ಬ್ರೇಕಿಂಗ್ ನ್ಯೂಸ್
06-07-22 10:57 am HK News Desk ದೇಶ - ವಿದೇಶ
ನವದೆಹಲಿ, ಜುಲೈ 6: ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಇಂದಿನಿಂದ 14.2 ಕೆಜಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50.ರೂ ಏರಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿವೆ.
ಬೆಂಗಳೂರಿನಲ್ಲಿ 14.2 ಕೆ.ಜಿ ತೂಕದ ಸಿಲಿಂಡರ್ ದರ ₹1,005.50 ರಷ್ಟಿತ್ತು. ಇನ್ನು ಮುಂದೆ ₹1055.50 ಆಗಲಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ದರ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಸಬ್ಸಿಡಿಯೇತರ ಎಲ್ಪಿಜಿ ಸಿಲಿಂಡರ್ ಬೆಲೆ ₹1,053ಕ್ಕೆ ತಲುಪಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ;
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವು ಜುಲೈ 6ರಿಂದ ಅನ್ವಯವಾಗುವಂತೆ ₹8.50ರಷ್ಟು ಕಡಿಮೆ ಆಗಿದೆ. 19 ಕೆ.ಜಿ. ತೂಕದ ಸಿಲಿಂಡರ್ ದರ ₹2,100ಕ್ಕೆ ತಗ್ಗಿದೆ.
ಈ ನಡುವೆ ಕಚ್ಚಾತೈಲ ಬೆಲೆ ಏರಿಳಿತ ಕಂಡಿದ್ದರೂ ಮೇ ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಲೆ ಬಹುತೇಕ ಸ್ಥಿರವಾಗಿದೆ.
ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15ನೇ ತಾರೀಕಿನ ಬಳಿಕ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
Cost of domestic liquid petroleum gas cylinders weighing 14.2 kilogram will get dearer from Wednesday as their prices have been raised by Rs 50 per unit.
In the national capital Delhi, it will now cost Rs 1,053 per unit.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm