ಬ್ರೇಕಿಂಗ್ ನ್ಯೂಸ್
22-06-22 09:41 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 22: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್ಗಳ ಒಕ್ಕೂಟಕ್ಕೆ 34,615 ಕೋಟಿ ರುಪಾಯಿ ವಂಚಿಸಿದ ಆರೋಪದ ಮೇಲೆ ದಿವಾನ್ ಹೌಸಿಂಗ್ ಅಂಡ್ ಫೈನಾನ್ಸ್ ಲಿಮಿಟೆಡ್ನ (ಡಿಎಚ್ಎಫ್ಎಲ್) ಕಪಿಲ್ ಮತ್ತು ಧೀರಜ್ ವಾಧವನ್ ಅವರ ವಿರುದ್ಧ ಪ್ರಕರಣ ದಾಖಲಾದ ನಂತರ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಬುಧವಾರ ಮುಂಬೈನ 12 ಸ್ಥಳಗಳಲ್ಲಿ ದಾಳಿ ನಡೆಸಿದ್ದು ಇದು ದೇಶದ ಅತಿ ದೊಡ್ಡ ಬ್ಯಾಂಕ್ ವಂಚನೆ ಕೇಸ್ ಎಂದು ಸಿಬಿಐ ತಿಳಿಸಿದೆ.
ಸೋಮವಾರ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ ನಂತರ ಮಾಲಕ ವಾಧವಾನ್ಗಳ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಎಫ್ಐಆರ್ನಲ್ಲಿ, ಡಿಎಚ್ಎಫ್ಎಲ್ನ ಪ್ರವರ್ತಕರು ಸಾರ್ವಜನಿಕ ಅಧಿಕಾರಿಗಳು ಸೇರಿದಂತೆ ಇತರರೊಂದಿಗೆ ಪಿತೂರಿ ನಡೆಸಿದ್ದಾರೆ ಮತ್ತು 2010 ಮತ್ತು 2018 ರ ನಡುವೆ 42,871 ಕೋಟಿ ರುಪಾಯಿ ಸಾಲ ಮಂಜೂರು ಮಾಡಲು ಬ್ಯಾಂಕ್ಗನ್ನು ಪ್ರೇರೇಪಿಸಿದ್ದಾರೆ ಎಂದು ಹೇಳಲಾಗಿದೆ.
ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (DHFL) ಸಂಸ್ಥೆಯ ಅಂದಿನ ಸಿಎಂಡಿ ಕಪಿಲ್ ವಾಧವಾನ್, ನಿರ್ದೇಶಕರಾದ ಧೀರಜ್ ವಾಧವನ್, ಸೇರಿದಂತೆ 6ಕ್ಕೂ ಅಧಿಕ ರಿಯಲ್ ಎಸ್ಟೇಟ್ ಸಂಸ್ಥೆಗಳ ಮೇಲೆ ಕ್ರಿಮಿನಲ್ ಸಂಚು ಆರೋಪ ಹೊರೆಸಲಾಗಿದ್ದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸಮೂಹ ಸಂಸ್ಥೆಗೆ ಮಾಡಿರುವ ವಂಚನೆ ಮೊತ್ತ 34,165 ಕೋಟಿ ರುಪಾಯಿ ಮೀರುತ್ತದೆ ಎಂದು ಸಿಬಿಐ ಮೂಲಗಳು ತಿಳಿಸಿದೆ.
ಹಲವು ಬ್ಯಾಂಕ್ಗಳಿಗೆ ವಂಚನೆ ;
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಅತಿ ಹೆಚ್ಚು ಅಂದರೆ 9898 ಕೋಟಿ ರುಪಾಯಿ ವಂಚನೆಯಾಗಿದೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ, ನಂತರದ ಸ್ಥಾನದಲ್ಲಿ ಬ್ಯಾಂಕ್ ಆಫ್ ಇಂಡಿಯಾ (4,044 ಕೋಟಿ ರು), ಕೆನರಾ ಬ್ಯಾಂಕ್ (4,022 ಕೋಟಿ ರು), ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (3,813 ಕೋಟಿ ರು), ಪಂಜಾಬ್ ನ್ಯಾಷನಲ್ ಬ್ಯಾಂಕ್ (3,802 ಕೋಟಿ ರು) ಮತ್ತು ಬ್ಯಾಂಕ್ ಆಫ್ ಬರೋಡಾ (2,036 ಕೋಟಿ ರು) ವಂಚನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರ, ಫೆಡರಲ್ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್ ಮತ್ತು ಯುಸಿಒ ಸೇರಿದಂತೆ ಇತರೆ ಕನ್ಸೋರ್ಟಿಯಂ ಬ್ಯಾಂಕ್ಗಳು 71 ಕೋಟಿಯಿಂದ 1,499 ಕೋಟಿ ರುಪಾಯಿ ವಂಚನೆಗೊಳಗಾಗಿವೆ.
The CBI has booked Dewan Housing Finance Ltd, its former CMD Kapil Wadhawan, director Dheeraj Wadhawan and others for bank fraud of Rs 34,615 crore, making it the biggest such case probed by the agency, officials said Wednesday.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm