೆಹಲಿ, ಜೂ 21: ರಾಹುಲ್ ಗಾಂಧಿ ಅವರ ವಿಚಾರಣೆಗೆ ಸಂಬಂಧಿಸಿದ ಮಾಹಿತಿಯನ್ನು ಕೆಲವು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ದೇಶಾದ್ಯಂತ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯ ವೇಳೆ ಕೆಲ ಮುಖಂಡು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವಾರ ಕಾಂಗ್ರೆಸ್ ಮಹಿಳಾ ನಾಯಕಿ ರೇಣುಕಾ ಚೌಧರಿ ಅವರು ಪಿಎಸ್ಐ ಅಧಿಕಾರಿಯ ಕೊರಳಪಟ್ಟಿ ಹಿಡಿದು ಎಳೆದಾಡಿದ್ದರು, ಮಹಿಳಾ ಪೊಲೀಸರ ಮೇಲೂ ತಮ್ಮ ದರ್ಪ ಮೆರೆದಿದ್ದರು. ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಭದ್ರತೆಗೆ ನಿಯೋಜಿಸಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಉಗುಳಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಡಿಸೋಜಾ ಪೊಲೀಸರ ಮೇಲೆ ಉಗುಳಿ ಎಲ್ಲರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಬ್ಯಾರಿಕೇಡ್ ತಳ್ಳಿ ಪೊಲೀಸರ ಮೇಲೆ ನೂಕಾಟ ತಳ್ಳಾಟ ನಡೆಸಿದ್ದಾರೆ. ಇದರಿಂದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ನೆಟ್ಟಾ ಡಿಸೋಜಾ ಅವರನ್ನು ವಶಕ್ಕೆ ಪಡೆದ ಪೊಲೀಸರು ವಾಹನದೊಳಕ್ಕೆ ಕೂಡಿ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನೆಟ್ಟಾ ಡಿಸೋಜಾ ಮಹಿಳಾ ಪೊಲೀಸರ ಮೇಲೆ ಉಗುಳಿದ್ದಾರೆ.
ಹಿನ್ನೆಲೆ ಏನು?
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಿಲುಕಿರುವ ಎಐಸಿಸಿ ಮಾಜಿ ಅಧ್ಯಕ್ಷ ಸಂಸದ ರಾಹುಲ್ ಗಾಂಧಿ ಕಳೆದ ಸೋಮವಾರದಿಂದ ನಿರಂತರ ಇಡಿ ವಿಚಾರಣೆ ಎದುರಿಸುತ್ತಿದ್ದರು. 30 ಗಂಟೆಗಳ ವಿಚಾರಣೆಯಲ್ಲಿ ಸುಮಾರು 16 ಪ್ರಶ್ನೆಗಳಿಗೆ 70 ಪುಟಗಳ ಹೇಳಿಕೆ ದಾಖಲು ಮಾಡಿದ್ದರು. ಇಂದೂ ಸಹ ಇಡಿ ವಿಚಾರಣೆಗೆ ಹಾಜರಾಗಿದ್ದರು.
ಈ ನಡುವೆ ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಲು ಸನ್ನದ್ಧವಾಗಿದೆ. ಕಳೆದ ವಾರವೂ ಉಗ್ರ ಹೋರಾಟ ಮಾಡಿದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಲು ಸಿದ್ಧವಾಗಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಎಐಸಿಸಿ ಮತ್ತು ಇಡಿ ಕಚೇರಿಯ ಸುತ್ತ 144 ಸೆಕ್ಷನ್ ಜಾರಿ ಮಾಡಿದ್ದು ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.
ರಾಹುಲ್ ಗಾಂಧಿ ಅವರ ವಿಚಾರಣೆಗೆ ಸಂಬಂಧಿಸಿದ ಮಾಹಿತಿಯನ್ನು ಕೆಲವು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
Shameful & Disgusting
— Shehzad Jai Hind (@Shehzad_Ind) June 21, 2022
After beating up cops in Assam, holding their collar on Hyderabad now Mahila Congress President Netta Dsouza spits at cops & women security personnel merely because Rahul is being questioned by ED for corruption
Will Sonia,Priyanka & Rahul act on her? https://t.co/IP1gKibMR9 pic.twitter.com/F2pSSGx1jw
Days after senior Congress leader Renuka Chowdhury courted controversy when she grabbed a police officer by his collar, another party leader, Mahila Congress acting president Netta D'Souza, was on Tuesday caught on camera spitting at security personnel as the party continued its protest against the Enforcement Directorate (ED) for questioning former Congress president Rahul Gandhi in the National Herald case.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm