ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.

ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.

ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm